AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ರಾಯಚೂರು, ಕೊಪ್ಪಳ ಸೇರಿದಂತೆ ಕರಾವಳಿಯಲ್ಲಿ ಹೆಚ್ಚಾಯ್ತು ಬಿಸಿಲ ಧಗೆ! 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

Karnataka Weather: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಶುಷ್ಕ ವಾತಾವರಣ ಕಂಡುಬರುತ್ತಿದ್ದು, ಅಲ್ಲಲ್ಲಿ ಸಾಧಾರಣ ಪ್ರಮಾಣದ ಮಳೆಯಾಗುತ್ತಿದೆ. ಇಂದೂ ಸಹ ಕರಾವಳಿಯ ಭಾಗಗಳಲ್ಲಿ ಉಷ್ಣ ಅಲೆಯ ಮುನ್ಸೂಚನೆಯಿದ್ದು, 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ. ಹೀಟ್ ವೇವ್​ನಿಂದ ತಪ್ಪಿಸಿಕೊಳ್ಳಲು ಯಾವೆಲ್ಲಾ ಮುಂಜಾಗೃತಾ ಕ್ರಮ ಕೈಗೊಳ್ಳಬೇಕೆಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕ ಹವಾಮಾನ ವರದಿ: ರಾಯಚೂರು, ಕೊಪ್ಪಳ ಸೇರಿದಂತೆ ಕರಾವಳಿಯಲ್ಲಿ ಹೆಚ್ಚಾಯ್ತು ಬಿಸಿಲ ಧಗೆ! 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ರಾಯಚೂರು, ಕೊಪ್ಪಳ ಸೇರಿದಂತೆ ಕರಾವಳಿಯಲ್ಲಿ ಹೆಚ್ಚಾಯ್ತು ಬಿಸಿಲ ಧಗೆ!
ಭಾವನಾ ಹೆಗಡೆ
|

Updated on: Apr 15, 2026 | 7:55 AM

Share

ಬೆಂಗಳೂರು, ಏಪ್ರಿಲ್ 15: ಬೆಂಗಳೂರು ಸೇರಿದಂತೆ ಇಂದು ಹಲವು ಜಿಲ್ಲೆಗಳಲ್ಲಿ ಶುಷ್ಕ  (Weather Forecast) ವಾತಾವರಣವಿರಲಿದ್ದು, ಕೆಲ ಜಿಲ್ಲೆಗಳಲ್ಲಿ ಇಂದೂ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ಇಂದು ತಾಪಮಾನ ಹೆಚ್ಚಳದ ಸಾಧ್ಯತೆಯಿದ್ದು, ಹೀಟ್ ವೇವ್ ಅಲರ್ಟ್​ ನೀಡಲಾಗಿದೆ. ಇನ್ನುಳಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆಯ ಜೊತೆಗೆ ಕೆಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. ಒಟ್ಟಾರೆ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ.

ಎಲ್ಲೆಲ್ಲಿ ಯೆಲ್ಲೋ ಅಲರ್ಟ್​?

ಯಾದಗಿರಿ, ರಾಯಚೂರು, ಕೊಪ್ಪಳ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉಷ್ಣ ಅಲೆ ಹೆಚ್ಚಾಗಿರಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಸೂಚಿಸಿದೆ.

ಎಲ್ಲೆಲ್ಲಿ ಹೀಟ್​ ವೇವ್, ಒಣ ಹವೆ?

ಕರಾವಳಿಯಲ್ಲಿಂದು ಬಿಸಿ ವಾತಾವರಣದ ಜೊತೆ ಒಣ ಹವೆಯೂ ಇರಲಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿಯೂ ಶುಷ್ಕ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಾಮರಾಜನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉಳಿದೆಡೆ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

ಉಷ್ಣಾಘಾತದಿಂದ ರಕ್ಷಣೆ ಹೇಗೆ?

ಉಷ್ಣ ಅಲೆ ಹಾಗೂ ಉಷ್ಣಾಘಾತದಿಂದ (ಹೀಟ್ ಸ್ಟ್ರೋಕ್) ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಕೆಲವು ಸಲಹೆ ಸೂಚನೆಗಳನ್ನು ನೀಡಿದೆ. ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ಸೂರ್ಯನ ಬೆಳಕಿಗೆ ನೇರ ಮೈಯೊಡ್ಡುವುದನ್ನು ಆದಷ್ಟು ತಪ್ಪಿಸಿ. ನಿಯಮಿತವಾಗಿ ನೀರು ಕುಡಿಯಿರಿ. ಎಳನೀರು, ಮಜ್ಜಿಗೆ ಅಥವಾ ಮನೆಯಲ್ಲಿ ತಯಾರಿಸಿದ ಹಣ್ಣಿನ ರಸಗಳನ್ನು ಸೇವಿಸಿ. ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಿ. ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿಯನ್ನು ಬಳಸಿ. ಕೆಫೀನ್ (ಕಾಫಿ/ಟೀ) ಮತ್ತು ಹೆಚ್ಚಿನ ಸಕ್ಕರೆಯುಕ್ತ ಪಾನೀಯಗಳ ಸೇವನೆ ಕಡಿಮೆ ಮಾಡಿ, ಇವು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?