AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ಕರಾವಳಿಗೆ ಅಪ್ಪಳಿಸಿದ ಉಷ್ಣ ಅಲೆ; ಮನೆಯಿಂದ ಹೊರ ಬರುವ ಮುನ್ನ ಎಚ್ಚರ!

Karnataka Weather: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಉಷ್ಣ ಅಲೆ ಕಂಡುಬರುತ್ತಿದ್ದು, ಅಲ್ಲಲ್ಲಿ ಸಾಧಾರಣ ಪ್ರಮಾಣದ ಮಳೆಯಾಗುತ್ತಿದೆ. ಇಂದೂ ಸಹ ಕರಾವಳಿಯ ಭಾಗಗಳಲ್ಲಿ ಉಷ್ಣ ಅಲೆಯ ಮುನ್ಸೂಚನೆಯಿದ್ದು, ಹೀಟ್ ವೇವ್​ನಿಂದ ತಪ್ಪಿಸಿಕೊಳ್ಳಲು ಯಾವೆಲ್ಲಾ ಮುಂಜಾಗೃತಾ ಕ್ರಮ ಕೈಗೊಳ್ಳಬೇಕೆಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕ ಹವಾಮಾನ ವರದಿ: ಕರಾವಳಿಗೆ ಅಪ್ಪಳಿಸಿದ ಉಷ್ಣ ಅಲೆ; ಮನೆಯಿಂದ ಹೊರ ಬರುವ ಮುನ್ನ ಎಚ್ಚರ!
ಕರಾವಳಿಗೆ ಅಪ್ಪಳಿಸಿದ ಉಷ್ಣ ಅಲೆImage Credit source: google Gemini
ಭಾವನಾ ಹೆಗಡೆ
|

Updated on: Apr 18, 2026 | 7:29 AM

Share

ಬೆಂಗಳೂರು, ಏಪ್ರಿಲ್ 18: ಬೇಸಿಗೆಗೆ ಕಾಲಿಡುವಷ್ಟರಲ್ಲೇ ರಾಜ್ಯದಾದ್ಯಂತ ಉಷ್ಣ ಅಲೆ (Karnataka Weather) ಆವರಿಸಿದೆ. ಬೆಂಗಳೂರು ಸೇರಿದಂತೆ ಹಲವೆಡೆ ತಾಪಮಾನ ಹೆಚ್ಚಾಗಿದ್ದು, ಮುಂದಿನ 2 ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದೆಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕವು ಬಿಸಿಲಿನ ಬೇಗೆ ತತ್ತರಿಸಿದ್ದು, ಮುಂಬರುವ ದಿನಗಳಲ್ಲಿ ಈ ಭಾಗಗಳ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು ನೀರು ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಕರಾವಳಿಯು ಬಿಸಿಲ ಬೇಗೆಯಲ್ಲಿ ಸುಡುತ್ತಿದೆ. ಉತ್ತರ ಕನ್ನಡದಲ್ಲಿ ಇಂದಿನ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇದ್ದು, ಇದು 42 ಡಿಗ್ರಿಗೂ ಏರಿಕೆಯಾಗಬಹುದು. ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿಯೂ ಹೆಚ್ಚಿನ ತಾಪಮಾನ ದಾಖಲಾಗಿದ್ದು, ಈ ನಡುವೆ ಸಾಧಾರಣ ಮಳೆಯಾಗುವ ಸಂಭವವೂ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ವಿಜಯಪುರ, ಕಲಬುರ್ಗಿ, ಬೀದರ್ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿಯೂ ಹೀಟ್ ವೇವ್ ಅಲರ್ಟ್​ ನೀಡಲಾಗಿದೆ.

ಉಷ್ಣಾಘಾತದಿಂದ ರಕ್ಷಣೆ ಹೇಗೆ?

ಮುಂಬರುವ ದಿನಗಳಲ್ಲಿ ರಾಜ್ಯದೆಲ್ಲೆಡೆ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಅವಶ್ಯಕತೆ ಇಲ್ಲದೆ ಮನೆಯಿಂದ ಹೊರಬರುವುದನ್ನು ತಪ್ಪಿಸುಂತೆ ಹೇಳಲಾಗಿದೆ. ಬೇಸಿಗೆ ರಜೆಯಲ್ಲಿ ಮಕ್ಕಳು ಬಿಸಿಲಲ್ಲಿ ಆಟವಾಡುವುದನ್ನು ಆದಷ್ಟು ನಿಯಂತ್ರಿಸುವಂತೆ ಸೂಚಿಸಲಾಗಿದೆ.

ಉಷ್ಣ ಅಲೆ ಹಾಗೂ ಉಷ್ಣಾಘಾತದಿಂದ (ಹೀಟ್ ಸ್ಟ್ರೋಕ್) ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಕೆಲವು ಸಲಹೆ ಸೂಚನೆಗಳನ್ನು ನೀಡಿದೆ. ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ಸೂರ್ಯನ ಬೆಳಕಿಗೆ ನೇರ ಮೈಯೊಡ್ಡುವುದನ್ನು ಆದಷ್ಟು ತಪ್ಪಿಸಿ. ನಿಯಮಿತವಾಗಿ ನೀರು ಕುಡಿಯಿರಿ. ಎಳನೀರು, ಮಜ್ಜಿಗೆ ಅಥವಾ ಮನೆಯಲ್ಲಿ ತಯಾರಿಸಿದ ಹಣ್ಣಿನ ರಸಗಳನ್ನು ಸೇವಿಸಿ. ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಿ. ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿಯನ್ನು ಬಳಸಿ. ಕೆಫೀನ್ (ಕಾಫಿ/ಟೀ) ಮತ್ತು ಹೆಚ್ಚಿನ ಸಕ್ಕರೆಯುಕ್ತ ಪಾನೀಯಗಳ ಸೇವನೆ ಕಡಿಮೆ ಮಾಡಿ, ಇವು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ.

ಇದನ್ನೂ ಓದಿ ಬಿಸಿಲ ಝಳದಿಂದ ತತ್ತರಿಸಿದ ಜನತೆ: ಇನ್ನೂ 3 ದಿನ ಉಷ್ಣ ಅಲೆ, ಬೆಂಗಳೂರಿಗೂ ತಟ್ಟಲಿದೆ ತಾಪಮಾನ ಏರಿಕೆ ಬಿಸಿ

ಎಲ್ಲೆಲ್ಲಿ ಒಣ ಹವೆ?

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿಯೂ ಶುಷ್ಕ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಾಮರಾಜನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉಳಿದೆಡೆ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ