Karnataka Weather Forecast: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಜಿಟಿಜಿಟಿ ಮಳೆ; ಕರಾವಳಿ, ಮಲೆನಾಡಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ

ಕರ್ನಾಟಕದಾದ್ಯಂತ ವಾಯುಭಾರ ಕುಸಿತದ ಪ್ರಭಾವದಿಂದಾಗಿ ಮುಂದಿನ ಕೆಲವು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಹಾಗೂ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಮತ್ತು ಬಿರುಗಾಳಿ ಸಹಿತ ಸಾಧಾರಣದಿಂದ ಭಾರಿ ಮಳೆಯಾಗಲಿದೆ. ನಾಳೆಯೂ ಕೂಡ ರಾಜ್ಯದ ಹಲವೆಡೆ ಮಳೆ ಮುಂದುವರಿಯಲಿದೆ.

Karnataka Weather Forecast: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಜಿಟಿಜಿಟಿ ಮಳೆ; ಕರಾವಳಿ, ಮಲೆನಾಡಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ
ಸಾಂದರ್ಭಿಕ ಚಿತ್ರ
Image Credit source: PTI

Updated on: Oct 18, 2026 | 8:52 AM

ಮುಖ್ಯಾಂಶಗಳು

  • ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ.
  • ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆಗೆ ತಂಪಾದ ಆಹ್ಲಾದಕರ ವಾತಾವರಣ.
  • ಕರಾವಳಿ ಮತ್ತು ಒಳನಾಡಿನ ಬಹುತೇಕ ಭಾಗಗಳಲ್ಲಿ ನಾಳೆಯೂ ಮಳೆ ಮುಂದುವರಿಕೆ.

ಬೆಂಗಳೂರು, ಅಕ್ಟೋಬರ್ 18: ರಾಜ್ಯಾದ್ಯಂತ ವಾಯುಭಾರ ಕುಸಿತ ಹಾಗೂ ಸುಳಿಗಾಳಿಯ ಪ್ರಭಾವದಿಂದಾಗಿ ವಿವಿಧ ಭಾಗಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣದೊಂದಿಗೆ ಮಳೆ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆಯಿಂದಲೇ ಜಿಟಿಜಿಟಿ ಮಳೆ ಆರಂಭವಾಗಿದ್ದು, ವಾತಾವರಣ ತಂಪಾಗಿದೆ. ಹದವಾದ ಮಳೆಯ ನಡುವೆಯೂ ಕೆ.ಆರ್. ಮಾರುಕಟ್ಟೆಯಲ್ಲಿ ಹೂವು ಹಾಗೂ ತರಕಾರಿ ಖರೀದಿಗಾಗಿ ಸಾರ್ವಜನಿಕರ ವ್ಯಾಪಾರ ವಹಿವಾಟು ಬಿರುಸಿನಿಂದ ಸಾಗಿದೆ.

ಕರಾವಳಿ ಮತ್ತು ಒಳನಾಡಿನ ಮಳೆ

    • ಕರಾವಳಿ ಕರ್ನಾಟಕ: ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
    • ಉತ್ತರ ಒಳನಾಡು: ಬೆಳಗಾವಿ, ಧಾರವಾಡ, ಗದಗ್, ಹಾವೇರಿ, ಬಾಗಲಕೋಟೆ, ಬೀದರ್, ಕೊಪ್ಪಳ, ಕಲ್ಬುರ್ಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ.
    • ದಕ್ಷಿಣ ಒಳನಾಡು: ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ ಹಾಗೂ ಗಾಳಿಯ ಮುನ್ಸೂಚನೆ ಇದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ಮಂಡ್ಯ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

YouTube video player

Loading...

ನಾಳೆ ಹೇಗಿದೆ ವಾತಾವರಣ?

ನಾಳೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆ ಮುಂದುವರಿಯಲಿದೆ. ಚಿಕ್ಕಮಗಳೂರು, ತುಮಕೂರು, ದಾವಣಗೆರೆ, ವಿಜಯನಗರ, ಬಳ್ಳಾರಿ, ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ (30-40 Kmph) ಹಾಗೂ ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಗ್ರಾಮಾಂತರ, ಕೊಡಗು, ಚಾಮರಾಜನಗರ, ರಾಮನಗರ, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:21 am, Sun, 18 October 26

ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
Loading...
Unable to load recommendations.
Follow Us