Karnataka Weather Forecast: ನಾಳೆಯಿಂದ ರಾಜ್ಯದಲ್ಲಿ ಮುಂದಿನ ಮೂರು ದಿನ ವರುಣದ್ದೇ ಹಾವಳಿ!

ಕರ್ನಾಟಕದಲ್ಲಿ ಮುಂಗಾರು ಚುರುಕಾಗಿದ್ದು, ಮುಂದಿನ 3 ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಮಲೆನಾಡು ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿ ಮತ್ತು ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

Karnataka Weather Forecast: ನಾಳೆಯಿಂದ ರಾಜ್ಯದಲ್ಲಿ ಮುಂದಿನ ಮೂರು ದಿನ ವರುಣದ್ದೇ ಹಾವಳಿ!
ಮುಂದಿನ ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಮುನ್ನೆಚ್ಚರಿಕೆ
Image Credit source: Getty Images

Updated on: Jun 13, 2026 | 5:32 PM

ಬೆಂಗಳೂರು, ಜೂನ್ 13: ನಗರದಲ್ಲಿ ಇಂದು ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಮಧ್ಯಾಹ್ನದ ಬಳಿಕ ಹಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗಿದೆ. ಅಂತೆಯೇ ಮುಂದಿನ 3 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯ (Weather) ಅಬ್ಬರ ಜೋರಾಗಿರಲಿದ್ದು, ಭಾರಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ. ಕರಾವಳಿ ಮತ್ತು ಮಲೆನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಖ್ಯಾಂಶಗಳು

  • ಮುಂದಿನ ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ.
  • ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
  • ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು ಮಧ್ಯಾಹ್ನದ ಬಳಿಕ ಮಳೆಯಾಗುವ ಮುನ್ಸೂಚನೆ ಇದೆ.

ಕರಾವಳಿಯಲ್ಲಿ ಮಳೆಯ ಮುನ್ಸೂಚನೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಭಾನುವಾರ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗುಡುಗು ಮತ್ತು ಗಾಳಿ (ಗಂಟೆಗೆ 30-40 ಕಿ.ಮೀ ವೇಗ) ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದಂತೆ ಬಾಗಲಕೋಟೆ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಹಗುರ ಮಳೆಯಾಗಬಹುದು.

ಮಲೆನಾಡಿನಲ್ಲೂ ಭಾರೀ ಮಳೆ

ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬೀಸುವ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸಾರ್ವಜನಿಕರು ಮತ್ತು ರೈತರು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:31 pm, Sat, 13 June 26

ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
Follow Us