AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಇಡೀ ರಾಜ್ಯದಲ್ಲಿಂದು ಭಾರೀ ಮಳೆ! 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

Monsoon 2026:ಕರ್ನಾಟಕದ ಗದಗ, ಧಾರವಾಡ, ಮೈಸೂರು, ಹಾಸನ ಸೇರಿದಂತೆ ಒಟ್ಟು 8 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ. ಬೆಂಗಳೂರು ಮತ್ತು ಕರಾವಳಿ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗಲಿದ್ದು, ಸಾರ್ವಜನಿಕರು ಹಾಗೂ ರೈತರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ರಾಜ್ಯದ ಇಂದಿನ ಸಂಪೂರ್ಣ ಹವಾಮಾನ ವರದಿ ಇಲ್ಲಿದೆ.

Karnataka Weather Forecast: ಇಡೀ ರಾಜ್ಯದಲ್ಲಿಂದು ಭಾರೀ ಮಳೆ! 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ಸಾಂದರ್ಭಿಕ ಚಿತ್ರImage Credit source: PTI
ಭಾವನಾ ಹೆಗಡೆ
|

Updated on: Jun 02, 2026 | 7:44 AM

Share

ಬೆಂಗಳೂರು, ಜೂನ್ 02: ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ವರುಣನ ಅಬ್ಬರ ಜೋರಾಗಲಿದ್ದು, ಪ್ರಮುಖ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (IMD) ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ.

ಮುಖ್ಯಾಂಶಗಳು

  • ಗದಗ, ಮೈಸೂರು ಸೇರಿ ಒಟ್ಟು ಎಂಟು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಣೆ.
  • ಬೆಂಗಳೂರು ಹಾಗೂ ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
  • ಬಿರುಗಾಳಿ ವೇಳೆ ಸಾರ್ವಜನಿಕರು ಮತ್ತು ರೈತರು ಎಚ್ಚರಿಕೆಯಿಂದಿರಲು ಇಲಾಖೆ ಸೂಚನೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಉತ್ತರ ಒಳನಾಡಿನ ಗದಗ, ಧಾರವಾಡ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ 40-50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಹಳದಿ ಅಲರ್ಟ್ ನೀಡಿದೆ.

ಎಲ್ಲೆಲ್ಲಿ ಮಳೆ?

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಈ ವೇಳೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಬಿರುಗಾಳಿ ಬೀಸಲಿದ್ದು, ಕರಾವಳಿ ಭಾಗದಲ್ಲಿ ತಂಪಾದ ವಾತಾವರಣ ಇರಲಿದೆ. ಭಾರಿ ಮಳೆಯ ಮುನ್ಸೂಚನೆ ಇರುವ ಜಿಲ್ಲೆಗಳ ಹೊರತಾಗಿ, ಬಾಗಲಕೋಟೆ, ಬೆಳಗಾವಿ, ಬಿದರ್, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಇಲ್ಲಿ ಬಿರುಗಾಳಿಯ ವೇಗ ಗಂಟೆಗೆ 40-50 ಕಿ.ಮೀ ಇರಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಮಳೆ ಮತ್ತು ಬಿರುಗಾಳಿ ಬೀಸುವ ಸಮಯದಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಹಾಗೂ ಹಳೆಯ ಕಟ್ಟಡ ಮತ್ತು ಮರಗಳ ಕೆಳಗೆ ನಿಲ್ಲದಂತೆ ಹವಾಮಾನ ಇಲಾಖೆ ಸೂಚಿಸಿದೆ. ರೈತರು ಕೂಡ ತಮ್ಮ ಬೆಳೆ ಹಾಗೂ ಜಾನುವಾರುಗಳ ರಕ್ಷಣೆಗೆ ಅಗತ್ಯ ಮುಂಜಾಗ್ರತೆ ವಹಿಸುವುದು ಸೂಕ್ತ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್