AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಉತ್ತರ ಕನ್ನಡ, ಉಡುಪಿ ಸೇರಿ ಆರು ಜಿಲ್ಲೆಗಳಲ್ಲಿ ಇಂದು ವರುಣನ ಅಬ್ಬರ

Monsoon 2026: ಕರ್ನಾಟಕ ಹವಾಮಾನ ಇಲಾಖೆ ಇಂದು ಕರಾವಳಿ ಮತ್ತು ಮಲೆನಾಡಿನ ಆರು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಸೇರಿದಂತೆ ಹಲವೆಡೆ ಭಾರಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಬೆಂಗಳೂರು ಮತ್ತು ಇತರ ಜಿಲ್ಲೆಗಳ ಇಂದಿನ ಸಂಪೂರ್ಣ ಮಳೆ ವರದಿ ಇಲ್ಲಿದೆ.

Karnataka Weather Forecast: ಉತ್ತರ ಕನ್ನಡ, ಉಡುಪಿ ಸೇರಿ ಆರು ಜಿಲ್ಲೆಗಳಲ್ಲಿ ಇಂದು ವರುಣನ ಅಬ್ಬರ
ಕರಾವಳಿ ಮತ್ತು ಮಲೆನಾಡಿನ ಆರು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಮುನ್ಸೂಚನೆ ಇದೆ.
ಭಾವನಾ ಹೆಗಡೆ
|

Updated on: Aug 09, 2026 | 7:19 AM

Share

ಮುಖ್ಯಾಂಶಗಳು

  • ಕರಾವಳಿ ಮತ್ತು ಮಲೆನಾಡಿನ ಆರು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಮುನ್ಸೂಚನೆ ಇದೆ.
  • ಉತ್ತರ ಒಳನಾಡಿನಲ್ಲಿ ಗಂಟೆಗೆ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಬಿರುಗಾಳಿ ಬೀಸಲಿದೆ.
  • ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು, ಆಗಸ್ಟ್ 09: ರಾಜ್ಯದಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಜಿಲ್ಲೆಗಳಿಗೆ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ.

ಕರಾವಳಿ ಕರ್ನಾಟಕ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಮೀನುಗಾರರು ಮತ್ತು ಕರಾವಳಿ ನಿವಾಸಿಗಳು ಜಾಗರೂಕರಾಗಿರಲು ಸೂಚಿಸಲಾಗಿದೆ.

ಮಲೆನಾಡು ಮತ್ತು ದಕ್ಷಿಣ ಒಳನಾಡು

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. ಇಲ್ಲಿಯೂ ಸಹ 30-40 ಕಿ.ಮೀ ವೇಗದ ಗಾಳಿ ಬೀಸಲಿದೆ. ಇನ್ನುಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಹಾಸನ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡು

ಬೆಳಗಾವಿ, ಗದಗ, ಕೊಪ್ಪಳ, ಬಾಗಲಕೋಟೆ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಲಘುವಾದ ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆದರೆ, ಈ ಭಾಗದಲ್ಲಿ ಗಾಳಿಯ ವೇಗ ಹೆಚ್ಚಿರಲಿದ್ದು, ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ.

ಒಟ್ಟಾರೆಯಾಗಿ, ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಪ್ರಯಾಣಿಸುವವರು ಹಾಗೂ ತಗ್ಗು ಪ್ರದೇಶದ ನಿವಾಸಿಗಳು ಹವಾಮಾನ ಇಲಾಖೆಯ ಮುನ್ನೆಚ್ಚರಿಕೆಗಳನ್ನು ಪಾಲಿಸಬೇಕಾಗಿ ವಿನಂತಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ
ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ
ಮೂರೇ ವಾರಕ್ಕೆ ಕುಸಿದ 4,700 ಕೋಟಿ ವೆಚ್ಚದ ಲಕ್ನೋ-ಕಾನ್ಪುರ ಹೆದ್ದಾರಿ
ಮೂರೇ ವಾರಕ್ಕೆ ಕುಸಿದ 4,700 ಕೋಟಿ ವೆಚ್ಚದ ಲಕ್ನೋ-ಕಾನ್ಪುರ ಹೆದ್ದಾರಿ
ಒಳ್ಳೆಯ ಸಿನಿಮಾಕ್ಕಾಗಿ ನನ್ನ ಬಳಿ ಸಾಕಷ್ಟು ಹಣ ಇದೆ: ನಿರ್ಮಾಪಕ ವೆಂಕಟ್
ಒಳ್ಳೆಯ ಸಿನಿಮಾಕ್ಕಾಗಿ ನನ್ನ ಬಳಿ ಸಾಕಷ್ಟು ಹಣ ಇದೆ: ನಿರ್ಮಾಪಕ ವೆಂಕಟ್
ಟಾಕ್ಸಿಕ್ ಟ್ರೇಲರ್​: ‘ನಾನೇ ಸಿನಿಮಾ ಮಾಡಿದಷ್ಟು ಖುಷಿಯಾಯ್ತು’ ಎಂದ ಶಿವಣ್ಣ
ಟಾಕ್ಸಿಕ್ ಟ್ರೇಲರ್​: ‘ನಾನೇ ಸಿನಿಮಾ ಮಾಡಿದಷ್ಟು ಖುಷಿಯಾಯ್ತು’ ಎಂದ ಶಿವಣ್ಣ
‘ನನ್ನ ಜೀವನದ ಸ್ಮರಣೀಯ ಅನುಭವ’: ಟಾಕ್ಸಿಕ್ ಚಿತ್ರದ ಬಗ್ಗೆ ನಟ ಅಕ್ಷಯ್ ಓಬೆರಾ
‘ನನ್ನ ಜೀವನದ ಸ್ಮರಣೀಯ ಅನುಭವ’: ಟಾಕ್ಸಿಕ್ ಚಿತ್ರದ ಬಗ್ಗೆ ನಟ ಅಕ್ಷಯ್ ಓಬೆರಾ
‘ಆಲ್​ ದಿ ಬೆಸ್ಟ್​ ಟಾಕ್ಸಿಕ್’: ಟ್ರೈಲರ್​ ಲಾಂಚ್ ಮಾಡಿದ ಶಿವಣ್ಣ
‘ಆಲ್​ ದಿ ಬೆಸ್ಟ್​ ಟಾಕ್ಸಿಕ್’: ಟ್ರೈಲರ್​ ಲಾಂಚ್ ಮಾಡಿದ ಶಿವಣ್ಣ
LIVE: ‘ಟಾಕ್ಸಿಕ್’ ಸಿನಿಮಾ ಟ್ರೈಲರ್ ಬಿಡುಗಡೆ ಇವೆಂಟ್ ಲೈವ್ ಇಲ್ಲಿ ನೋಡಿ
LIVE: ‘ಟಾಕ್ಸಿಕ್’ ಸಿನಿಮಾ ಟ್ರೈಲರ್ ಬಿಡುಗಡೆ ಇವೆಂಟ್ ಲೈವ್ ಇಲ್ಲಿ ನೋಡಿ
ಸಚಿವರನ್ನು ಬರಮಾಡಿಕೊಳ್ಳುವ ಭರದಲ್ಲಿ 1 ಲಕ್ಷ ರೂ. ಕಳೆದುಕೊಂಡ ಅಭಿಮಾನಿ
ಸಚಿವರನ್ನು ಬರಮಾಡಿಕೊಳ್ಳುವ ಭರದಲ್ಲಿ 1 ಲಕ್ಷ ರೂ. ಕಳೆದುಕೊಂಡ ಅಭಿಮಾನಿ
ಭಾರತದಲ್ಲಿ ಸ್ವಾವಲಂಬನೆಯ ನವ ಯುಗ ಆರಂಭ ಎಂದ ಪ್ರಧಾನಿ ಮೋದಿ
ಭಾರತದಲ್ಲಿ ಸ್ವಾವಲಂಬನೆಯ ನವ ಯುಗ ಆರಂಭ ಎಂದ ಪ್ರಧಾನಿ ಮೋದಿ
ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ: ಈ ಬಗ್ಗೆ ಗೃಹ ಸಚಿವ ಹೇಳಿದ್ದೇನು?
ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ: ಈ ಬಗ್ಗೆ ಗೃಹ ಸಚಿವ ಹೇಳಿದ್ದೇನು?