ಕರ್ನಾಟಕದ ಹವಾಮಾನ ಮುನ್ಸೂಚನೆ: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ, ಉತ್ತರ ಒಳನಾಡಿನಲ್ಲಿ ಒಣ ಹವೆ!

ಇಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಕೋಲಾರ ಹಾಗೂ ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದೇ ವೇಳೆಗೆ ಉತ್ತರ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಒಣ ಹವಾಮಾನ ಮತ್ತು ಬಲವಾದ ಗಾಳಿ ಇರಲಿದೆ.

ಕರ್ನಾಟಕದ ಹವಾಮಾನ ಮುನ್ಸೂಚನೆ: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ, ಉತ್ತರ ಒಳನಾಡಿನಲ್ಲಿ ಒಣ ಹವೆ!
ಸಾಂದರ್ಭಿಕ ಚಿತ್ರ
Image Credit source: PTI

Updated on: Oct 25, 2026 | 7:17 AM

ಮುಖ್ಯಾಂಶಗಳು

  • ದಕ್ಷಿಣ ಒಳನಾಡು ಮತ್ತು ಕರಾವಳಿಯ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.
  • ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ.
  • ನಾಳೆ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು, ಅಕ್ಟೋಬರ್ 25: ರಾಜ್ಯದಲ್ಲಿ ಮುಂಗಾರು ಹಾಗೂ ಹಿಂಗಾರು ಪ್ರಭಾವದಿಂದಾಗಿ ವಿವಿಧ ಭಾಗಗಳಲ್ಲಿ ಭಿನ್ನ ವಾತಾವರಣ ಕಂಡುಬರುತ್ತಿದೆ. ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಮಳೆಯ ವಾತಾವರಣ ಮುಂದುವರಿದಿದ್ದರೆ, ಉತ್ತರ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಒಣ ಹವಾಮಾನ ಆವರಿಸಿದೆ. ಮುಂದಿನ ಎರಡು ದಿನಗಳಲ್ಲಿ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಕರ್ನಾಟಕ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯವಾಗಿ ಒಣ ಹವೆ ಮುಂದುವರಿಯಲಿದೆ.

ಉತ್ತರ ಒಳನಾಡು

ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಲಘು ಮಳೆಯಾಗಬಹುದು. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವಾಮಾನ ಕಂಡುಬರಲಿದೆ.

ದಕ್ಷಿಣ ಒಳನಾಡು

ಕೋಲಾರ, ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು (ನಗರ ಹಾಗೂ ಗ್ರಾಮಾಂತರ), ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಮಂಡ್ಯ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ, ತುಮಕೂರು, ರಾಮನಗರ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗಲಿದೆ.

ಸೋಮವಾರ ಹವಾಮಾನ ಹೇಗಿರಲಿದೆ?

ನಾಳೆ (ಅ. 26)ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಲಘು ಮಳೆಯಾಗಲಿದ್ದು, ಉತ್ತರ ಕನ್ನಡದಲ್ಲಿ ಒಣ ಹವೆ ಇರಲಿದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ (ಗಂಟೆಗೆ 30-40 ಕಿ.ಮೀ ವೇಗದ) ಬಲವಾದ ಗಾಳಿಯೊಂದಿಗೆ ಒಣ ಹವಾಮಾನ ಕಂಡುಬರಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು (ನಗರ ಹಾಗೂ ಗ್ರಾಮಾಂತರ), ಮೈಸೂರು, ಕೋಲಾರ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಮಂಡ್ಯ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
Loading...
Unable to load recommendations.
Follow Us