Karnataka Weather Forecast: ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿರುಗಾಳಿ ಸಹಿತ ವರುಣನ ಆರ್ಭಟ! ಕರಾವಳಿಗೆ ಯೆಲ್ಲೋ ಅಲರ್ಟ್

Monsoon 2026: ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇತ್ತ ಬೆಂಗಳೂರು, ಮೈಸೂರು ಸೇರಿದಂತೆ ಒಳನಾಡಿನ ಹಲವು ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಬಿರುಗಾಳಿ ಸಹಿತ ಲಘು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Karnataka Weather Forecast: ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿರುಗಾಳಿ ಸಹಿತ ವರುಣನ ಆರ್ಭಟ! ಕರಾವಳಿಗೆ ಯೆಲ್ಲೋ ಅಲರ್ಟ್
ಸಾಂದರ್ಭಿಕ ಚಿತ್ರ
Image Credit source: The New Indian Express

Updated on: Jun 23, 2026 | 7:24 AM

ಬೆಂಗಳೂರು, ಜೂನ್ 23: ಕರಾವಳಿ ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇತ್ತ ಬೆಂಗಳೂರು ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು, ಮಿಂಚು  (Weather) ಹಾಗೂ ಬಲವಾದ ಬಿರುಗಾಳಿ ಸಹಿತ ಲಘುವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಖ್ಯಾಂಶಗಳು

  • ಕರಾವಳಿಯ ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಣೆ.
  • ಬೆಂಗಳೂರು ಸೇರಿದಂತೆ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ.
  • ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಲಘು ಮ ಮುನ್ಸೂಚನೆ.

ಕರಾವಳಿಗೆ ಯೆಲ್ಲೋ ಅಲರ್ಟ್​

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ಲಘುವಾಗಿ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ಉಳಿದಂತೆ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಹಗುರವಾದ ಮಳೆಯಾಗಬಹುದು.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಬಿರುಗಾಳಿ (30-40 kmph) ಸಹಿತ ಲಘುವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಾಳಿ ಸಹಿತ ಹಗುರವಾದ ಮಳೆಯಾಗುವ ಮುನ್ಸೂಚನೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us