AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ರಾಜ್ಯದೆಲ್ಲೆಡೆ ವರುಣಾರ್ಭಟ; ಕಡಲತೀರದ ಜಿಲ್ಲೆಗಳಿಗೆ ಮುಂದಿನ ಮೂರು ದಿನ ಆರೆಂಜ್ ಅಲರ್ಟ್​!

Monsoon 2026:ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಅಬ್ಬರದ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 2 ರವರೆಗೆ 'ಆರೆಂಜ್ ಅಲರ್ಟ್' ಘೋಷಿಸಲಾಗಿದ್ದು, ಸಾರ್ವಜನಿಕರು ನದಿ ದಡ ಮತ್ತು ಕಡಲತೀರಗಳಿಗೆ ತೆರಳದಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಕಟ್ಟೆಚ್ಚರದ ಮುನ್ನೆಚ್ಚರಿಕೆ ನೀಡಿದ್ದಾರೆ. ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಒಳನಾಡಿನಲ್ಲೂ ಸಾಧಾರಣ ಮಳೆಯಾಗಲಿದೆ.

Karnataka Weather Forecast: ರಾಜ್ಯದೆಲ್ಲೆಡೆ ವರುಣಾರ್ಭಟ; ಕಡಲತೀರದ ಜಿಲ್ಲೆಗಳಿಗೆ ಮುಂದಿನ ಮೂರು ದಿನ ಆರೆಂಜ್ ಅಲರ್ಟ್​!
ಸಾಂದರ್ಭಿಕ ಚಿತ್ರImage Credit source: gettyimages.com
ಭಾವನಾ ಹೆಗಡೆ
|

Updated on: Jun 30, 2026 | 7:16 AM

Share

ಮುಖ್ಯಾಂಶಗಳು

  • ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 2 ರವರೆಗೆ ಆರೆಂಜ್ ಅಲರ್ಟ್ ಘೋಷಣೆ.
  • ಒಳನಾಡಿನಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆ.
  • ನದಿ ತೀರ ಮತ್ತು ಕಡಲತೀರಕ್ಕೆ ತೆರಳದಂತೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ.

ಬೆಂಗಳೂರು, ಜೂನ್ 30: ಮಲೆನಾಡು, ಕರಾವಳಿ ಭಾಗಗಳಲ್ಲಿ ಕಳೆದ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ರಸ್ತೆಗಳು ಹಳ್ಳಗಳಂತೆ ತುಂಬಿ ಹರಿಯುತ್ತಿವೆ. ಉತ್ತರ ಕನ್ನಡದಲ್ಲಂತೂ ಭಾರೀ ಮಳೆಗೆ (Weather) ಗೋಕರ್ಣ ದೇವಾಲಯದ ಗರ್ಭಗುಡಿಗೂ ನೀರು ನುಗ್ಗಿತ್ತು. ಇಂದೂ ಸಹ ರಾಜ್ಯದ ಹಲವೆಡೆ ಮಳೆಯಾಗಲಿದ್ದು, ಕರಾವಳಿಗೆ ಆರೆಂಜ್ ಅಲರ್ಟ್​ ನೀಡಲಾಗಿದೆ. ಜನಸಾಮಾನ್ಯರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಉತ್ತರ ಕನ್ನಡದಲ್ಲಿ ಭಾರೀ ಮಳೆ

ಕರಾವಳಿ ತೀರದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಹಾಗೂ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ನಿರಂತರ ಗಾಳಿ ಬೀಸುವ ಸಂಭವವಿದೆ. ಅದರಲ್ಲೂ ವಿಶೇಷವಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಭಾರಿ ಅವಾಂತರಗಳು ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಜುಲೈ 2 ರವರೆಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿ ದಡ ಮತ್ತು ಕಡಲತೀರಗಳಿಗೆ ತೆರಳದಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಕಟ್ಟುನಿಟ್ಟಿನ ಮನವಿ ಮಾಡಿದ್ದಾರೆ.

ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆ

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಈ ಭಾಗದಲ್ಲಿ ಮಳೆಯ ಸಂದರ್ಭದಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಮುನ್ನೆಚ್ಚರಿಕೆ ವಹಿಸಬೇಕಾಗಿದೆ.

ದಕ್ಷಿಣ ಒಳನಾಡಿನಲ್ಲಿ ಎಲ್ಲೆಲ್ಲಿ ಮಳೆ?

ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದ ಗಾಳಿ ಬೀಸಲಿದೆ. ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಸಾರ್ವಜನಿಕರು ಹವಾಮಾನ ಇಲಾಖೆಯ ಮಾರ್ಗಸೂಚಿಗಳನ್ನು ಪಾಲಿಸಿ ಸುರಕ್ಷಿತವಾಗಿರಲು ಕೋರಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ