AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಬೆಂಗಳೂರಿಗರೇ ಎಚ್ಚರ! ಮುಂದಿನ 3 ದಿನಗಳ ಕಾಲ ನಗರದಲ್ಲಿ ವರುಣಾರ್ಭಟ

Monsoon 2026: ಕರ್ನಾಟಕದಾದ್ಯಂತ ಮೇ 25ರವರೆಗೆ ಗುಡುಗು, ಸಿಡಿಲು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ 50-60 ಕಿ.ಮೀ ವೇಗದ ಗಾಳಿ ಬೀಸಲಿದ್ದು, ಹಳದಿ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ ರೈತರು ಮುನ್ನೆಚ್ಚರಿಕೆ ವಹಿಸಲು ಮತ್ತು ಸುರಕ್ಷಿತ ಸ್ಥಳಗಳಲ್ಲಿರಲು ಇಲಾಖೆ ಜಾಗೃತಿ ಮೂಡಿಸಿದೆ.

Karnataka Weather Forecast: ಬೆಂಗಳೂರಿಗರೇ ಎಚ್ಚರ! ಮುಂದಿನ 3 ದಿನಗಳ ಕಾಲ ನಗರದಲ್ಲಿ ವರುಣಾರ್ಭಟ
ಮುಂಬರುವ ದಿನಗಳಲ್ಲಿ ಭಾರೀ ಮಳೆಯ ಎಚ್ಚರಿಕೆ Image Credit source: MediaForge AI
ಭಾವನಾ ಹೆಗಡೆ
|

Updated on:May 22, 2026 | 7:33 AM

Share

ಬೆಂಗಳೂರು, ಮೇ 22: ಇಂದೂ ಸಹ ರಾಜ್ಯದ ಅನೇಕ ಕಡೆ ಮಳೆಯಾಗಲಿದ್ದು, ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ (Weather) ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಹವಾಮಾನದಲ್ಲಿ ಭಾರಿ ಏರುಪೇರಾಗಲಿದ್ದು, ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಖ್ಯಾಂಶಗಳು

  • ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿಗೆ ಭಾರೀ ಮಳೆ ಮುನ್ಸೂಚನೆ
  • ರಾಜ್ಯದ ಒಳನಾಡಿನಲ್ಲಿ ಬಿರುಗಾಳಿ ಮತ್ತು ತೀವ್ರ ಗುಡುಗು ಎಚ್ಚರಿಕೆ
  • ಕಟಾವು ಬೆಳೆಗಳನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲು ರೈತರಿಗೆ ಸೂಚನೆ.

ಎಲ್ಲೆಲ್ಲಿ ಮಳೆ?

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಸೇರಿದಂತೆ ಮೈಸೂರು, ಮಂಡ್ಯ, ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಯಾದಗಿರಿ, ರಾಯಚೂರು, ಕೊಪ್ಪಳ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ 50-60 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಧಾರವಾಡ, ಹಾವೇರಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲೂ ಗಾಳಿಯ ವೇಗ ಹೆಚ್ಚಿರಲಿದ್ದು, ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಮುಂಬರುವ ದಿನಗಳಲ್ಲಿ ಭಾರೀ ಮಳೆಯ ಎಚ್ಚರಿಕೆ

ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ಗುಡುಗು ಸಿಡಿಲಿನ ಅಬ್ಬರ ಜೋರಾಗಿರಲಿದೆ. ಮೇ 22ರಿಂದ ಮೇ 25, 2026ರ ಅವಧಿಯಲ್ಲಿ ಇಡೀ ಒಳನಾಡು ಭಾಗದಲ್ಲಿ ಗಂಟೆಗೆ 50 ರಿಂದ 60 ಕಿ.ಮೀ ವೇಗದ ಗಾಳಿಯೊಂದಿಗೆ ತೀವ್ರ ಸ್ವರೂಪದ ಗುಡುಗು ಸಹಿತ ಮಳೆ ಸಂಭವಿಸುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಮೇ 21ರಿಂದ ಮೇ 25ರವರೆಗೆ ಸಿಡಿಲು ಹಾಗೂ ಮಿಂಚಿನ ಮುನ್ನೆಚ್ಚರಿಕೆ ನೀಡಲಾಗಿದ್ದು, ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿರಲು ಕೋರಲಾಗಿದೆ.

ಸಾರ್ವಜನಿಕರಿಗೆ ಸೂಚನೆ

ಈ ತೀವ್ರ ಹವಾಮಾನದ ಪರಿಣಾಮವಾಗಿ ತಗ್ಗು ಪ್ರದೇಶಗಳಲ್ಲಿ ಜಲಾವೃತ ಮತ್ತು ಸಂಚಾರ ದಟ್ಟಣೆ ಉಂಟಾಗಬಹುದು. ಬಲವಾದ ಗಾಳಿಗೆ ಮರಗಳು ಹಾಗೂ ವಿದ್ಯುತ್ ಕಂಬಗಳು ಉರುಳುವ ಸಾಧ್ಯತೆಯಿರುವುದರಿಂದ ವಿದ್ಯುತ್ ಸರಬರಾಜಿಗೆ ತಾತ್ಕಾಲಿಕ ಅಡಚಣೆಯಾಗಬಹುದು. ಸಾರ್ವಜನಿಕರು ಮಳೆ-ಗಾಳಿಯ ಸಮಯದಲ್ಲಿ ಸುರಕ್ಷಿತವಾಗಿ ಮನೆಗಳ ಒಳಗೆ ಇರಲು, ಅನಗತ್ಯ ಪ್ರಯಾಣ ತಪ್ಪಿಸಲು ಮತ್ತು ಮರಗಳ ಕೆಳಗೆ ಆಶ್ರಯ ಪಡೆಯದಂತೆ ಸೂಚಿಸಲಾಗಿದೆ. ತೆರೆದ ಪ್ರದೇಶಗಳಲ್ಲಿ ಸಂಗ್ರಹಿಸಿಟ್ಟಿರುವ ಕಟಾವು ಮಾಡಿದ ಬೆಳೆಗಳಿಗೆ ಹಾನಿಯಾಗುವ ಸಂಭವವಿರುವುದರಿಂದ, ರೈತರು ತಮ್ಮ ಉತ್ಪನ್ನಗಳನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ರವಾನಿಸಲು ಹವಾಮಾನ ಇಲಾಖೆ ಜಾಗೃತಿ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:24 am, Fri, 22 May 26

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More