AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಕರಾವಳಿಯಲ್ಲಿ ಮಳೆಯ ಅಬ್ಬರ! 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

Monsoon 2026: ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಮತ್ತು ಉತ್ತರ ಒಳನಾಡಿನ ಹಲವೆಡೆ ಬಲವಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಾರ್ವಜನಿಕರು ಜಾಗರೂಕರಾಗಿರಲು ಸೂಚಿಸಲಾಗಿದೆ.

Karnataka Weather Forecast: ಕರಾವಳಿಯಲ್ಲಿ ಮಳೆಯ ಅಬ್ಬರ! 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​
ಕರಾವಳಿಯಲ್ಲಿ ಮಳೆಯ ಅಬ್ಬರ
ಭಾವನಾ ಹೆಗಡೆ
|

Updated on: Jul 06, 2026 | 7:14 AM

Share

ಮುಖ್ಯಾಂಶಗಳು

  • ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ.
  • ಉತ್ತರ ಒಳನಾಡಿನ ಹಲವೆಡೆ ಬಲವಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ.
  • ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆ ನಿರೀಕ್ಷೆ.

ಬೆಂಗಳೂರು, ಜುಲೈ 06: ಕರಾವಳಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ವರುಣನ ಆರ್ಭಟ (Monsoon rain) ಜೋರಾಗಿದೆ. ಭಾರೀ ಮಳೆಯಿಂದ ಈಗಾಗಲೇ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದ್ದು, ಇಂದೂ ಸಹ ಉಡುಪಿ, ಉತ್ತರ ಕನ್ನಡ ಸೇರಿದಂತೆ ಮಲೆನಾಡಿನ ಭಾಗಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ರಾಜ್ಯದ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ನೀಡಲಾಗಿದ್ದು, ಸಾರ್ವಜನಿಕರು ಎಚ್ಚರಿಗೆವಹಿಸುವಂತೆ ಹೇಳಲಾಗಿದೆ.

ಕರಾವಳಿಗೆ ಆರೆಂಜ್ ಅಲರ್ಟ್​

ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಲವಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಳಗಾವಿ ಜಿಲ್ಲೆಗೆ ಆರೆಂಜ್ ಅಲರ್ಟ್ ಇರಲಿದೆ. ಇನ್ನು ಬಾಗಲಕೋಟೆ, ಬೀದರ್, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗದಲ್ಲೂ ಗಂಟೆಗೆ 40-50 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ.

ಹಾಸನ, ಕೊಡಗಿಗೂ ಅಲರ್ಟ್​!

ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದ್ದು, **ಆರೆಂಜ್ ಅಲರ್ಟ್** ಪ್ರಕಟಿಸಲಾಗಿದೆ. ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ಸುಸ್ಥಿರ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!
10 ವರ್ಷ ಜೈಲು, 10 ಕೋಟಿ ರೂ ದಂಡ ಎಂದ ಸಚಿವ ಜೋಶಿ
10 ವರ್ಷ ಜೈಲು, 10 ಕೋಟಿ ರೂ ದಂಡ ಎಂದ ಸಚಿವ ಜೋಶಿ