AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಬೆಂಗಳೂರು, ಬಾಗಲಕೋಟೆ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಆರೆಂಜ್ ಅಲರ್ಟ್ ಘೋಷಣೆ!

Monsoon 2026: ಕರ್ನಾಟಕದ ಬಾಗಲಕೋಟೆ, ಕಲಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಸನ, ಕೊಡಗು ಹಾಗೂ ಮೈಸೂರಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಹವಾಮಾನ ಇಲಾಖೆ ಸೂಚಿಸಿದೆ.

Karnataka Weather Forecast: ಬೆಂಗಳೂರು, ಬಾಗಲಕೋಟೆ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಆರೆಂಜ್ ಅಲರ್ಟ್ ಘೋಷಣೆ!
ಬೆಂಗಳೂರು, ಬಾಗಲಕೋಟೆ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ
ಭಾವನಾ ಹೆಗಡೆ
|

Updated on: May 27, 2026 | 7:31 AM

Share

ಬೆಂಗಳೂರು, ಮೇ 27: ರಾಜ್ಯದಾದ್ಯಂತ ವರುಣನ ಅಬ್ಬರ ಮುಂದುವರಿದಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ  (Weather) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದ್ದು, ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ.

ಮುಖ್ಯಾಂಶಗಳು

  • ಬಾಗಲಕೋಟೆ, ಕಲಬುರ್ಗಿ, ವಿಜಯಪುರ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಣೆ.
  • ಹಾಸನ, ಕೊಡಗು, ಮೈಸೂರು ಭಾಗಗಳಲ್ಲಿ ಮಳೆ ಹೆಚ್ಚಳ, ಯೆಲ್ಲೋ ಅಲರ್ಟ್ ಮುನ್ನೆಚ್ಚರಿಕೆ.
  • ಬೆಂಗಳೂರು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ.

ಉತ್ತರ ಒಳನಾಡಿಗೆ ಆರೆಂಜ್ ಅಲರ್ಟ್

ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಈ ಭಾಗಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದರೊಂದಿಗೆ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿಯೊಂದಿಗೆ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ.

ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಕೊಡಗು ಮತ್ತು ಮೈಸೂರು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ಮುನ್ನೆಚ್ಚರಿಕೆ ರೂಪದಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಚಿಕ್ಕಮಗಳೂರು, ದಾವಣಗೆರೆ, ಮಂಡ್ಯ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ 30 ರಿಂದ 40 ಕಿಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಬಹುದು.

ಇದೇ ವೇಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ, ಬಳ್ಳಾರಿ, ವಿಜಯನಗರ ಹಾಗೂ ಚಿತ್ರದುರ್ಗ ಜಿಲ್ಲೆಗಳ ಹಲವು ಭಾಗಗಳಲ್ಲಿ 40-50 ಕಿಮೀ ವೇಗದ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಸಿಲಿಕಾನ್ ಸಿಟಿಯಲ್ಲಿ ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆ ಆರ್ಭಟಿಸುವ ಸಾಧ್ಯತೆಯಿದೆ.

ಕರಾವಳಿಯಲ್ಲೂ ತುಂತುರು ಮಳೆ

ಕರಾವಳಿ ಕರ್ನಾಟಕದ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು ಮುನ್ಸೂಚನೆಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮಳೆ ಹಾಗೂ ಬಿರುಗಾಳಿ ಬೀಸುವ ಸಂದರ್ಭದಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು. ಪ್ರಮುಖವಾಗಿ ಹಳೆಯ ಕಟ್ಟಡಗಳು ಹಾಗೂ ಮರಗಳ ಕೆಳಗೆ ನಿಲ್ಲದಂತೆ ಮತ್ತು ವಿದ್ಯುತ್ ಕಂಬಗಳಿಂದ ದೂರವಿರಲು ಹವಾಮಾನ ಇಲಾಖೆ ಹಾಗೂ ವಿಪತ್ತು ನಿರ್ವಹಣಾ ಮಂಡಳಿ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್