ಕರ್ನಾಟಕದ ಹವಾಮಾನ ಮುನ್ಸೂಚನೆ: ನವೆಂಬರ್ 1ರ ನಂತರ ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ!

ಕರ್ನಾಟಕದಲ್ಲಿ ಹವಾಮಾನ ಬದಲಾಗಿದ್ದು, ನವೆಂಬರ್ 1 ರಿಂದ 3 ರವರೆಗೆ ರಾಜ್ಯದ ಹಲವೆಡೆ ಬಿರುಗಾಳಿ ಹಾಗೂ ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 3 ರಿಂದ 5 ರವರೆಗೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ನಿಮ್ಮ ಜಿಲ್ಲೆಯ ಸಂಪೂರ್ಣ ಹವಾಮಾನ ವರದಿ ಮತ್ತು ಮಳೆಯ ಎಚ್ಚರಿಕೆಯ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕದ ಹವಾಮಾನ ಮುನ್ಸೂಚನೆ: ನವೆಂಬರ್ 1ರ ನಂತರ ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ!
ಸಾಂದರ್ಭಿಕ ಚಿತ್ರ
Image Credit source: PTI

Updated on: Oct 31, 2026 | 7:06 AM

ಮುಖ್ಯಾಂಶಗಳು

  • ನವೆಂಬರ್ 1 ರಿಂದ 3 ರವರೆಗೆ ಒಳನಾಡಿನಲ್ಲಿ ಬಿರುಗಾಳಿ ಮಳೆ.
  • ರಾಜ್ಯದ ಹಲವೆಡೆ ಸಿಡಿಲು ಹಾಗೂ ಮಿಂಚಿನ ಭಾರಿ ಮುನ್ಸೂಚನೆ.
  • ನವೆಂಬರ್ 3 ರಿಂದ ಕರಾವಳಿ ಭಾಗದಲ್ಲಿ ಮಳೆ ಎಚ್ಚರಿಕೆ.

ಬೆಂಗಳೂರು, ಅಕ್ಟೋಬರ್ 31: ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ವಾತಾವರಣದಲ್ಲಿ ಏರಿಳಿತ ಕಂಡುಬರಲಿದೆ. ನವೆಂಬರ್ 1 ರಿಂದ 3 ರವರೆಗೆ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಅಲ್ಲಲ್ಲಿ ಸಿಡಿಲು-ಮಿಂಚು ಸಹಿತ ಗುಡುಗು ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಹಾಸನ, ಕೊಡಗು ಮತ್ತು ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ. ನವೆಂಬರ್ 3 ರಿಂದ 5 ರವರೆಗೆ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.

ನವೆಂಬರ್ 1 ರಿಂದ 3 ರವರೆಗೆ ಬಿರುಗಾಳಿ

ನವೆಂಬರ್ 1 ರಿಂದ 3 ರವರೆಗೆ ಒಳನಾಡಿನ ಬಹುತೇಕ ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ರಾಜ್ಯದ ಒಂದೆರಡು ಕಡೆಗಳಲ್ಲಿ ನವೆಂಬರ್ 1 ರಿಂದ 3 ರವರೆಗೆ ಸಿಡಿಲು ಮತ್ತು ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ನವೆಂಬರ್ 3 ರಿಂದ 5 ರವರೆಗೆ ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಪ್ರಾದೇಶಿಕ ಹವಾಮಾನ ಮುನ್ಸೂಚನೆ

1. ಕರಾವಳಿ ಕರ್ನಾಟಕ

ಆರಂಭದ ದಿನಗಳಲ್ಲಿ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದ್ದು, ದಕ್ಷಿಣ ಕನ್ನಡದಲ್ಲಿ ಒಣ ಹವೆ ಮುಂದುವರಿಯಲಿದೆ. ತದನಂತರ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದ್ದು, ನವೆಂಬರ್ 3 ರಿಂದ 5 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

2. ಉತ್ತರ ಒಳನಾಡು

ಬೆಳಗಾವಿ, ಧಾರವಾಡ, ರಾಯಚೂರು, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಬಿರುಗಾಳಿ (30-40 ಕಿ.ಮೀ/ಗಂಟೆ) ಹಾಗೂ ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಬಾಗಲಕೋಟೆ, ವಿಜಯಪುರ, ಬೀದರ್, ಕಲ್ಬುರ್ಗಿ, ಹಾವೇರಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವೆ ಇರಲಿದೆ.

3. ದಕ್ಷಿಣ ಒಳನಾಡು

ಮೈಸೂರು, ಮಂಡ್ಯ, ಹಾಸನ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಭಾಗಗಳಲ್ಲಿ ಹಗುರ ಮಳೆಯಾಗಲಿದ್ದು, ತುಮಕೂರು, ಬಳ್ಳಾರಿ, ಶಿವಮೊಗ್ಗ, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
Loading...
Unable to load recommendations.
Follow Us