AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಕರಾವಳಿ ಹಾಗೂ ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

Monsoon 2026: ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ಕರಾವಳಿಯ ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

Karnataka Weather Forecast: ಕರಾವಳಿ ಹಾಗೂ ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ಕರಾವಳಿ ಕರ್ನಾಟಕದಲ್ಲಿ ಮಳೆ ಅಬ್ಬರ
ಭಾವನಾ ಹೆಗಡೆ
|

Updated on: Jun 27, 2026 | 7:30 AM

Share

ಮುಖ್ಯಾಂಶಗಳು

  • ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಬಾಗಲಕೋಟೆಯಲ್ಲಿ ಭಾರಿ ಮಳೆಯ ಮುನ್ಸೂಚನೆ.
  • ದಕ್ಷಿಣ ಕನ್ನಡ, ಉಡುಪಿಯ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ.
  • ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿ ಸಹಿತ ಮಳೆಯ ಎಚ್ಚರಿಕೆ.

ಬೆಂಗಳೂರು, ಜೂನ್ 27: ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (Weather) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ವಿಶೇಷವಾಗಿ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿರಲಿದೆ. ಉತ್ತರ ಕನ್ನಡ ಸೇರಿದಂತೆ ಬಾಗಲಕೋಟೆ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ.

ಕರಾವಳಿ ಕರ್ನಾಟಕದಲ್ಲಿ ಮಳೆ ಅಬ್ಬರ

ಕರಾವಳಿಯ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದ್ದು, ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ಭಾಗದಲ್ಲಿ ಸಮುದ್ರದ ಅಲೆಗಳ ಅಬ್ಬರವೂ ಹೆಚ್ಚಿರಲಿದ್ದು, ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಬಿರುಗಾಳಿ ಸಹಿತ ಭಾರಿ ಮಳೆ

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಗಾಳಿಯ ವೇಗವೂ ಹೆಚ್ಚಿರಲಿದೆ. ಬೆಳಗಾವಿ, ಧಾರವಾಡ ಮತ್ತು ಬಾಗಲಕೋಟೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು, ಮಿಂಚು ಹಾಗೂ ಗಂಟೆಗೆ 30-40 ಕಿ.ಮೀ ವೇಗದ ಬಲವಾದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದರೊಂದಿಗೆ ಬೀದರ್, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಗಾಳಿ ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬಿರುಗಾಳಿಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಳೆಯ ಕಟ್ಟಡ ಹಾಗೂ ಮರಗಳ ಕೆಳಗೆ ನಿಲ್ಲದಂತೆ ಎಚ್ಚರಿಕೆ ವಹಿಸಬೇಕು.

ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಮಳೆಯ ವಾತಾವರಣ ಮುಂದುವರಿಯಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ. ಈ ಭಾಗದಲ್ಲಿಯೂ ಸಹ ಗಂಟೆಗೆ 30-40 ಕಿ.ಮೀ ವೇಗದಲ್ಲಿ ನಿರಂತರ ಗಾಳಿ ಬೀಸುವ ಸಾಧ್ಯತೆಯಿದೆ.

ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಮತ್ತು ಬಾಗಲಕೋಟೆ ಜಿಲ್ಲೆಗಳ ಸಾರ್ವಜನಿಕರು ಹಾಗೂ ರೈತರು ಹವಾಮಾನ ವೈಪರೀತ್ಯದ ಸಮಯದಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಕೋರಲಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಸೂಕ್ತ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’