AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ರಾಜ್ಯಾದ್ಯಂತ ಮುಂಗಾರು ಚುರುಕು, ಹಲವೆಡೆ ಭಾರಿ ಮಳೆ ಮುನ್ನೆಚ್ಚರಿಕೆ

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯಾದ್ಯಂತ ಮುಂಗಾರು ಚುರುಕು, ಹಲವೆಡೆ ಭಾರಿ ಮಳೆ ಮುನ್ನೆಚ್ಚರಿಕೆ
ಸಾಂದರ್ಭಿಕ ಚಿತ್ರImage Credit source: PTI
ಭಾವನಾ ಹೆಗಡೆ
|

Updated on: Oct 05, 2026 | 7:11 AM

Share

ಮುಖ್ಯಾಂಶಗಳು

  • ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆಯಿದೆ.
  • ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ನಾಲ್ಕು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ.
  • ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಪ್ರಮುಖವಾಗಿ ಒಣ ಹವೆ ಮುಂದುವರಿಯಲಿದೆ.

ಬೆಂಗಳೂರು, ಅಕ್ಟೋಬರ್ 05: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಸಕ್ರಿಯವಾಗಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಘಟ್ಟ ಪ್ರದೇಶಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದ್ದು, ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಎಲ್ಲೆಲ್ಲಿ ಯೆಲ್ಲೋ ಅಲರ್ಟ್​

ಇಂದು ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳಲ್ಲಿ ಸಿಡಿಲು ಉಂಟಾಗುವ ಸಾಧ್ಯತೆಯಿದ್ದು, ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಇನ್ನು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಜಾಗರೂಕರಾಗಿರಲು ಹವಾಮಾನ ಇಲಾಖೆ ಸೂಚಿಸಿದೆ. ಹವಾಮಾನದ ತೀವ್ರತೆ ಪರಿಗಣಿಸಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

ಬೆಂಗಳೂರಿನಲ್ಲೂ ಸಾಧಾರಣ ಮಳೆ

ಉತ್ತರ ಒಳನಾಡಿನ ಹಾವೇರಿ, ಗದಗ ಮತ್ತು ಧಾರವಾಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆದರೆ ಬಾಗಲಕೋಟೆ, ಬೀದರ್, ಕಲ್ಬುರ್ಗಿ, ಕೊಪ್ಪಳ, ಬೆಳಗಾವಿ, ವಿಜಯಪುರ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಪ್ರಮುಖವಾಗಿ ಒಣ ಹವೆ ಮುಂದುವರಿಯಲಿದೆ. ಉಳಿದಂತೆ ಮಂಡ್ಯ, ರಾಮನಗರ, ತುಮಕೂರು, ಹಾಸನ, ಕೊಡಗು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ವಿಜಯನಗರ, ದಾವಣಗೆರೆ, ಬಳ್ಳಾರಿ ಹಾಗೂ ಚಿತ್ರದುರ್ಗ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ.

ನಾಳೆಯೂ ಇದೇ ವಾತಾವರಣ

ನಾಳೆ ಕೂಡ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡದಲ್ಲಿ ಸಾಧಾರಣ ಮಳೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಮೈಸೂರು, ಮಂಡ್ಯ, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯಿದ್ದು, ಚಾಮರಾಜನಗರ, ರಾಮನಗರ, ತುಮಕೂರು, ಕೊಡಗು, ಬೆಂಗಳೂರು (ನಗರ ಮತ್ತು ಗ್ರಾಮಾಂತರ), ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಹಾವೇರಿ, ಗದಗ, ಧಾರವಾಡ ಬಿಟ್ಟು ಉಳಿದ ಜಿಲ್ಲೆಗಳಲ್ಲಿ ಒಣ ಹವೆ ವರದಿಯಾಗಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ