ಕರ್ನಾಟಕದ ಹವಾಮಾನ ವರದಿ: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ವರುಣನ ಆರ್ಭಟ! ನಿಮ್ಮ ಜಿಲ್ಲೆಯ ವರದಿ ಇಲ್ಲಿದೆ
ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ವಿಶೇಷ ಮಳೆ ಮುನ್ನೆಚ್ಚರಿಕೆ ನೀಡಲಾಗಿದ್ದು, ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದೆ. ಸಂಪೂರ್ಣ ಹವಾಮಾನ ವರದಿಯನ್ನು ಇಲ್ಲಿದೆ ಪರಿಶೀಲಿಸಿ.

ಮುಖ್ಯಾಂಶಗಳು
- ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ.
- ರಾಮನಗರ, ಚಾಮರಾಜನಗರದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ.
- ಅಕ್ಟೋಬರ್ 25 ರಂದು ಉತ್ತರ ಒಳನಾಡಿನಲ್ಲಿ ಪ್ರಮುಖವಾಗಿ ಒಣ ಹವೆ.
ಬೆಂಗಳೂರು, ಅಕ್ಟೋಬರ್ 24: ಕರ್ನಾಟಕದಲ್ಲಿ ಮುಂಗಾರು ಮತ್ತು ಹಿಂಗಾರು ಮಳೆಯ ವಾತಾವರಣ ಸಕ್ರಿಯವಾಗಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಇಂದಿನಿಂದ ಮಳೆ ಹಾಗೂ ಗಾಳಿಯ ಪ್ರಮಾಣದಲ್ಲಿ ವ್ಯತ್ಯಾಸ ಕಂಡುಬರಲಿದೆ. ಭಾರತೀಯ ಹವಾಮಾನ ಇಲಾಖೆಯ (IMD) ವರದಿಯ ಪ್ರಕಾರ, ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾದರೆ, ಉಳಿದೆಡೆ ಪ್ರಮುಖವಾಗಿ ಒಣ ಹವೆ ಮುಂದುವರಿಯಲಿದೆ. ಮಳೆ ಮತ್ತು ಬಿರುಗಾಳಿಯ ಮುನ್ನೆಚ್ಚರಿಕೆಯನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರು ಹಾಗೂ ರೈತರು ಸೂಕ್ತ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ಕರಾವಳಿ ಕರ್ನಾಟಕ
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಗುಡುಗು ಹಾಗೂ ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಮೀನುಗಾರರು ಮತ್ತು ಕರಾವಳಿ ಭಾಗದ ನಿವಾಸಿಗಳು ಜಾಗರೂಕರಾಗಿರಲು ತಿಳಿಸಲಾಗಿದೆ.
ಉತ್ತರ ಒಳನಾಡು
ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸುವ ಬಿರುಗಾಳಿ ಹಾಗೂ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ, ಬೀದರ್, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರಮುಖವಾಗಿ ಒಣ ಹವಾಮಾನ ಕಂಡುಬರಲಿದೆ.
ದಕ್ಷಿಣ ಒಳನಾಡು
ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.
ಭಾನುವಾರದ ಹವಾಮಾನ ಮುನ್ಸೂಚನೆ
ಅಕ್ಟೋಬರ್ 25ರಂದು ರಾಜ್ಯದಲ್ಲಿ ಮಳೆಯ ತೀವ್ರತೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಹಾಸನ, ಚಿಕ್ಕಮಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವು ಕಡೆ ಹಗುರ ಮಳೆಯಾಗಲಿದೆ. ಆದರೆ ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪ್ರಮುಖವಾಗಿ ಒಣ ಹವೆಯೇ ಆವರಿಸಿರಲಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
