ರಾಜ್ಯದ ಹವಾಮಾನ ವರದಿ: ಹಲವೆಡೆ ಮೋಡಕವಿದ ವಾತಾವರಣ, ಸಾಧಾರಣ ಮಳೆ ಸಾಧ್ಯತೆ

ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ, ರಾಜ್ಯದಲ್ಲಿ ಮುಂಗಾರು ಮಳೆ ಕೊಂಚ ತಗ್ಗಿದ್ದರೂ, ಪ್ರಮುಖ ಜಿಲ್ಲೆಗಳು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಲಘುವಿನಿಂದ ಸಾಧಾರಣ ಮಳೆಯ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಗಾಳಿ ಬೀಸಲಿದೆ. ಉತ್ತರ ಕರ್ನಾಟಕ ಒಣಹವೆ ಹೊಂದಿದ್ದು, ಮಳೆಯೊಂದಿಗೆ ಗುಡುಗು-ಮಿಂಚು ಸಾಧ್ಯತೆ ಇದೆ. ರೈತರು ಮುನ್ನೆಚ್ಚರಿಕೆ ವಹಿಸಬೇಕು. ಮೀನುಗಾರರಿಗೆ ಯಾವುದೇ ಎಚ್ಚರಿಕೆ ಇಲ್ಲ.

ರಾಜ್ಯದ ಹವಾಮಾನ ವರದಿ: ಹಲವೆಡೆ ಮೋಡಕವಿದ ವಾತಾವರಣ, ಸಾಧಾರಣ ಮಳೆ ಸಾಧ್ಯತೆ
ಸಾಂದರ್ಭಿಕ ಚಿತ್ರ
Image Credit source: Google

Updated on: Sep 15, 2026 | 6:16 AM

ಬೆಂಗಳೂರು, ಸೆ.15: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಕೊಂಚ ತಗ್ಗಿದ್ದರೂ, ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯಂತೆ ರಾಜ್ಯದ ಪ್ರಮುಖ ಜಿಲ್ಲೆಗಳು ಹಾಗೂ ಕರಾವಳಿ ಭಾಗದಲ್ಲಿ ಲಘುವಿನಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆಯಿದೆ.

ರಾವಳಿ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ತೀರ ಪ್ರದೇಶಗಳಲ್ಲಿ ತುಂತುರು ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಗಿರಿಪ್ರದೇಶಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆಯಿದ್ದು, ತಂಪು ಹವಾಮಾನ ಮುಂದುವರಿಯಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನವು 28°-30° ಸೆಲ್ಸಿಯಸ್ ತಲುಪುವ ಸಾಧ್ಯತೆಯಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಕೆಲ ಪ್ರದೇಶಗಳಲ್ಲಿ ತುಂತುರು ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: ಗಣೇಶ ಹಬ್ಬದಂದೇ ಗ್ರ್ಯಾಂಡ್‌ ಎಂಟ್ರಿ ಕೊಟ್ಟ ವರುಣ: ಕೋಲಾರದಲ್ಲಿ ಧಾರಾಕಾರ ಮಳೆ

ಉತ್ತರ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಒಣ ಹವಾಮಾನ ಹಾಗೂ ಬಿಸಿಲಿನ ವಾತಾವರಣ ಇರಲಿದ್ದು, ಕೆಲವೆಡೆ ಆಂಶಿಕವಾಗಿ ಮೋಡಕವಿದ ವಾತಾವರಣವಿರಲಿದೆ. ಮಳೆಯಾಗುವ ವೇಳೆ ಕೆಲವೆಡೆ ಬಿರುಗಾಳಿ ಸಹಿತ ಗುಡುಗು-ಮಿಂಚು ಕಾಣಿಸಿಕೊಳ್ಳುವ ಸಾಧ್ಯತೆಯಿರುವುದರಿಂದ ಹೊಲ-ಗದ್ದೆಗಳಲ್ಲಿ ಕೆಲಸ ಮಾಡುವ ರೈತರು ಹಾಗೂ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ತಿಳಿಸಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯಲು ಯಾವುದೇ ಪ್ರಮುಖ ಎಚ್ಚರಿಕೆ/ನಿಷೇಧವನ್ನು ವಿಧಿಸಲಾಗಿಲ್ಲ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Loading...
Unable to load recommendations.
Follow Us