Karnataka Rain: ಕರ್ನಾಟಕದಲ್ಲಿ ಇನ್ನೂ ಐದು ದಿನ ಮಳೆಯ ಆರ್ಭಟ, ಯೆಲ್ಲೋ ಅಲರ್ಟ್

ಕರ್ನಾಟಕ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rain: ಕರ್ನಾಟಕದಲ್ಲಿ ಇನ್ನೂ ಐದು ದಿನ ಮಳೆಯ ಆರ್ಭಟ, ಯೆಲ್ಲೋ ಅಲರ್ಟ್
ಕರ್ನಾಟಕ ಮಳೆ
Image Credit source: PTI
Rakesh Nayak Manchi

Updated on: May 22, 2023 | 2:42 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆಯ ಆರ್ಭಟ (Karnataka Rain) ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Karnataka Weather Forecast) ನೀಡಿದೆ. ಈ ಬಗ್ಗೆ ಮಾಹಿತಿ ನೀಡಿದ ಹವಾಮಾನ‌ ಇಲಾಖೆಯ ನಿರ್ದೇಶಕ ಪ್ರಸಾದ್, ರಾಜ್ಯದಲ್ಲಿ ಮಳೆಯ ಆರ್ಭಟ ಇನ್ನು ಐದು ದಿನ ಮುಂದುವರೆಯಲಿದೆ. ಕೊಡಗು, ಶಿವಮೊಗ್ಗ ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ಘೋಷಣೆ ಮಾಡಲಾಗಿದೆ ಎಂದರು.

ಉತ್ತರ ಒಳನಾಡಿನಲ್ಲಿ ಇಂದು ಭಾರೀ ಮಳೆಯಾಗಲಿದ್ದು, ನಾಳೆಯಿಂದ ಮಳೆ ಕಡಿಮೆ ಇರಲಿದೆ. ಇಂದಿನಿಂದ ನಾಲ್ಕು ದಿನಗಳ ಕಾಲ ದಕ್ಷಿಣ ಒಳನಾಡಿನಲ್ಲಿ ಬಹುತೇಕ ಕಡೆ ಮಳೆ ಆಗಲಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಭಾಗದಲ್ಲಿ ಮಳೆ ಜಾಸ್ತಿ ‌ಆಗಲಿದೆ. ಕೊಡಗು, ಶಿವಮೊಗ್ಗ ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಮೀನುಗಾರರಿಗೆ ಮುನ್ನೆಚ್ಚರಿಕೆ ಏನು ಇಲ್ಲ ಎಂದಿದ್ದಾರೆ.

ಇದನ್ನೂ ಓದಿ: Karnataka Rain: ಭಾನುವಾರ ಕರ್ನಾಟಕದಲ್ಲಿ ಭಾರೀ ಮಳೆಗೆ ಇಬ್ಬರು ಬಲಿ, ಎಲ್ಲೆಲ್ಲಿ ಏನೇನಾಯ್ತು?

ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಇಂದು ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. ತಾಪಮಾನ ಕಡಿಮೆ ಇದೆ, ಹೀಗಾಗಿ ನಿನ್ನೇಯಷ್ಟು ಜೋರಾಗಿ ಮಳೆ ಇರುವುದಿಲ್ಲ. ಬಿಬಿಎಂಪಿ ಅಧಿಕಾರಿಗಳಿಗೆ ಪ್ರತಿ ಮೂರುಗಂಟೆಗೆ ಹವಾಮಾನದ ಅಪ್ ಡೇಟ್ ನೀಡಲಾಗುತ್ತದೆ. 24 ಗಂಟೆಯೆ ಮುನ್ನೆಚ್ಚರಿಕೆ ನೀಡಲಾಗುತ್ತದೆ ಎಂದು ಹವಾಮಾನ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.

ನಿನ್ನೆ ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಚಿಕ್ಕಮಗಳೂರು ಮತ್ತು ಬೆಂಗಳೂರು ನಗರದಲ್ಲಿ ಒಟ್ಟು ಇಬ್ಬರು ಸಾವನ್ನಪ್ಪಿದ್ದರು. ಚಿಕ್ಕಮಗಳೂರಿನಲ್ಲಿ ಬೈಕ್ ಮೇಲೆ ಮರ ಬಿದ್ದು ಸವಾರು ಸಾವನ್ನಪ್ಪಿದ್ದರೆ, ಬೆಂಗಳೂರಿನಲ್ಲಿ ಕೆಆರ್​ ಸರ್ಕಲ್​ ಅಂಡರ್​ಪಾಸ್​ನಲ್ಲಿ ತುಂಬಿದ್ದ ನೀರಿನಲ್ಲಿ ಕಾರು ಮುಳುಗಿ ಯುವತಿಯೊಬ್ಬಳು ಸಾವನ್ನಪ್ಪಿದ್ದಳು. ಇದಲ್ಲದೆ, ಹಲವೆಡೆ ಮರಗಳು ಧರೆಗುರುಳಿ ಅವಾಂತರವೇ ಸೃಷ್ಟಿಯಾಗಿತ್ತು. ರಸ್ತೆಗಳಲ್ಲೆ ಕರೆಯಂತಾಗಿ ವಾಹನ ಸಂಚಾರಕ್ಕೆ ಪರದಾಟ ನಡೆಸಬೇಕಾಯಿತು. ಒಟ್ಟಾರೆಯಾಗಿ ಕೆಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವಸ್ಥಗೊಂಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:42 pm, Mon, 22 May 23

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us