AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ

Monsoon 2026: ಕರ್ನಾಟಕದಾದ್ಯಂತ ಮುಂದಿನ 24 ಗಂಟೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು, ಮೈಸೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಸಾರ್ವಜನಿಕರು ಮತ್ತು ವಾಹನ ಸವಾರರು ಜಾಗರೂಕರಾಗಿರಲು ಹವಾಮಾನ ಇಲಾಖೆ ಸೂಚಿಸಿದೆ.

Karnataka Weather Forecast: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ
ಸಾಂದರ್ಭಿಕ ಚಿತ್ರImage Credit source: gettyimages.com
ಭಾವನಾ ಹೆಗಡೆ
|

Updated on: Jun 17, 2026 | 7:22 AM

Share

ಬೆಂಗಳೂರು, ಜೂನ್ 17: ಭಾರತೀಯ ಹವಾಮಾನ ಇಲಾಖೆಯ (IMD) ವರದಿಯ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ (Weather) ಸಾಧ್ಯತೆಯಿದೆ. ಇದರೊಂದಿಗೆ ಕೆಲವು ಭಾಗಗಳಲ್ಲಿ ಬಲವಾದ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ಮುಖ್ಯಾಂಶಗಳು

  • ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
  • ಉತ್ತರ ಒಳನಾಡಿನಲ್ಲಿ ಗಂಟೆಗೆ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದೆ.
  • ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆ ಮುನ್ಸೂಚನೆ ಇದೆ.

ಎಲ್ಲೆಲ್ಲಿ ಮಳೆ?

ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಕಲ್ಬುರ್ಗಿ, ಬೀದರ್, ರಾಯಚೂರು, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ಆದರೆ, ಬಿರುಗಾಳಿಯ ತೀವ್ರತೆ ಇಲ್ಲಿ ಹೆಚ್ಚಿರಲಿದ್ದು, ವಿಜಯಪುರ, ಕಲ್ಬುರ್ಗಿ, ಬೆಳಗಾವಿ, ಧಾರವಾಡ, ಗದಗ್, ರಾಯಚೂರು, ಬೀದರ್ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಈ ಭಾಗದ ಸಾರ್ವಜನಿಕರು ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆ

ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಇದಲ್ಲದೆ ಚಿಕ್ಕಬಳ್ಳಾಪುರ, ಶಿವಮೊಗ್ಗ, ಬಳ್ಳಾರಿ, ಮೈಸೂರು, ದಾವಣಗೆರೆ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು ಹಾಗೂ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ಬಿರುಗಾಳಿ ಮತ್ತು ಮಳೆಯ ಮುನ್ಸೂಚನೆ ಇರುವುದರಿಂದ ವಾಹನ ಸವಾರರು ಮತ್ತು ಸಾರ್ವಜನಿಕರು ಸಂಚರಿಸುವಾಗ ಜಾಗರೂಕರಾಗಿರಬೇಕು. ವಿಶೇಷವಾಗಿ ಹಳೆಯ ಕಟ್ಟಡಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯದಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ