ಕರ್ನಾಟಕ ಹವಾಮಾನ ವರದಿ: ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಸಾಧಾರಣ ಮಳೆ, ಯೆಲ್ಲೋ ಅಲರ್ಟ್ ಘೋಷಣೆ!

ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಭಾಗಗಳಲ್ಲಿ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಹಾವೇರಿ ಸೇರಿದಂತೆ ಒಳನಾಡಿನಲ್ಲಿಯೂ ಹಗುರ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ನಾಳೆಯೂ ಇದೇ ವಾತಾವರಣ ಮುಂದುವರಿಯಲಿದೆ.

ಕರ್ನಾಟಕ ಹವಾಮಾನ ವರದಿ: ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಸಾಧಾರಣ ಮಳೆ, ಯೆಲ್ಲೋ ಅಲರ್ಟ್ ಘೋಷಣೆ!
ಕಾರವಾದಲ್ಲಿ ಮಳೆ

Updated on: Sep 26, 2026 | 6:56 AM

ಮುಖ್ಯಾಂಶಗಳು

  • ಕರಾವಳಿ ಹಾಗೂ ಮಲೆನಾಡು ಭಾಗದ ವಿವಿಧ ಜಿಲ್ಲೆಗಳಿಗೆ 'ಹಳದಿ ಅಲರ್ಟ್' ಘೋಷಿಸಲಾಗಿದೆ.
  • ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ.
  • ಉತ್ತರ ಹಾಗೂ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ.

ಬೆಂಗಳೂರು, ಸೆಪ್ಟೆಂಬರ್ 26: ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕೊಡಗು ಭಾಗಗಳಲ್ಲಿ ಮಳೆಯಾಗಲಿದೆ. ಇನ್ನು ಉತ್ತರ ಹಾಗೂ ದಕ್ಷಿಣ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ ಇದೆ. ಸೆಪ್ಟೆಂಬರ್ 27ರಂದೂ ಸಹ ಹಲವೆಡೆ ಮಳೆಯ ವಾತಾವರಣ ಮುಂದುವರಿಯಲಿದೆ.

ಕರಾವಳಿ ಮತ್ತು ಮಲೆನಾಡು ಭಾಗ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಈ ಪ್ರದೇಶಗಳಲ್ಲಿ ಜಾಗರೂಕತೆ ವಹಿಸಲು ಮುನ್ನೆಚ್ಚರಿಕೆಯಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂಬರುವ ದಿನಗಳಲ್ಲೂ ಕರಾವಳಿ ಹಾಗೂ ಮಲೆನಾಡಿನ ಪ್ರಮುಖ ಭಾಗಗಳಲ್ಲಿ ಮಳೆ ಮುಂದುವರಿಯಲಿದೆ.

ಉತ್ತರ ಮತ್ತು ದಕ್ಷಿಣ ಒಳನಾಡು

ಉತ್ತರ ಒಳನಾಡಿನ ಪ್ರಮುಖ ಜಿಲ್ಲೆಗಳಾದ ಹಾವೇರಿ, ಬೆಳಗಾವಿ, ಧಾರವಾಡ ಮತ್ತು ಗದಗ್ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ ಇದೆ. ಇನ್ನು ದಕ್ಷಿಣ ಒಳನಾಡಿನ ಮಲೆನಾಡು ಪಕ್ಕದ ಪ್ರದೇಶಗಳಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಸಾಧಾರಣ ತುಂತುರು ಮಳೆಯಾಗಲಿದೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವದಿಂದಾಗಿ ರಾಜ್ಯಾದ್ಯಂತ ಮಳೆಯ ವಾತಾವರಣ ಕಂಡುಬರುತ್ತಿದ್ದು, ತಾಪಮಾನದಲ್ಲಿಯೂ ಕೊಂಚ ಇಳಿಕೆಯಾಗಿದೆ. ಮಲೆನಾಡು ಮತ್ತು ಕರಾವಳಿ ಭಾಗದ ಜನರು ಹಾಗೂ ಪ್ರವಾಸಿಗರು ಜಾಗರೂಕರಾಗಿರಲು ಸೂಚಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
Loading...
Unable to load recommendations.
Follow Us