Karnataka Weather Forecast: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ!
Monsoon 2026: ಕರ್ನಾಟಕದ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರೈತರು ಮತ್ತು ಸಾರ್ವಜನಿಕರು ಸಿಡಿಲಿನ ಬಗ್ಗೆ ಎಚ್ಚರದಿಂದಿರಲು ಸೂಚಿಸಲಾಗಿದೆ. ಒಳನಾಡಿನ ಕೆಲವು ಭಾಗಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ.

ಬೆಂಗಳೂರು, ಮೇ 30: ರಾಜ್ಯದ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ (Weather) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ವರುಣನ ಆರ್ಭಟ ಹೆಚ್ಚಿರಲಿದ್ದು, ಕೆಲವು ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ.
ಮುಖ್ಯಾಂಶಗಳು
- ಕರಾವಳಿಯ ಮೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
- ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ.
- ಸಾರ್ವಜನಿಕರು ಹಾಗೂ ರೈತರು ಸಿಡಿಲು ಮತ್ತು ಗಾಳಿಗೆ ಎಚ್ಚರಿಕೆ ವಹಿಸಿ.
ಎಲ್ಲೆಲ್ಲಿ ಮಳೆ?
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ಗದಗ, ಕೊಪ್ಪಳ, ಧಾರವಾಡ ಮತ್ತು ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ (ಗಂಟೆಗೆ 40-50 ಕಿ.ಮೀ ವೇಗ) ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದ ಪ್ರಮುಖ ಭಾಗಗಳಲ್ಲಿ, ವಿಶೇಷವಾಗಿ ದಕ್ಷಿಣ ಒಳನಾಡಿನಲ್ಲಿ ವರುಣನ ಆರ್ಭಟ ಹೆಚ್ಚಿರಲಿದ್ದು, ಸಾರ್ವಜನಿಕರು ಮತ್ತು ರೈತರು ಬಿರುಗಾಳಿ ಹಾಗೂ ಸಿಡಿಲಿನ ಬಗ್ಗೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಉಳಿದಂತೆ ಉತ್ತರ ಒಣ ಹವೆಯೂ ಕೆಲವು ಜಿಲ್ಲೆಗಳಲ್ಲಿ ಮುಂದುವರಿಯಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.





