AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಕರಾವಳಿ ಮತ್ತು ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; ಯೆಲ್ಲೊ ಅಲರ್ಟ್ ಘೋಷಣೆ!

ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ಪ್ರಕಾರ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 24ರವರೆಗೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 20ರಿಂದ 22ರವರೆಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಮೈಸೂರು, ಕರಾವಳಿ ಸೇರಿದಂತೆ ವಿವಿಧ ಭಾಗಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka Weather Forecast: ಕರಾವಳಿ ಮತ್ತು ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; ಯೆಲ್ಲೊ ಅಲರ್ಟ್ ಘೋಷಣೆ!
ಸಾಂದರ್ಭಿಕ ಚಿತ್ರImage Credit source: PTI
ಭಾವನಾ ಹೆಗಡೆ
|

Updated on: Oct 19, 2026 | 7:02 AM

Share

ಮುಖ್ಯಾಂಶಗಳು

  • ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 24ರವರೆಗೆ ಭಾರಿ ಮಳೆ, ಯೆಲ್ಲೊ ಅಲರ್ಟ್.
  • ಕರಾವಳಿ ಭಾಗದಲ್ಲಿ ಅಕ್ಟೋಬರ್ 20ರಿಂದ 22ರವರೆಗೆ ಗುಡುಗು ಸಹಿತ ಭಾರಿ ಮಳೆ.
  • ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮನ್ಸೂಚನೆ.

ಬೆಂಗಳೂರು, ಅಕ್ಟೋಬರ್ 19: ಕರ್ನಾಟಕದ ವಿವಿಧ ಭಾಗಗಳಲ್ಲಿ ಇಂದಿನಿಂದ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ ಪ್ರಮುಖ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 24ರವರೆಗೆ ಹಾಗೂ ಕರಾವಳಿ ಭಾಗದಲ್ಲಿ ಅಕ್ಟೋಬರ್ 20ರಿಂದ 22ರವರೆಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಹಲವೆಡೆ ಗುಡುಗು, ಮಿಂಚು ಹಾಗೂ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆಯಿದೆ.

ಕರಾವಳಿ ಕರ್ನಾಟಕ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಇಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 20ರಿಂದ ಕರಾವಳಿ ಭಾಗದಲ್ಲಿ ಮಳೆ ಚುರುಕುಗೊಳ್ಳಲಿದ್ದು, ಯೆಲ್ಲೊ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಉತ್ತರ ಒಳನಾಡು

ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿ ಹಾಗೂ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದರೆ, ಬಿದರ್, ಕಲ್ಬುರ್ಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡು

ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಲಿದೆ. ಈ ಭಾಗದಲ್ಲಿ ಅಕ್ಟೋಬರ್ 24ರವರೆಗೆ ಯೆಲ್ಲೊ ಅಲರ್ಟ್ ಜಾರಿಯಲ್ಲಿದೆ.

 ನಾಳೆಯ ಹವಾಮಾನ ಮುನ್ಸೂಚನೆ

ನಾಳೆ (ಅ. 20) ದಕ್ಷಿಣ ಒಳನಾಡಿನ ಬೆಂಗಳೂರು (ನಗರ ಮತ್ತು ಗ್ರಾಮಾಂತರ), ಚಾಮರಾಜನಗರ, ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಜಾಗರೂಕರಾಗಿರಲು ಸೂಚಿಸಲಾಗಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿಯಲ್ಲಿ ಹಗುರ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ. ಪತ್ರಿಕೋದ್ಯಮ ಇವರು ಇಷ್ಟಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್‌ನಲ್ಲಿ ವೃತ್ತಿ ಜೀವನ ಆರಂಭಿಸಿರುವ ಇವರು, ಸಂಸ್ಥೆಯಲ್ಲಿ ಒಂದು ವರ್ಷದ ವೃತ್ತಿ ಅನುಭವ ಹೊಂದಿದ್ದಾರೆ. ರಾಜ್ಯ ಮತ್ತು ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಆಶಾ ಕಾರ್ಯಕರ್ತೆಯರು ಮತ್ತು ಸರ್ಕಾರದ ನಡುವೆ ಕೊಂಡಿಯಾದವರು ಇವರೇ
ಆಶಾ ಕಾರ್ಯಕರ್ತೆಯರು ಮತ್ತು ಸರ್ಕಾರದ ನಡುವೆ ಕೊಂಡಿಯಾದವರು ಇವರೇ
ತಿರುಪ್ಪರಣಕುಂದ್ರಮ್ ಬೆಟ್ಟದಲ್ಲಿ ದೀಪ ಬೆಳಗುತ್ತಿದ್ದಂತೆ ಭಾವುಕರಾದ ಭಕ್ತರು
ತಿರುಪ್ಪರಣಕುಂದ್ರಮ್ ಬೆಟ್ಟದಲ್ಲಿ ದೀಪ ಬೆಳಗುತ್ತಿದ್ದಂತೆ ಭಾವುಕರಾದ ಭಕ್ತರು
ಕ್ಷೇತ್ರ ಮರುವಿಂಗಡಣೆ ವಿಧೇಯಕ​ ಕುರಿತು ರಾಹುಲ್ ಗಾಂಧಿ ಸುದ್ದಿಗೋಷ್ಠಿ
ಕ್ಷೇತ್ರ ಮರುವಿಂಗಡಣೆ ವಿಧೇಯಕ​ ಕುರಿತು ರಾಹುಲ್ ಗಾಂಧಿ ಸುದ್ದಿಗೋಷ್ಠಿ
ಆಶಾ ಕಾರ್ಯಕರ್ತೆಯರಿಗೆ ಗುಡ್‌ನ್ಯೂಸ್‌: ಸಿಎಂ ಸಂಧಾನ ಸಕ್ಸಸ್‌
ಆಶಾ ಕಾರ್ಯಕರ್ತೆಯರಿಗೆ ಗುಡ್‌ನ್ಯೂಸ್‌: ಸಿಎಂ ಸಂಧಾನ ಸಕ್ಸಸ್‌
ಬಿಗ್​​ಬಾಸ್ ಸ್ಪರ್ಧಿಯ ಅನುಕರಣೆ ಮಾಡಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಯ ಅನುಕರಣೆ ಮಾಡಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಧರ್ಮ ದಂಗಲ್: ಕಾರ್ಯಕ್ರಮದಿಂದ ಅರ್ಧಕ್ಕೆ ಎದ್ದು ಹೋದ ವಿಜಯೇಂದ್ರ
ಧರ್ಮ ದಂಗಲ್: ಕಾರ್ಯಕ್ರಮದಿಂದ ಅರ್ಧಕ್ಕೆ ಎದ್ದು ಹೋದ ವಿಜಯೇಂದ್ರ
ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು
ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು
ಯಶಸ್ ಚಾಣಾಕ್ಷತೆಗೆ ಮೆಚ್ಚಿದ ಸುದೀಪ್; ಕಿಚ್ಚನ ಚಪ್ಪಾಳೆ ಫಿಕ್ಸ್?
ಯಶಸ್ ಚಾಣಾಕ್ಷತೆಗೆ ಮೆಚ್ಚಿದ ಸುದೀಪ್; ಕಿಚ್ಚನ ಚಪ್ಪಾಳೆ ಫಿಕ್ಸ್?
ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ನಮ್ಮ ಧ್ವನಿ ಅಡಗಿಸಲಾಗಲ್ಲ: ಡಿಕೆಶಿ
ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ನಮ್ಮ ಧ್ವನಿ ಅಡಗಿಸಲಾಗಲ್ಲ: ಡಿಕೆಶಿ
ಸಿದ್ದರಾಮಯ್ಯ ಕುರಿತ ಸ್ಟಿಂಗ್​ ಆಪರೇಷನ್ ಪ್ರಕರಣಕ್ಕೆ ಕೇರಳ ನಂಟು
ಸಿದ್ದರಾಮಯ್ಯ ಕುರಿತ ಸ್ಟಿಂಗ್​ ಆಪರೇಷನ್ ಪ್ರಕರಣಕ್ಕೆ ಕೇರಳ ನಂಟು