Karnataka Weather Forecast: ಕರಾವಳಿ ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್​​, ಈ ಜಿಲ್ಲೆಗಳಲ್ಲಿಯೂ ಭಾರಿ ಮಳೆ ನಿರೀಕ್ಷೆ

Monsoon 2026: ಕರ್ನಾಟಕದಲ್ಲಿ ಮುಂಗಾರು ಬಿರುಸುಗೊಂಡಿದ್ದು, ಕರಾವಳಿಯ ಮೂರು ಜಿಲ್ಲೆಗಳಿಗೆ ಶುಕ್ರವಾರ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ. ಜೂನ್ 30 ರವರೆಗೆ ಮಲೆನಾಡು ಹಾಗೂ ರಾಜ್ಯದ ವಿವಿಧೆಡೆ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಉಳಿದಂತೆ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಮಾತ್ರ ವರ್ಷಧಾರೆ ನಿರೀಕ್ಷಿಸಲಾಗಿದ್ದು, ಬಹುತೇಕ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka Weather Forecast: ಕರಾವಳಿ ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್​​, ಈ ಜಿಲ್ಲೆಗಳಲ್ಲಿಯೂ ಭಾರಿ ಮಳೆ ನಿರೀಕ್ಷೆ
ಮಳೆ
Image Credit source: PTI

Updated on: Jun 24, 2026 | 5:58 PM

ಬೆಂಗಳೂರು, ಜೂನ್​​ 24: ರಾಜ್ಯದಲ್ಲಿ ನೈಋತ್ಯ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಮೂರು ಕರಾವಳಿ ಜಿಲ್ಲೆಗಳಿಗೆ ವಿಶೇಷವಾಗಿ ಶುಕ್ರವಾರದಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆಯ ತೀವ್ರತೆ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆಯಿದ್ದು, ಜೂನ್ 27 ಮತ್ತು 28ರವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್ 25ರಿಂದ ಮಲೆನಾಡು ಭಾಗದಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಳ್ಳಲಿದ್ದು, ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಎಲ್ಲೆಲ್ಲಿ ಮಳೆ ಮುನ್ಸೂಚನೆ?

ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ನಿರೀಕ್ಷಿಸಲಾಗಿದೆ. ಗಂಟೆಗೆ 30-40 ಕಿಲೋ ಮೀಟರ್​​ ವೇಗದ ಗಾಳಿಯ ಜೊತೆಗೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭಾರಿ ವರ್ಷಧಾರೆಯಾಗಲಿದ್ದು, ದಕ್ಷಿಣ ಕನ್ನಡದ ಹಲವೆಡೆಯೂ ಗಾಳಿ ಸಹಿತ ಸಾಧಾರಣ ಮಳೆ ಅಂದಾಜಿಸಲಾಗಿದೆ. ಉಳಿದಂತೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರದಲ್ಲಿಯೂ ಸಣ್ಣ ಪ್ರಮಾಣದ ಮಳೆಯ ಮುನ್ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಭೀಕರ ಬರಗಾಲದ ವದಂತಿ ಸುಳ್ಳು; ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದ ಹವಾಮಾನ ತಜ್ಞರು

ಹೇಗಿರಲಿದೆ ಬೆಂಗಳೂರು ವೆದರ್​​?

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಕೆಲ ಪ್ರದೇಶಗಳಲ್ಲಿ ಮಾತ್ರ ಗಾಳಿಯ ಜೊತೆಗೆ ಅಲ್ಪ ಪ್ರಮಾಣದ ಮಳೆಯನ್ನು ನಿರೀಕ್ಷಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 5:56 pm, Wed, 24 June 26

Follow Us