Karnataka Weather Forecast: ಕರಾವಳಿಯಲ್ಲಿ ಅಬ್ಬರಿಸಲಿರುವ ವರುಣ, ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!

Monsoon 2026: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಬೆಳಗಾವಿ ಸೇರಿದಂತೆ 10 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಉತ್ತರ ಒಳನಾಡಿನ ಹಲವೆಡೆ ಗಂಟೆಗೆ 40-50 ಕಿಮೀ ವೇಗದ ಬಿರುಗಾಳಿ ಸಹಿತ ಗುಡುಗು ಮಳೆಯಾಗಲಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಲು ಹವಾಮಾನ ಇಲಾಖೆ ಸೂಚಿಸಿದೆ.

Karnataka Weather Forecast: ಕರಾವಳಿಯಲ್ಲಿ ಅಬ್ಬರಿಸಲಿರುವ ವರುಣ, ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!
ಕರಾವಳಿಯಲ್ಲಿ ಅಬ್ಬರಿಸಲಿರುವ ವರುಣ, ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!

Updated on: Jun 07, 2026 | 7:58 AM

ಬೆಂಗಳೂರು, ಜೂನ್ 07: ರಾಜ್ಯದಲ್ಲಿ ಮುಂಗಾರು ಮಳೆ (Weather) ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ.

ಮುಖ್ಯಾಂಶಗಳು

  • ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
  • ರಾಜ್ಯದ ಒಟ್ಟು ಹತ್ತು ಜಿಲ್ಲೆಗಳಲ್ಲಿ ಭಾರಿ ಮಳೆಯ ಯೆಲ್ಲೋ ಅಲರ್ಟ್ ನೀಡಲಾಗಿದೆ.
  • ಉತ್ತರ ಒಳನಾಡಿನಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ರಾವಳಿಗೆ ‘ಆರೆಂಜ್ ಅಲರ್ಟ್’ ಭೀತಿ

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿರಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಭಾರಿ ಇಂದ ಅತಿ ಭಾರಿ ಮಳೆ ಹಾಗೂ ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ನಿರಂತರ ಬಲವಾದ ಗಾಳಿ ಬೀಸಬಹುದು. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಈ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದ ಒಟ್ಟು 10 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಜಾರಿಗೊಳಿಸಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು ಸೇರಿದಂತೆ ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಹಾಗೂ ರೈತರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಬಿರುಗಾಳಿ ಮತ್ತು ಗುಡುಗಿನ ಸಂದರ್ಭದಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಕೋರಲಾಗಿದೆ.

ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆ

ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಮಳೆಯ ಪ್ರಭಾವ ಹೆಚ್ಚಿರಲಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಬಲವಾದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಬಾಗಲಕೋಟೆ, ಬೀದರ್, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
Follow Us