AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ರಾಜ್ಯದ ಈ ಜಿಲ್ಲೆಗಳಲ್ಲಿ ಜೋರಾಗಲಿದೆ ಮಳೆಯ ಅಬ್ಬರ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್ ಘೋಷಣೆ!

Monsoon 2026: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಹವಾಮಾನ ಇಲಾಖೆಯು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಘೋಷಿಸಿದೆ. ಇನ್ನು ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಮುನ್ನೆಚ್ಚರಿಕೆ ನೀಡಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರೆಡೆ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಭಾಗದಲ್ಲಿ ಬಲವಾದ ಗಾಳಿ ಬೀಸಲಿದೆ.

Karnataka Weather Forecast: ರಾಜ್ಯದ ಈ ಜಿಲ್ಲೆಗಳಲ್ಲಿ ಜೋರಾಗಲಿದೆ ಮಳೆಯ ಅಬ್ಬರ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್ ಘೋಷಣೆ!
ರಾಜ್ಯದ ಈ ಜಿಲ್ಲೆಗಳಲ್ಲಿ ಜೋರಾಗಲಿದೆ ಮಳೆಯ ಅಬ್ಬರ
ಭಾವನಾ ಹೆಗಡೆ
|

Updated on:Jun 10, 2026 | 7:54 AM

Share

ಬೆಂಗಳೂರು, ಜೂನ್ 10: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Weather) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವರುಣನ ಅಬ್ಬರ ಜೋರಾಗಿರಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ.

ಮುಖ್ಯಾಂಶಗಳು

  • ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
  • ಉತ್ತರ ಕನ್ನಡ, ಚಾಮರಾಜನಗರ ಸೇರಿದಂತೆ ಹನ್ನೊಂದು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
  • ಬೆಂಗಳೂರು ಹಾಗೂ ಮೈಸೂರಿನ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಕರ್ನಾಟಕಕ್ಕೆ ‘ಆರೆಂಜ್ ಅಲರ್ಟ್’

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ‘ಅತಿ ಭಾರೀ ಮಳೆ’ಯಾಗುವ ಮುನ್ಸೂಚನೆ ಇರುವುದರಿಂದ ಈ ಭಾಗಕ್ಕೆ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ತೀವ್ರ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಈ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಹಲವೆಡೆ ವರುಣಾರ್ಭಟ

ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಬಲವಾದ ಗಾಳಿ ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೂ ಹವಾಮಾನ ಇಲಾಖೆ **ಯೆಲ್ಲೋ ಅಲರ್ಟ್** ಪ್ರಕಟಿಸಿದೆ. ಉಳಿದಂತೆ ಉತ್ತರ ಒಳನಾಡಿನ ಬೆಳಗಾವಿ, ಗದಗ ಹಾಗೂ ಹಾವೇರಿ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಅನ್ವಯಿಸಲಿದೆ.

ಬೆಂಗಳೂರಿನಲ್ಲೂ ಮಳೆ

ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮೈಸೂರು, ಮಂಡ್ಯ, ಹಾಸನ, ಶಿವಮೊಗ್ಗ, ರಾಮನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಅಥವಾ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ತೀರದಲ್ಲಿ ಗಾಳಿಯ ವೇಗ ಹೆಚ್ಚಾಗಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ತಗ್ಗು ಪ್ರದೇಶಗಳ ನಿವಾಸಿಗಳು ಹಾಗೂ ಸಾರ್ವಜನಿಕರು ಹವಾಮಾನ ಇಲಾಖೆಯ ಮುನ್ನೆಚ್ಚರಿಕೆಗಳನ್ನು ಪಾಲಿಸಲು ಕೋರಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:53 am, Wed, 10 June 26

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More