Karnataka Weather Forecast: 5 ಜಿಲ್ಲೆಗಳಿಗೆ ನಾಳೆ ಆರೆಂಜ್​​ ಅಲರ್ಟ್; ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ವರುಣಾರ್ಭಟ

Monsoon 2026: ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನ 5 ಜಿಲ್ಲೆಗಳಿಗೆ ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜುಲೈ 6ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ನದಿ, ಜಲಾಶಯಗಳಿಗೆ ಇಳಿಯದಂತೆ ಸಾರ್ವಜನಿಕರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಅಲ್ಪ ಪ್ರಮಾಣ ವರ್ಷಧಾರೆ ನಿರೀಕ್ಷಿಸಲಾಗಿದೆ.

Karnataka Weather Forecast: 5 ಜಿಲ್ಲೆಗಳಿಗೆ ನಾಳೆ ಆರೆಂಜ್​​ ಅಲರ್ಟ್; ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ವರುಣಾರ್ಭಟ
ಮಳೆ
Image Credit source: PTI

Updated on: Jun 30, 2026 | 5:35 PM

ಮುಖ್ಯಾಂಶಗಳು

  • ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 6ರ ವರೆಗೆ ಭಾರಿ ಮಳೆ
  • ಭಾರಿ ಗಾಳಿಯ ಜೊತೆಗೆ ಕೆಲ ಭಾಗಗಳಲ್ಲಿ ವರುಣಾರ್ಭಟ ನಿರೀಕ್ಷೆ
  • ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ನಾಳೆ ಅಲ್ಪ ವರ್ಷಧಾರೆ ಸಾಧ್ಯತೆ

ಬೆಂಗಳೂರು, ಜೂನ್​​ 30: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಜುಲೈ 6ರವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಅವಧಿಯಲ್ಲಿ ವ್ಯಾಪಕವಾಗಿ ಭಾರೀ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಐಎಂಡಿ ಮುನ್ಸೂಚನೆ ಹಿನ್ನೆಲೆಯಲ್ಲಿ ಮಿಂಚು ಮತ್ತು ಭಾರೀ ಮಳೆಯ ಸಂದರ್ಭ ರೈತರು ಕೃಷಿ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ. ಪ್ರವಾಸಿಗರು, ಮೀನುಗಾರರು ಹಾಗೂ ಸಾರ್ವಜನಿಕರು ನದಿಗಳು ಮತ್ತು ಇತರೆ ಜಲಾಶಯಗಳಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

5 ಜಿಲ್ಲೆಗಳಿಗೆ ನಾಳೆ ಆರೆಂಜ್​​ ಅಲರ್ಟ್​​


ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿಲೋ ಮೀಟರ್​​ ವೇಗದ ಗಾಳಿಯ ಜೊತೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ನಾಳೆ ಆರೆಂಜ್​​ ಅಲರ್ಟ್​​ ಘೋಷಿಸಲಾಗಿದೆ. ಉಳಿದಂತೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ವರ್ಷಧಾರೆ ಅಂದಾಜಿಸಲಾಗಿದೆ.

ಇದನ್ನೂ ಓದಿ: ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!

ಬೆಂಗಳೂರಲ್ಲಿಯೂ ಮಳೆ ಸಾಧ್ಯತೆ


ಬೆಂಗಳೂರು ನಗರದಾದ್ಯಂತ ನಾಳೆ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದೆ. ಅದಾಗಿಯೂ ತೀವ್ರ ಗಾಳಿಯ ಜೊತೆಗೆ ಕೆಲ ಪ್ರದೇಶಗಳಲ್ಲಿ ಅಲ್ಪ ಪ್ರಮಾಣದ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

 

Published On - 5:35 pm, Tue, 30 June 26

Follow Us