Karnataka Weather Forecast: ಜುಲೈ ಆರಂಭದವರೆಗೂ ರಾಜ್ಯದಲ್ಲಿ ಮಳೆ ಅಬ್ಬರ; ಕರಾವಳಿಯಲ್ಲಿ ವರುಣಾರ್ಭಟ
Monsoon 2026: ಕರ್ನಾಟಕದಲ್ಲಿ ಜುಲೈ 1 ರವರೆಗೆ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದ್ದು, ಜೂನ್ 29 ರಂದು ಕರಾವಳಿ ಹಾಗೂ ಮಲೆನಾಡಿನ 6 ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು 'ಆರೆಂಜ್ ಅಲರ್ಟ್' ಘೋಷಿಸಿದೆ. ಮುಂದಿನ 24 ಗಂಟೆಗಳಲ್ಲಿಯೂ ರಾಜ್ಯದ ಹಲವೆಡೆ ಮಳೆ ನಿರೀಕ್ಷಿಸಲಾಗಿದ್ದು, ವಾತಾವರಣ ಸಂಬಂಧಿತ ಮಾಹಿತಿ ಇಲ್ಲಿದೆ.

ಮುಖ್ಯಾಂಶಗಳು
- ಜುಲೈ 1ರವರೆಗೂ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ
- ಜೂನ್ 29ರಂದು 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
- ಮಳೆಯ ಅಬ್ಬರದ ಜೊತೆ ಭಾರಿ ಗಾಳಿಯ ಬಗ್ಗೆಯೂ ಎಚ್ಚರಿಕೆ
ಬೆಂಗಳೂರು, ಜೂನ್ 25: ರಾಜ್ಯದ ವಿವಿಧೆಡೆ ಉತ್ತಮ ಮಳೆಯಾಗುತ್ತಿರುವ ನಡುವೆ ಜುಲೈ 1ರವರೆಗೂ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಜೂನ್ 29ರಂದು ಭಾರಿ ಪ್ರಮಾಣದಲ್ಲಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಜೂನ್ 26ರಿಂದ ಜುಲೈ ಆರಂಭದವರೆಗೂ ಈ ಭಾಗದಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿಯೂ ಗಾಳಿ ಸಹಿತ ಉತ್ತಮ ಮಳೆಯಾಗಲಿರುವ ಎಚ್ಚರಿಕೆ ನೀಡಲಾಗಿದೆ.
ಮಳೆ ಮುನ್ನೆಚ್ಚರಿಕೆ
likely to occur at a few places over Ballari, Bengaluru (Rural), Bengaluru (Urban), Chamarajanagara, Chikkaballapura, Chitradurga, Davanagere, Kodagu, Kolar, Mandya, Mysuru, Ramanagara, Tumakuru and Vijayanagara districts.@KarnatakaVarthe #KarnatakaRains #KSNDMC
— Karnataka State Natural Disaster Monitoring Centre (@KarnatakaSNDMC) June 25, 2026
ಮುಂದಿನ 24 ಗಂಟೆಗಳಲ್ಲಿ ಕರಾವಳಿ ಭಾಗದ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಪ್ರದೇಶಗಳಲ್ಲಿ ಭಾರಿ ಗಾಳಿ ಸಹಿತ ಮಳೆಯಾಗಲಿದ್ದು, ಉಳಿದ ಪ್ರದೇಶಗಳಲ್ಲಿ ಸಾಧಾರಣ ವರ್ಷಧಾರೆ ನಿರೀಕ್ಷಿಸಲಾಗಿದೆ. ಹಾಗೆಯೇ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಗಾಳಿಯ ವೇಗ ಗಂಟೆಗೆ 30-40 ಕಿ.ಮೀ ಇರಲಿದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವೆಡೆಯೂ ಮಳೆ ಸಾಧ್ಯತೆ ಇದೆ.
ಇದನ್ನೂ ಓದಿ: ಡೆಡ್ ಸ್ಟೋರೇಜ್ನತ್ತ ಕಬಿನಿ ಡ್ಯಾಂ; ಬೆಂಗಳೂರಿಗೆ ಕೆಆರ್ಎಸ್ನಿಂದ ಮಾತ್ರ ನೀರು
ಜೂನ್ 29ರಂದು 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
— Karnataka State Natural Disaster Monitoring Centre (@KarnatakaSNDMC) June 25, 2026
ಜೂನ್ 29ರಂದು ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದೆ. ಹೀಗಾಗಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.




