AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಮುಂದಿನ ಕೆಲವು ದಿನ ಭಾರಿ ಮಳೆ; ಉಡುಪಿ, ಮಂಗಳೂರು ಸೇರಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!

Monsoon 2026: ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಜಲಪಾತ ಹಾಗೂ ನದಿ ತೀರಕ್ಕೆ ತೆರಳದಂತೆ ಸಾರ್ವಜನಿಕರಿಗೆ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ನೆಚ್ಚರಿಕೆ ನೀಡಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗಲಿದೆ.

Karnataka Weather Forecast: ಮುಂದಿನ ಕೆಲವು ದಿನ ಭಾರಿ ಮಳೆ; ಉಡುಪಿ, ಮಂಗಳೂರು ಸೇರಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!
ಮುಂದಿನ ಕೆಲವು ದಿನ ಭಾರಿ ಮಳೆ
ಭಾವನಾ ಹೆಗಡೆ
|

Updated on: Jul 01, 2026 | 8:03 AM

Share

ಮುಖ್ಯಾಂಶಗಳು

  • ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
  • ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಸೇರಿದಂತೆ ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್.
  • ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು, ಜುಲೈ 01: ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವ (Weather) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿಲೋಮೀಟರ್ ಇರಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪ್ರಮುಖ ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ.

ಯಾವೆಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ?

ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ತೀವ್ರ ಜಾಗ್ರತೆ ವಹಿಸಲು ಸೂಚಿಸಲಾಗಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಈ ಜಿಲ್ಲೆಗಳೀಗೆ ಆರೆಂಜ್ ಅಲರ್ಟ್​ ನೀಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಾರ್ವಜನಿಕರು ನದಿ, ಜಲಪಾತಗಳ ಬಳಿ ಹೋಗದಂತೆ ಮತ್ತು ಹಳೆಯ ಮರಗಳು ಹಾಗೂ ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರ ಎಚ್ಚರಿಸಿದೆ.

ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್?

ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್​ ನೀಡಲಾಗಿದೆ.

ಪ್ರಾದೇಶಿಕ ಹವಾಮಾನದ ವಿವರ

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿಯಲ್ಲಿ ಭಾರಿ ಮಳೆಯಾಗಲಿದ್ದರೆ, ಬಾಗಲಕೋಟೆ, ಬಿದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನದಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಮೈಸೂರು, ಕೋಲಾರ, ಮಂಡ್ಯ, ಕೊಡಗು, ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು