AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ಕರಾವಳಿ, ಮಲೆನಾಡಿನಲ್ಲಿ ಮಳೆ ಸಾಧ್ಯತೆ; ನವೆಂಬರ್ 29ರಿಂದ ರಾಜ್ಯಾದ್ಯಂತ ಒಣಹವೆ

ಕರ್ನಾಟಕದ ಇಂದಿನ ಹವಾಮಾನ ವರದಿ ಇಲ್ಲಿದೆ. ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳು ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ನವೆಂಬರ್ 29 ಮತ್ತು 30ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಒಣಹವೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಕರ್ನಾಟಕ ಹವಾಮಾನ ವರದಿ: ಕರಾವಳಿ, ಮಲೆನಾಡಿನಲ್ಲಿ ಮಳೆ ಸಾಧ್ಯತೆ; ನವೆಂಬರ್ 29ರಿಂದ ರಾಜ್ಯಾದ್ಯಂತ ಒಣಹವೆ
ಸಾಂದರ್ಭಿಕ ಚಿತ್ರImage Credit source: PTI
ಭಾವನಾ ಹೆಗಡೆ
|

Updated on: Nov 27, 2026 | 7:40 AM

Share

ಮುಖ್ಯಾಂಶಗಳು

  • ಇಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.
  • ಮಲೆನಾಡಿನ ಆರು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಸಾಧಾರಣ ಮಳೆ ಮುನ್ಸೂಚನೆ.
  • ನವೆಂಬರ್ 29ರಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ.

ಬೆಂಗಳೂರು, ನವೆಂಬರ್ 27: ರಾಜ್ಯದಲ್ಲಿ ಹವಾಮಾನದಲ್ಲಿ ಕೊಂಚ ಬದಲಾವಣೆ ಕಂಡುಬರುವ ಸಾಧ್ಯತೆಯಿದೆ. ನವೆಂಬರ್ 27 ಮತ್ತು 28ರಂದು ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಆದರೆ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಇನ್ನು ನವೆಂಬರ್ 29 ಮತ್ತು 30ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಬೆಂಗಳೂರಿನ ಹವಾಮಾನ ಹೇಗಿರಲಿದೆ? ಇಲ್ಲಿದೆ ವಿವರ.

ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆ ಸಾಧ್ಯತೆ

ಇಂದು ಮತ್ತು ನಾಳೆ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಒಣಹವೆ ಇರಲಿದೆ. ಮೀನುಗಾರರು ಹಾಗೂ ಕರಾವಳಿ ಭಾಗದ ಜನರು ಸ್ಥಳೀಯ ಹವಾಮಾನ ಮುನ್ಸೂಚನೆ ಗಮನಿಸುವುದು ಉತ್ತಮ. ನವೆಂಬರ್ 29 ಮತ್ತು 30ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಸೇರಿದಂತೆ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ.

ಉತ್ತರ ಒಳನಾಡು: ಎಲ್ಲಾ ಜಿಲ್ಲೆಗಳಲ್ಲೂ ಒಣಹವೆ

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳಲ್ಲೂ ಮಳೆಯ ಮುನ್ಸೂಚನೆ ಇಲ್ಲ. ಇಂದಿನಿಂದ 30ರವರೆಗೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಲೆನಾಡು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ನವೆಂಬರ್ 27 ಮತ್ತು 28ರಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇನ್ನು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ನವೆಂಬರ್ 29 ಮತ್ತು 30ರಂದು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಒಣಹವೆಯೇ ಮುಂದುವರಿಯಲಿದೆ.

ನಾಳೆಯ ಹವಾಮಾನ ಹೇಗಿರಲಿದೆ?

ನವೆಂಬರ್ 28ರಂದು ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ನಿರೀಕ್ಷಿಸಲಾಗಿಲ್ಲ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ಇಲ್ಲ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗಬಹುದು. ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ. ಬೆಂಗಳೂರಿನ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿಯೂ ಮಳೆಯ ಮುನ್ಸೂಚನೆ ಇಲ್ಲ. ಹೀಗಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆರಹಿತ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ. ರೈತರು ಕೃಷಿ ಚಟುವಟಿಕೆಗಳನ್ನು ಯೋಜಿಸುವಾಗ ಸ್ಥಳೀಯ ಹವಾಮಾನ ವರದಿಯನ್ನು ಗಮನಿಸುವುದು ಸೂಕ್ತ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ. ಪತ್ರಿಕೋದ್ಯಮ ಇವರು ಇಷ್ಟಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್‌ನಲ್ಲಿ ವೃತ್ತಿ ಜೀವನ ಆರಂಭಿಸಿರುವ ಇವರು, ಸಂಸ್ಥೆಯಲ್ಲಿ ಒಂದು ವರ್ಷದ ವೃತ್ತಿ ಅನುಭವ ಹೊಂದಿದ್ದಾರೆ. ರಾಜ್ಯ ಮತ್ತು ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More