Karnataka Weather Forecast: ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ, ಬಿರುಗಾಳಿಯ ಆರ್ಭಟ!

Monsoon 2026: ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ, ಉತ್ತರ ಒಳನಾಡು ಮತ್ತು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 60 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಸಾರ್ವಜನಿಕರು ಹಾಗೂ ರೈತರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ.

Karnataka Weather Forecast: ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ, ಬಿರುಗಾಳಿಯ ಆರ್ಭಟ!
ಮುಂಬರುವ ದಿನಗಳಲ್ಲಿ ಭಾರೀ ಮಳೆಯ ಎಚ್ಚರಿಕೆ
Image Credit source: MediaForge AI

Updated on: May 29, 2026 | 7:46 AM

ಬೆಂಗಳೂರು, ಮೇ 29: ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಹವಾಮಾನದಲ್ಲಿ (Weather) ಭಾರಿ ಏರುಪೇರಾಗಲಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿಯ ಆರ್ಭಟ ಜೋರಿರಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಮುಖ್ಯಾಂಶಗಳು

  • ಕರಾವಳಿ ಮತ್ತು ಒಳನಾಡಿನ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆ ನಿರೀಕ್ಷೆ.
  • ಕಲ್ಬುರ್ಗಿ, ರಾಯಚೂರು ಭಾಗದಲ್ಲಿ ಭಾರಿ ಬಿರುಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ.
  • ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಗಾಳಿ, ಮಳೆ ಸಾಧ್ಯತೆ.

ಎಲ್ಲೆಲ್ಲಿ ಮಳೆ?

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಕಲ್ಬುರ್ಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹವಾಮಾನದ ತೀವ್ರತೆ ಹೆಚ್ಚಿರಲಿದ್ದು, ಗಂಟೆಗೆ 50-60 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ. ಇದರೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಕೊಪ್ಪಳ ಜಿಲ್ಲೆಯಲ್ಲೂ ಸಹ ಗಂಟೆಗೆ 40-50 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆ ಸುರಿಯಬಹುದು.

ಇನ್ನು ದಕ್ಷಿಣ ಒಳನಾಡಿನ ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ವಿಜಯನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಮಳೆ ನಿರೀಕ್ಷಿಸಲಾಗಿದೆ. ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಗಾಳಿಯ ವೇಗ ಗಂಟೆಗೆ 30-40 ಕಿ.ಮೀ ಇರಲಿದ್ದು, ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಅಲ್ಲದೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಜಿಟಿಜಿಟಿ ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸಾರ್ವಜನಿಕರು ಮತ್ತು ರೈತರು ಮುನ್ನೆಚ್ಚರಿಕೆ ವಹಿಸಲು ಕೋರಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
Follow Us