AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಹವಾಮಾನ ಮುನ್ಸೂಚನೆ: ಬೆಂಗಳೂರು ಸೇರಿ ರಾಜ್ಯಾದ್ಯಂತ ಮಳೆ ಮುನ್ನೆಚ್ಚರಿಕೆ: ಗಾಳಿ ಸಹಿತ ಸಾಧಾರಣ ಮಳೆಯ ಸಾಧ್ಯತೆ

ಇಂದು ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಹಾಗೂ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗಗಳ ಇಂದಿನ ಸಂಪೂರ್ಣ ಹವಾಮಾನ ವರದಿ ಇಲ್ಲಿದೆ.

ಕರ್ನಾಟಕದ ಹವಾಮಾನ ಮುನ್ಸೂಚನೆ: ಬೆಂಗಳೂರು ಸೇರಿ ರಾಜ್ಯಾದ್ಯಂತ ಮಳೆ ಮುನ್ನೆಚ್ಚರಿಕೆ: ಗಾಳಿ ಸಹಿತ ಸಾಧಾರಣ ಮಳೆಯ ಸಾಧ್ಯತೆ
ಬೆಂಗಳೂರು ಸೇರಿ ರಾಜ್ಯಾದ್ಯಂತ ಮಳೆ ಮುನ್ನೆಚ್ಚರಿಕೆ
ಭಾವನಾ ಹೆಗಡೆ
|

Updated on:Sep 17, 2026 | 7:40 AM

Share

ಮುಖ್ಯಾಂಶಗಳು

  • ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
  • ಬಲವಾದ ಬಿರುಗಾಳಿ ಬೀಸುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸೂಕ್ತ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ.
  • ಕರಾವಳಿ ಮತ್ತು ಉತ್ತರ ಒಳನಾಡಿನಲ್ಲೂ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಬೆಂಗಳೂರು, ಸೆಪ್ಟೆಂಬರ್ 17: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಇಂದು ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಮಳೆ ಸುರಿಯುವ ವಾತಾವರಣವಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲೂ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ತುಮಕೂರು, ಶೀವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 17 ಮತ್ತು 18ರಂದು ಗುಡುಗು-ಮಿಂಚು ಸಹಿತ ಮಳೆಯಾಗಲಿದೆ. ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಪ್ರಯಾಣಿಕರು ಎಚ್ಚರ ವಹಿಸಬೇಕು.

ಉತ್ತರ ಒಳನಾಡು ಹಾಗೂ ಕರಾವಳಿ ಸ್ಥಿತಿಗತಿ

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರ ಮಳೆಯಾಗಲಿದೆ. ಆದರೆ, ಸೆಪ್ಟೆಂಬರ್ 18ರಂದು ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಹಾಗೂ ವಿಜಯಪುರ ಸೇರಿದಂತೆ ಹೆಚ್ಚಿನ ಜಿಲ್ಲೆಗಳಲ್ಲಿ ಬಲವಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಇಂದು, ನಾಳೆ ಎರಡೂ ದಿನಗಳಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸಾರ್ವಜನಿಕರು ಹೊರಗೆ ಹೋಗುವಾಗ ಛತ್ರಿ ಹಾಗೂ ರೇನ್‌ಕೋಟ್ ಧರಿಸುವುದು ಮತ್ತು ಗುಡುಗು-ಮಿಂಚಿನ ಸಮಯದಲ್ಲಿ ಮರದ ಅಡಿಯಲ್ಲಿ ನಿಲ್ಲದೆ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವುದು ಸೂಕ್ತ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:39 am, Thu, 17 September 26

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಓಂಪ್ರಕಾಶ್ ರಾವ್ ನನ್ನ ಗುರುಗಳು: ‘ಪ್ರೇಮದ ಊರಲಿ’ ಡೈರೆಕ್ಟರ್ ಹೆಮ್ಮೆಯ ಮಾತು
ಓಂಪ್ರಕಾಶ್ ರಾವ್ ನನ್ನ ಗುರುಗಳು: ‘ಪ್ರೇಮದ ಊರಲಿ’ ಡೈರೆಕ್ಟರ್ ಹೆಮ್ಮೆಯ ಮಾತು
‘ಪ್ರೇಮದ ಊರಲಿ’ ನಟಿಯರಿಗೆ ಕನ್ನಡದ ಬಗ್ಗೆ ಸಂಕಲ್ಪ ಮಾಡಿಸಿದ ರಂಗಾಯಣ ರಘು
‘ಪ್ರೇಮದ ಊರಲಿ’ ನಟಿಯರಿಗೆ ಕನ್ನಡದ ಬಗ್ಗೆ ಸಂಕಲ್ಪ ಮಾಡಿಸಿದ ರಂಗಾಯಣ ರಘು
ಕೊನೆಗೂ ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್
ಕೊನೆಗೂ ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ
ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ
ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ
ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ
ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ
ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ
ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ
ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್
ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್
ದಾವಣಗೆರೆ: ಭತ್ತದ ವ್ಯಾಪಾರಿಯಿಂದ 4 ಕೋಟಿ ವಂಚನೆ ಆರೋಪ
ದಾವಣಗೆರೆ: ಭತ್ತದ ವ್ಯಾಪಾರಿಯಿಂದ 4 ಕೋಟಿ ವಂಚನೆ ಆರೋಪ
ಪ್ರತಿಭಟನೆ ವೇಳೆ ಬ್ಯಾರಿಕೇಡ್ ಹತ್ತಿ ಧ್ವಜ ಬೀಸಿದ ರಾಹುಲ್ ಗಾಂಧಿ!
ಪ್ರತಿಭಟನೆ ವೇಳೆ ಬ್ಯಾರಿಕೇಡ್ ಹತ್ತಿ ಧ್ವಜ ಬೀಸಿದ ರಾಹುಲ್ ಗಾಂಧಿ!