AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಬೆಂಗಳೂರು ಸೇರಿ ಹಲವೆಡೆ ನಾಳೆಯೂ ಮಳೆ, ಕೆಲ ಜಿಲ್ಲೆಗಳಲ್ಲಿ ವಿಪರೀತ ತಾಪಮಾನದ ಎಚ್ಚರಿಕೆ

Monsoon 2026: ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆ ಮತ್ತು ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನಾಳೆ ಮಳೆಯಾಗುವ ನಿರೀಕ್ಷೆಯಿದೆ. ಆದರೆ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಣ ಹವೆ ಇದ್ದು, ಬೀದರ್, ಕಲಬುರಗಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ 42 ಡಿಗ್ರಿ ಸೆಲ್ಸಿಯಸ್ ವರೆಗೆ ತಾಪಮಾನ ತಲುಪುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Karnataka Weather Forecast: ಬೆಂಗಳೂರು ಸೇರಿ ಹಲವೆಡೆ ನಾಳೆಯೂ ಮಳೆ, ಕೆಲ ಜಿಲ್ಲೆಗಳಲ್ಲಿ ವಿಪರೀತ ತಾಪಮಾನದ ಎಚ್ಚರಿಕೆ
ಬೀದರ್​​ನಲ್ಲಿ ಸುರಿದ ಮಳೆImage Credit source: Tv9 Kannada
ಪ್ರಸನ್ನ ಹೆಗಡೆ
|

Updated on:May 19, 2026 | 7:41 PM

Share

ಬೆಂಗಳೂರು, ಮೇ 19: ರಾಜ್ಯದಲ್ಲಿ ಇನ್ನೂ ಕೆಲವು ದಿನಗಳಕಾಲ ಮಳೆಯಾಗಲಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಣ ಹವೆ ಮುಂದುವರಿಯಲಿದೆ. ಮುಕ್ಕಾಲು ಕರ್ನಾಟಕದಲ್ಲಿ ನಾಳೆ ವರುಣನ (Rain) ಆಗಮನದ ನಿರೀಕ್ಷೆ ಇದ್ದು, ರಾಜಧಾನಿ ಬೆಂಗಳೂರಿನಲ್ಲಿಯೂ ಮಳೆಯ ಸಾಧ್ಯತೆ ಇದೆ. ಅದಾಗಿಯೂ ಕೆಲ ಜಿಲ್ಲೆಗಳಲ್ಲಿ ವಿಪರೀತ ತಾಪಮಾನ ಕಂಡುಬರಲಿದ್ದು, ಗರಿಷ್ಠ ಉಷ್ಣಾಂಶ 42 ಡಿಗ್ರಿ ಸೆಲ್ಸಿಯಸ್​​ ವರೆಗೂ ಕಂಡುಬರಲಿದೆ. ಇದೇ ರೀತಿಯ ವಾತಾವರಣ ಮುಂದಿನ ಮೂರು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಮುಖ್ಯಾಂಶಗಳು

  • ರಾಜ್ಯದ ಹಲವೆಡೆ ಮುಂದುವರಿಯಲಿರುವ ವರುಣಾರ್ಭಟ
  • ಮುಕ್ಕಾಲು ಕರ್ನಾಟಕದಲ್ಲಿ ನಾಳೆ ವರುಣನ ಆಗಮನದ ನಿರೀಕ್ಷೆ
  • ಅದಾಗಿಯೂ ಕೆಲ ಜಿಲ್ಲೆಗಳಲ್ಲಿ ವಿಪರೀತ ತಾಪಮಾನದ ಎಚ್ಚರಿಕೆ

ಬಹುಪಾಲು ಕರ್ನಾಟಕದಲ್ಲಿ ಮಳೆ

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯನ್ನು ಅಂದಾಜಿಸಲಾಗಿದೆ. ಹಾಗೆಯೇ ಬೆಳಗಾವಿ, ಬಾಗಲಕೋಟೆ, ರಾಯಚೂರು, ಧಾರವಾಡ, ಗದಗ, ಕೊಪ್ಪಳ, ಹಾವೇರಿ, ವಿಜಯನಗರ, ಬಳ್ಳಾರಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ತುಮಕೂರು, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ದಕ್ಷಿಣದಲ್ಲಿಯೂ (ರಾಮನಗರ) ಮಳೆಯ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: ಮನೆ ಮೇಲೆ ಬಿದ್ದ ಬೃಹತ್​ ಮರದ ಕೊಂಬೆ; ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್

ಉಷ್ಣ ತಾಪಮಾನದ ಎಚ್ಚರಿಕೆ

ಬೆಳಗಾವಿಯ ಅಥಣಿ, ಬೀದರ್​​ನ ಔರಾದ್​​​, ಭಾಲ್ಕಿ ಮತ್ತು ಕಮಲಾನಗರದಲ್ಲಿ ಉಷ್ಣಾಂಶ 42 ಡಿಗ್ರಿ ಸೆಲ್ಸಿಯಸ್​​ ಆಸುಪಾಸು ತಲುಪಲಿದೆ. ಹಾಗೆಯೇ ಬೀದರ್ ಜಿಲ್ಲೆಯ ಚಿಟಗುಪ್ಪಾ, ಬಸವಕಲ್ಯಾಣ, ಹುಲಸೂರು, ಹುಮ್ನಾಬಾದ್, ಕಲಬುರಗಿ ಜಿಲ್ಲೆಯ ಚಿಂಚೋಳಿ, ಕಾಳಗಿ, ಸೇಡಂನಲ್ಲಿ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರಿನ ಮಾನ್ವಿ, ದೇವದುರ್ಗ ಮತ್ತು ಅರಕೇರಾ ಹಾಗೆಯೇ ಯಾದಗಿರಿಯ ವಡಗೇರಾ ಮತ್ತು ಗುರುಮಿಟಕಲ್​​ನಲ್ಲಿಯೂ ಇದೇ ಮಾದರಿಯ ಹವಾಮಾನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:34 pm, Tue, 19 May 26

Follow Us
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ