
ಬೆಂಗಳೂರು, ಮೇ 19: ರಾಜ್ಯದಲ್ಲಿ ಇನ್ನೂ ಕೆಲವು ದಿನಗಳಕಾಲ ಮಳೆಯಾಗಲಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಣ ಹವೆ ಮುಂದುವರಿಯಲಿದೆ. ಮುಕ್ಕಾಲು ಕರ್ನಾಟಕದಲ್ಲಿ ನಾಳೆ ವರುಣನ (Rain) ಆಗಮನದ ನಿರೀಕ್ಷೆ ಇದ್ದು, ರಾಜಧಾನಿ ಬೆಂಗಳೂರಿನಲ್ಲಿಯೂ ಮಳೆಯ ಸಾಧ್ಯತೆ ಇದೆ. ಅದಾಗಿಯೂ ಕೆಲ ಜಿಲ್ಲೆಗಳಲ್ಲಿ ವಿಪರೀತ ತಾಪಮಾನ ಕಂಡುಬರಲಿದ್ದು, ಗರಿಷ್ಠ ಉಷ್ಣಾಂಶ 42 ಡಿಗ್ರಿ ಸೆಲ್ಸಿಯಸ್ ವರೆಗೂ ಕಂಡುಬರಲಿದೆ. ಇದೇ ರೀತಿಯ ವಾತಾವರಣ ಮುಂದಿನ ಮೂರು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯನ್ನು ಅಂದಾಜಿಸಲಾಗಿದೆ. ಹಾಗೆಯೇ ಬೆಳಗಾವಿ, ಬಾಗಲಕೋಟೆ, ರಾಯಚೂರು, ಧಾರವಾಡ, ಗದಗ, ಕೊಪ್ಪಳ, ಹಾವೇರಿ, ವಿಜಯನಗರ, ಬಳ್ಳಾರಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ತುಮಕೂರು, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ದಕ್ಷಿಣದಲ್ಲಿಯೂ (ರಾಮನಗರ) ಮಳೆಯ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ: ಮನೆ ಮೇಲೆ ಬಿದ್ದ ಬೃಹತ್ ಮರದ ಕೊಂಬೆ; ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
Daily Heat risk Bulletin for #Karnataka (19th May 2026) – Observed #Maximum #Temperature and 3-day forecast for Heat risk. #Heatwave #KSNDMC@KarnatakaVarthe #KarnatakaRains #WeatherUpdate #HeatAlert #KarnatakaWeather@acsdevcom pic.twitter.com/tmAufbCKCb
— Karnataka State Natural Disaster Monitoring Centre (@KarnatakaSNDMC) May 19, 2026
ಬೆಳಗಾವಿಯ ಅಥಣಿ, ಬೀದರ್ನ ಔರಾದ್, ಭಾಲ್ಕಿ ಮತ್ತು ಕಮಲಾನಗರದಲ್ಲಿ ಉಷ್ಣಾಂಶ 42 ಡಿಗ್ರಿ ಸೆಲ್ಸಿಯಸ್ ಆಸುಪಾಸು ತಲುಪಲಿದೆ. ಹಾಗೆಯೇ ಬೀದರ್ ಜಿಲ್ಲೆಯ ಚಿಟಗುಪ್ಪಾ, ಬಸವಕಲ್ಯಾಣ, ಹುಲಸೂರು, ಹುಮ್ನಾಬಾದ್, ಕಲಬುರಗಿ ಜಿಲ್ಲೆಯ ಚಿಂಚೋಳಿ, ಕಾಳಗಿ, ಸೇಡಂನಲ್ಲಿ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರಿನ ಮಾನ್ವಿ, ದೇವದುರ್ಗ ಮತ್ತು ಅರಕೇರಾ ಹಾಗೆಯೇ ಯಾದಗಿರಿಯ ವಡಗೇರಾ ಮತ್ತು ಗುರುಮಿಟಕಲ್ನಲ್ಲಿಯೂ ಇದೇ ಮಾದರಿಯ ಹವಾಮಾನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:34 pm, Tue, 19 May 26