Karnataka Weather Forecast: ನಾಳೆಯಿಂದ 2 ದಿನ ಕರ್ನಾಟಕದ ಉತ್ತರ ಭಾಗದಲ್ಲೂ ಮಳೆಯಬ್ಬರ

Monsoon 2026: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂನ್ 27ರಿಂದ ಎರಡು ದಿನಗಳ ಕಾಲ ಉತ್ತರ ಹಾಗೂ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕಳೆದ 24 ಗಂಟೆಯ ಅವಧಿಯಲ್ಲಿ ವಿಜಯಪುರ ಜಿಲ್ಲೆಯ ಚಡಚಣದಲ್ಲಿ ಅತ್ಯಧಿಕ ಮಳೆಯಾಗಿದೆ ಎಂದೂ ಇಲಾಖೆ ತಿಳಿಸಿದೆ.

Karnataka Weather Forecast: ನಾಳೆಯಿಂದ 2 ದಿನ ಕರ್ನಾಟಕದ ಉತ್ತರ ಭಾಗದಲ್ಲೂ ಮಳೆಯಬ್ಬರ
ಸಾಂದರ್ಭಿಕ ಚಿತ್ರ
Image Credit source: PTI

Updated on: Jun 26, 2026 | 5:56 PM

ಮುಖ್ಯಾಂಶಗಳು

  • ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕೆಲ ಭಾಗಗಳಲ್ಲಿ ಭಾರಿ ಮಳೆ ಸಾಧ್ಯತೆ
  • ಕರ್ನಾಟಕದ ಉತ್ತರ ಭಾಗಕ್ಕೂ ಮಳೆ ವ್ಯಾಪಿಸುವ ಬಗ್ಗೆ ಮುನ್ಸೂಚನೆ
  • ಕಳೆದ 24 ಗಂಟೆಯಲ್ಲಿ ವಿಜಯಪುರ ಜಿಲ್ಲೆಯ ಚಡಚಣದಲ್ಲಿ ಅತ್ಯಧಿಕ ಮಳೆ

ಬೆಂಗಳೂರು, ಜೂನ್​​ 26: ಕರ್ನಾಟಕದಲ್ಲಿ ಮುಂಗಾರು ಮತ್ತೆ ಬಿರುಸು ಪಡೆದಿದ್ದು, ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕೆಲ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಮುಂಗಾರು ಚಟುವಟಿಕೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗದ ಜನರು ಎಚ್ಚರಿಕೆಯಿಂದಿರಲು ಮತ್ತು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳು ಸೂಚಿಸಿದ್ದಾರೆ.

ಕರ್ನಾಟಕದ ಉತ್ತರ ಭಾಗದಲ್ಲಿ ಮಳೆ

ಕರಾವಳಿ ಕರ್ನಾಟಕ ಮತ್ತು ಮಲೆನಾಡು ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿದ್ದ ಮಳೆ ಉತ್ತರ ಭಾಗಕ್ಕೂ ವ್ಯಾಪಿಸುವ ಮುನ್ಸೂಚನೆ ಸಿಕ್ಕಿದೆ. ಜೂನ್​​ 27ರಂದು ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಸೇರಿ ಹಲವೆಡೆ ವರ್ಷಧಾರೆಯನ್ನು ನಿರೀಕ್ಷಿಸಲಾಗಿದೆ. ಬೀದರ್​​, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಮಳೆ ಮುನ್ಸೂಚನೆ ನೀಡಲಾಗಿದೆ. ಈ ಭಾಗದಲ್ಲಿ ಮುಂದಿನ 2 ದಿನಗಳ ಕಾಲ ಇದೇ ರೀತಿಯ ವಾತಾವರಣ ಅಂದಾಜಿಸಲಾಗಿದೆ.

ಇದನ್ನೂ ಓದಿ: ಬರಿದಾದ ಮೂರು ರಾಜ್ಯಗಳ ಜೀವನಾಡಿ; ಹೊಸ ಕ್ರಸ್ಟ್​​ಗೇಟ್​​ಗಳನ್ನು ಕಂಡ ತುಂಗಭದ್ರಾ ಜಲಾಶಯವೀಗ ಭಣಭಣ

ಚಡಚಣದಲ್ಲಿ ಅತ್ಯಧಿಕ ಮಳೆ

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಜೂನ್​​ 25ರ ಬೆಳಿಗ್ಗೆ 8.30ರಿಂದ ಜೂನ್​​ 26 ಬೆಳಿಗ್ಗೆ ಅದೇ ಸಮಯದವರೆಗೆ ವಿಜಯಪುರ ಜಿಲ್ಲೆಯ ಚಡಚಣದಲ್ಲಿ 72.2 ಮಿಲಿ ಮೀಟರ್​​ ಮಳೆಯಾಗಿದ್ದು, ರಾಜ್ಯದಲ್ಲಿ ಸುರಿದ ಅತ್ಯಧಿಕ ಮಳೆ ಇದಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಜಲವಳ್ಳಿಯಲ್ಲಿ 70.5 ಮಿಲಿ ಮೀಟರ್​​, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟುವಿನಲ್ಲಿ 50.5 ಮಿಲಿ ಮೀಟರ್ ಹಾಗೆಯೇ ಉಡುಪಿ ಜಿಲ್ಲೆಯ ಕಾರ್ಕಳದ ಇನ್ನಾದಲ್ಲಿ 46 ಮಿಲಿ ಮೀಟರ್​​ ಮಳೆಯಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 5:54 pm, Fri, 26 June 26

Follow Us