ಕರ್ನಾಟಕ ಹವಾಮಾನ ವರದಿ: ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರಿ ಮಳೆ ಮುನ್ಸೂಚನೆ
ಕರ್ನಾಟಕದಲ್ಲಿ ಮುಂಗಾರು ಕೊರತೆಯಿಂದ ಬರದ ಛಾಯೆ ಮೂಡಿದ್ದರೂ, ಹವಾಮಾನ ಇಲಾಖೆ ಕೊಂಚ ನೆಮ್ಮದಿಯ ಸುದ್ದಿ ನೀಡಿದೆ. ಮುಂದಿನ ಮೂರು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮುಖ್ಯಾಂಶಗಳು
- ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗಿನಲ್ಲಿ ಹಗುರ ಮಳೆಯಾಗುವ ಸಾಧ್ಯತೆ.
- ಬರದ ನಡುವೆ ಮುಂದಿನ ದಿನಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ.
- ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆ ನಿರೀಕ್ಷೆ.
ಬೆಂಗಳೂರು, ಸೆಪ್ಟೆಂಬರ್ 25: ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಬರ ಪರಿಸ್ಥಿತಿ ಎದುರಿಸುತ್ತಿದ್ದರೆ, ಇನ್ನೊಂದೆಡೆ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ಈ ನಡುವೆ ಭಾರತೀಯ ಹವಾಮಾನ ಇಲಾಖೆ ನೀಡಿದ ವರದಿಯನ್ವಯ, ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಪ್ರಮುಖ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿಯ ಸ್ಥಿತಿ ಏನು?
ಸೆಪ್ಟೆಂಬರ್ 25 ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನಾಳೆ (ಸೆ.26) ಸಹ ಕರಾವಳಿಯ ಕೆಲವೆಡೆ ಮಳೆ ಮುಂದುವರಿಯಲಿದೆ.
ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು
ಹಾವೇರಿ, ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಲಘು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ ಬರದ ಮಧ್ಯೆ ಮಳೆಯ ಸಿಂಚನ: 3 ದಿನ ಕರ್ನಾಟಕದಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ
ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ನಿರೀಕ್ಷೆಯಿದ್ದು, ಸಂಕಷ್ಟದಲ್ಲಿರುವ ರೈತರಿಗೆ ಇದು ಕೊಂಚ ನೆಮ್ಮದಿ ತಂದಿದೆ. ಕರಾವಳಿ ಮತ್ತು ಮಲೆನಾಡು ಭಾಗದ ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಹವಾಮಾನ ಇಲಾಖೆ ಸೂಚಿಸಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




