AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಮುಂದಿನ 4 ದಿನ ರಾಜ್ಯದಲ್ಲಿ ಭಾರೀ ಮಳೆ: ಕರಾವಳಿಗೆ ರೆಡ್ ಅಲರ್ಟ್​!

Monsoon 2026: ಕರ್ನಾಟಕದಲ್ಲಿ ಮುಂಗಾರು ತೀವ್ರಗೊಂಡಿದ್ದು, ಹವಾಮಾನ ಇಲಾಖೆಯು ಕರಾವಳಿ ಜಿಲ್ಲೆಗಳಿಗೆ ಜುಲೈ 5 ರಿಂದ 7 ರವರೆಗೆ ಭಾರಿ ಮಳೆಯ 'ರೆಡ್ ಅಲರ್ಟ್' ಘೋಷಿಸಿದೆ. ಬೆಂಗಳೂರು ಸೇರಿದಂತೆ ಒಳನಾಡಿನ ಹಲವು ಜಿಲ್ಲೆಗಳಲ್ಲಿ 'ಯೆಲ್ಲೋ ಅಲರ್ಟ್' ಜಾರಿಯಲ್ಲಿದೆ. ಪ್ರವಾಹ ಹಾಗೂ ಭೂಕುಸಿತದ ಭೀತಿ ಇರುವುದರಿಂದ ಸಾರ್ವಜನಿಕರು ಮತ್ತು ಪ್ರಯಾಣಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಹವಾಮಾನದ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Weather Forecast: ಮುಂದಿನ 4 ದಿನ ರಾಜ್ಯದಲ್ಲಿ ಭಾರೀ ಮಳೆ: ಕರಾವಳಿಗೆ ರೆಡ್ ಅಲರ್ಟ್​!
ಶಿವಮೊಗ್ಗದಲ್ಲಿ ಮಳೆ
ಭಾವನಾ ಹೆಗಡೆ
|

Updated on: Jul 03, 2026 | 7:31 AM

Share

ಮುಖ್ಯಾಂಶಗಳು

  • ಕರಾವಳಿ ಜಿಲ್ಲೆಗಳಲ್ಲಿ ಜುಲೈ 5 ರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.
  • ಒಳನಾಡಿನ ಜಿಲ್ಲೆಗಳಿಗೆ ಜುಲೈ ಮೊದಲ ವಾರದಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
  • ಪ್ರವಾಹ ಮತ್ತು ಭೂಕುಸಿತದ ಭೀತಿ ಇದ್ದು ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು.

ಬೆಂಗಳೂರು, ಜುಲೈ 03: ರಾಜ್ಯದಲ್ಲಿ ಮುಂಗಾರು ಮಾರುತಗಳು ತೀವ್ರಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ. ಹವಾಮಾನದ ತೀವ್ರತೆಯನ್ನು ಆಧರಿಸಿ ಭಾರತೀಯ ಹವಾಮಾನ ಇಲಾಖೆ (weather) ಜಿಲ್ಲಾವಾರು ಯೆಲ್ಲೋ ಮತ್ತು ರೆಡ್ ಅಲರ್ಟ್​ಗಳನ್ನು ಘೋಷಿಸಿದೆ. ಪ್ರವಾಹ ಮತ್ತು ಭೂಕುಸಿತದ ಭೀತಿ ಇರುವುದರಿಂದ ಸಾರ್ವಜನಿಕರ ಸುರಕ್ಷತೆಗಾಗಿ ಈ ಅಲರ್ಟ್‌ಗಳನ್ನು ನೀಡಲಾಗಿದೆ.

ಎಲ್ಲೆಲ್ಲಿ ಯೆಲ್ಲೋ ಅಲರ್ಟ್​?

ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಜುಲೈ ಮೊದಲ ವಾರದಲ್ಲಿ ಯೆಲ್ಲೋ ಅಲರ್ಟ್​ ನೀಡಲಾಗಿದೆ. ಈ ಭಾಗಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ (64.5 mm ನಿಂದ 115.4 mm ವರೆಗೆ) ಸಾಧ್ಯತೆಯಿದೆ. ಸಿಡಿಲು ಮತ್ತು ಗಂಟೆಗೆ 30-40 ಕಿ.ಮೀ ವೇಗದ ಬಲವಾದ ಗಾಳಿ ಬೀಸಬಹುದು. ಸದ್ಯಕ್ಕೆ ತಕ್ಷಣದ ಅಪಾಯವಿಲ್ಲದಿದ್ದರೂ, ಹವಾಮಾನದ ಬದಲಾವಣೆಗಳ ಮೇಲೆ ಕಣ್ಣಿಡಬೇಕು. ಪ್ರಯಾಣದ ಯೋಜನೆಗಳಿದ್ದರೆ ರಸ್ತೆಗಳಲ್ಲಿ ನೀರು ನಿಲ್ಲುವ ಅಥವಾ ಮರಗಳು ಬೀಳುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ಅಗತ್ಯ.

ಎಲ್ಲೆಲ್ಲಿ ರೆಡ್ ಅಲರ್ಟ್​?

ಕರಾವಳಿಯಲ್ಲಿ ಜುಲೈ 3 ಮತ್ತು 4 ರಂದು ಕಿತ್ತಳೆ ಎಚ್ಚರಿಕೆ ಆರೆಂಜ್ ಅಲರ್ಟ್​ ಇರಲಿದ್ದು, ಬೆಂಗಳೂರು ಸೇರಿದಂತೆ ಒಳನಾಡಿನಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆ ಮುಂದುವರಿಯಲಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡಕ್ಕೆ ಜುಲೈ 5 ರಿಂದ 7 ರ ಅವಧಿಯಲ್ಲಿ ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ದಿನವೊಂದಕ್ಕೆ 204.5 mm ಗಿಂತಲೂ ಅಧಿಕ ಪ್ರಮಾಣದ ಅತ್ಯಂತ ತೀವ್ರವಾದ ಮಳೆಯಾಗುವ ಸಾಧ್ಯತೆಯಿದೆ. ನದಿಗಳ ನೀರಿನ ಮಟ್ಟ ಹೆಚ್ಚಾಗಿ ಪ್ರವಾಹ ಉಂಟಾಗುವ, ತಗ್ಗು ಪ್ರದೇಶಗಳು ಜಲಾವೃತಗೊಳ್ಳುವ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ (Landslides) ಸಂಭವಿಸುವ ಹೆಚ್ಚಿನ ಅಪಾಯವಿರುತ್ತದೆ. ಸಾರ್ವಜನಿಕರು ಅನಗತ್ಯ ಪ್ರಯಾಣವನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಮತ್ತು ಸುರಕ್ಷಿತ ಸ್ಥಳಗಳಲ್ಲಿರಬೇಕು.

ಕರ್ನಾಟಕದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ
ಬೆಂಗಳೂರು: ಶಾಂತಿನಗರದಲ್ಲಿ ಮೂರು ದಿನಗಳ ದುರ್ಗಾದೇವಿ ಉತ್ಸವ
ಬೆಂಗಳೂರು: ಶಾಂತಿನಗರದಲ್ಲಿ ಮೂರು ದಿನಗಳ ದುರ್ಗಾದೇವಿ ಉತ್ಸವ