Karnataka Weather Forecast: ಕರಾವಳಿ ಜಿಲ್ಲೆಗಳಿಗೆ ನಾಳೆ ರೆಡ್ ಅಲರ್ಟ್; ದಕ್ಷಿಣ ಒಳನಾಡಲ್ಲೂ ಮಳೆ ಅಬ್ಬರ
Monsoon 2026: ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಜುಲೈ 7ರ ವರೆಗೆ ಭಾರಿ ಮಳೆಯ ಮುನ್ಸೂಚನೆ ಇದೆ. ನಾಳೆ ಕರಾವಳಿ ಜಿಲ್ಲೆಗಳಿಗೆ 'ರೆಡ್ ಅಲರ್ಟ್' ಹಾಗೂ ಜುಲೈ 5ರಂದು ದಕ್ಷಿಣ ಒಳನಾಡಿಗೆ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ. ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಸೇರಿ ಕೊಡಗಿನಲ್ಲಿ ಗಾಳಿ ಸಹಿತ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಮುಖ್ಯಾಂಶಗಳು
- ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ನಾಳೆ ಭಾರಿ ಮಳೆ
- ಮೂರು ಜಿಲ್ಲೆಗಳಲ್ಲಿಯೂ ರೆಡ್ ಅಲರ್ಟ್ ಘೋಷಣೆ
- ಜುಲೈ 5ರಂದು ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್
ಬೆಂಗಳೂರು, ಜುಲೈ 01: ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಕಳೆದ ಕೆಲ ದಿನಗಳಿಂದ ಕರಾವಳಿ ಮತ್ತು ಮಲೆನಾಡು ಸೇರಿ ಹಲವು ಜಿಲ್ಲೆಗಳಲ್ಲಿ ಉತ್ತಮ ವರ್ಷಧಾರೆಯಾಗುತ್ತಿದೆ. ಈ ನಡುವೆ ಜುಲೈ 7ರ ವರೆಗೂ ಕರ್ನಾಟಕದಲ್ಲಿ ಮಳೆಯ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಕೆಲ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದ್ದು, ಜುಲೈ 5ರಂದು ದಕ್ಷಿಣ ಒಳನಾಡು ಭಾಗಕ್ಕೆ ಆರೆಂಜ್ ಅಲರ್ಟ್ ಮತ್ತು ಕರಾವಳಿ ಕರ್ನಾಟಕ ಭಾಗಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯ ಮೂರು ಜಿಲ್ಲೆಗಳಲ್ಲಿ ನಾಳೆ ರೆಡ್ ಅಲರ್ಟ್
#ಮಳೆ #ಮುನ್ನೆಚ್ಚರಿಕೆ : #Extremely #Heavy #Rainfall (>204.5mm) #warning for Coastal #Karnataka #Red #alert@KarnatakaVarthe #KSNDMC #KarnatakaRains #SouthWestMonsoon #Monsoon2026@DCDKOfficial @dcudupi @dcuttarakannada pic.twitter.com/L8g27S5iRo
— Karnataka State Natural Disaster Monitoring Centre (@KarnatakaSNDMC) July 1, 2026
ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆ ವಿಪರೀತ ಮಳೆ ಸುರಿಯಲಿದ್ದು, ಗಾಳಿಯ ವೇಗ ಗಂಟೆಗೆ ಸುಮಾರು 30-40 ಕಿಲೋ ಮೀಟರ್ ಇರಲಿದೆ. ಹೀಗಾಗಿ ಈ ಭಾಗಕ್ಕೆ ನಾಳೆ ರೆಡ್ ಅಲರ್ಟ್ ನೀಡಲಾಗಿದೆ. ಹಾಗೆಯೇ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು, ಬಳ್ಳಾರಿ, ಕೊಪ್ಪಳ, ಬಾಗಲಕೋಟೆ, ವಿಜಯನಗರ ಮತ್ತು ರಾಯಚೂರು ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಬಹುದೆಂದು ಅಂದಾಜಿಸಲಾಗಿದೆ. ಈ ಪೈಕಿ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಸೇರಿ ಕೊಡಗಿನಲ್ಲಿ ಗಾಳಿ ಸಹಿತ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಇದನ್ನೂ ಓದಿ: ಮಳೆಗಾಗಿ ಕಠಿಣ ನಿರ್ಧಾರ ಕೈಗೊಂಡ ಅನ್ನದಾತ; ಕೃಪೆ ತೋರುವನೇ ವರುಣ ದೇವ?
ಬೆಂಗಳೂರಲ್ಲಿ ಹೇಗಿರಲಿದೆ ವಾತಾವರಣ?
ಮುಂದಿನ 24 ಗಂಟೆಯ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಹೆಚ್ಚಾಗಿ ಕಂಡುಬರಲಿದೆ. ಗಾಳಿಯ ಜೊತೆಗೆ ಅಲ್ಪ ಪ್ರಮಾಣದ ಮಳೆಯೂ ಆಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಸಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:49 pm, Wed, 1 July 26




