AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ಕಾದ ಕೆಂಡದಂತಾಗಿದ್ದ ಕರಾವಳಿಯಲ್ಲಿ ಇಂದು ವರ್ಷಧಾರೆ!

Karnataka Weather: ರಾಜ್ಯದಲ್ಲಿ ಇಂದು ಉಷ್ಣ ಅಲೆಯ ಜೊತೆಗೆ ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಸೇರಿದಂತೆ ಉತ್ತರ ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಹೀಟ್ ವೇವ್​ನಿಂದ ತಪ್ಪಿಸಿಕೊಳ್ಳಲು ಯಾವೆಲ್ಲಾ ಮುಂಜಾಗೃತಾ ಕ್ರಮ ಕೈಗೊಳ್ಳಬೇಕೆಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕ ಹವಾಮಾನ ವರದಿ: ಕಾದ ಕೆಂಡದಂತಾಗಿದ್ದ ಕರಾವಳಿಯಲ್ಲಿ ಇಂದು ವರ್ಷಧಾರೆ!
ಕಾದ ಕೆಂಡದಂತಾಗಿದ್ದ ರಾಜ್ಯಕ್ಕಿಂದು ವರ್ಷಧಾರೆ!
ಭಾವನಾ ಹೆಗಡೆ
|

Updated on: Apr 22, 2026 | 7:43 AM

Share

ಬೆಂಗಳೂರು, ಏಪ್ರಿಲ್ 22: ಬೆಂಗಳೂರು ಸೇರಿದಂತೆ ಹಲವೆಡೆ ತಾಪಮಾನ  (Karnataka Weather)   ಹೆಚ್ಚಾಗಿದ್ದು, ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕವು ಬಿಸಿಲಿನ ಬೇಗೆ ತತ್ತರಿಸಿದೆ. ಆದರೆ ಇಂದು ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು ನೀರು ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ಗುಡುಗು ಸಹಿತ ಮಳೆ

ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯ ಜೊತೆಗೆ ಗುಡುಗು ಸಹಿತ ಮಳೆಯೂ ಆಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಏಪ್ರಿಲ್ 23ರವರೆಗೂ ಇದೇ ವಾತಾವರಣವಿರಲಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆಯಿರಲಿದೆ ಎನ್ನಲಾಗಿದೆ. ಉತ್ತರ ಒಳನಾಡಿನ ವಿಜಯಪುರ, ಬೆಳಗಾವಿ, ಹಾವೇರಿ ಮತ್ತು ಧಾರವಾಡ ಗುಡುಗು ಸಹಿತ ಮಳೆಯಾಗಲಿದ್ದು, ಉಳಿದೆಡೆ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಉಷ್ಣಾಘಾತದಿಂದ ರಕ್ಷಣೆ ಹೇಗೆ?

ಮುಂಬರುವ ದಿನಗಳಲ್ಲಿ ರಾಜ್ಯದೆಲ್ಲೆಡೆ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಅವಶ್ಯಕತೆ ಇಲ್ಲದೆ ಮನೆಯಿಂದ ಹೊರಬರುವುದನ್ನು ತಪ್ಪಿಸುಂತೆ ಹೇಳಲಾಗಿದೆ. ಬೇಸಿಗೆ ರಜೆಯಲ್ಲಿ ಮಕ್ಕಳು ಬಿಸಿಲಲ್ಲಿ ಆಟವಾಡುವುದನ್ನು ಆದಷ್ಟು ನಿಯಂತ್ರಿಸುವಂತೆ ಸೂಚಿಸಲಾಗಿದೆ.

ಉಷ್ಣ ಅಲೆ ಹಾಗೂ ಉಷ್ಣಾಘಾತದಿಂದ (ಹೀಟ್ ಸ್ಟ್ರೋಕ್) ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಕೆಲವು ಸಲಹೆ ಸೂಚನೆಗಳನ್ನು ನೀಡಿದೆ. ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ಸೂರ್ಯನ ಬೆಳಕಿಗೆ ನೇರ ಮೈಯೊಡ್ಡುವುದನ್ನು ಆದಷ್ಟು ತಪ್ಪಿಸಿ. ನಿಯಮಿತವಾಗಿ ನೀರು ಕುಡಿಯಿರಿ. ಎಳನೀರು, ಮಜ್ಜಿಗೆ ಅಥವಾ ಮನೆಯಲ್ಲಿ ತಯಾರಿಸಿದ ಹಣ್ಣಿನ ರಸಗಳನ್ನು ಸೇವಿಸಿ. ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಿ. ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿಯನ್ನು ಬಳಸಿ. ಕೆಫೀನ್ (ಕಾಫಿ/ಟೀ) ಮತ್ತು ಹೆಚ್ಚಿನ ಸಕ್ಕರೆಯುಕ್ತ ಪಾನೀಯಗಳ ಸೇವನೆ ಕಡಿಮೆ ಮಾಡಿ, ಇವು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us