AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗಾಳಿ, ಮಳೆಯಬ್ಬರ!

Monsoon 2026: ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂಬರುವ ದಿನಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದರೊಂದಿಗೆ ಬೆಂಗಳೂರು ಸೇರಿದಂತೆ ವಿವಿಧೆಡೆ ಗಂಟೆಗೆ 30 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಹಾಗೂ ಎಚ್ಚರಿಕೆಯಿಂದ ಇರಲು ಹವಾಮಾನ ಕೇಂದ್ರ ಸೂಚಿಸಿದೆ.

Karnataka Weather Forecast: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗಾಳಿ, ಮಳೆಯಬ್ಬರ!
ಸಾಂದರ್ಭಿಕ ಚಿತ್ರImage Credit source: theconversation.com
ಭಾವನಾ ಹೆಗಡೆ
|

Updated on: Jun 18, 2026 | 7:45 AM

Share

ಬೆಂಗಳೂರು, ಜೂನ್ 18: ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮುಂಬರುವ ದಿನಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Weather) ಸಾಧ್ಯತೆಯಿದೆ. ಇದರೊಂದಿಗೆ ಕೆಲವು ಪ್ರದೇಶಗಳಲ್ಲಿ ಬಲವಾದ ಬಿರುಗಾಳಿ ಬೀಸುವ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ.

ಮುಖ್ಯಾಂಶಗಳು

  • ಕರಾವಳಿಯ ಮೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
  • ಉತ್ತರ ಒಳನಾಡಿನ ಎಂಟು ಜಿಲ್ಲೆಗಳಲ್ಲಿ ಬಲವಾದ ಬಿರುಗಾಳಿ ಬೀಸಲಿದೆ.
  • ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ ನೀಡಲಾಗಿದೆ.

ಕರಾವಳಿಯಲ್ಲಿ ಗಾಳಿ- ಮಳೆ

ಕರಾವಳಿ ತೀರದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಜೊತೆಗೆ, ಉತ್ತರ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಸಂಭವವಿರುವುದರಿಂದ ಸಾರ್ವಜನಿಕರು ಹಾಗೂ ಮೀನುಗಾರರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಎಲ್ಲೆಲ್ಲಿ ಮಳೆ?

ಉತ್ತರ ಒಳನಾಡಿನ ಜಿಲ್ಲೆಗಳಾದ ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇನ್ನುಳಿದಂತೆ, ಬಿರುಗಾಳಿಯ ತೀವ್ರತೆ ಇಲ್ಲಿ ಹೆಚ್ಚಾಗಿರಲಿದ್ದು, ರಾಯಚೂರು, ವಿಜಯಪುರ, ಧಾರವಾಡ, ಬೆಳಗಾವಿ, ಗದಗ, ಕಲಬುರಗಿ, ಬೀದರ್ ಮತ್ತು ಬಾಗಲಕೋಟೆ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ವಿಸ್ತರಣೆ ಹೆಚ್ಚಾಗಿರಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಇದಲ್ಲದೆ, ಮೈಸೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ