AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

Monsoon 2026: ಕರ್ನಾಟಕದಲ್ಲಿ ಮಾನ್ಸೂನ್ ಮಳೆ ಚುರುಕಾಗಿದ್ದು, ಕರಾವಳಿ ಜಿಲ್ಲೆಗಳು ಹಾಗೂ ಶಿವಮೊಗ್ಗ, ಚಿಕ್ಕಮಗಳೂರಿಗೆ ಭಾರಿ ಮಳೆಯ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಬಲವಾದ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ನೀಡಿರುವ ಸಂಪೂರ್ಣ ಜಿಲ್ಲಾವಾರು ಮಳೆ ಮುನ್ಸೂಚನೆ ವರದಿ ಇಲ್ಲಿದೆ.

Karnataka Weather Forecast: ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ಕರಾವಳಿ ಕರ್ನಾಟಕದಲ್ಲಿ ಭಾರಿ ಮಳೆ ಹಾಗೂ ಯೆಲ್ಲೋ ಅಲರ್ಟ್
ಭಾವನಾ ಹೆಗಡೆ
|

Updated on: Aug 19, 2026 | 7:31 AM

Share

ಮುಖ್ಯಾಂಶಗಳು

  • ಕರಾವಳಿ ಮತ್ತು ಮಲೆನಾಡಿನ ನಾಲ್ಕು ಜಿಲ್ಲೆಗಳಿಗೆ ಭಾರೀ ಮಳೆಯ ‘ಯೆಲ್ಲೋ ಅಲರ್ಟ್’.
  • ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
  • ಉತ್ತರ ಒಳನಾಡಿನಲ್ಲಿ ಗಂಟೆಗೆ 50 ಕಿ.ಮೀ ವೇಗದ ಬಲವಾದ ಗಾಳಿ ಬೀಸಲಿದೆ.

ಬೆಂಗಳೂರು, ಆಗಸ್ಟ್ 19: ಕರ್ನಾಟಕದಲ್ಲಿ ಮಾನ್ಸೂನ್ ಮಳೆ ಚುರುಕಾಗಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಬಲವಾದ ಗಾಳಿ ಬೀಸಲಿದ್ದು, ಜಾಗರೂಕರಾಗಿರಲು ಸೂಚಿಸಲಾಗಿದೆ. ಇಂದಿನಿಂದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ವರ್ಷಧಾರೆಯಾಗಲಿದ್ದು, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯೊಂದಿಗೆ ವೇಗದ ಗಾಳಿ ಬೀಸಲಿದೆ.

ಕರಾವಳಿ ಕರ್ನಾಟಕದಲ್ಲಿ ಭಾರಿ ಮಳೆ ಹಾಗೂ ಯೆಲ್ಲೋ ಅಲರ್ಟ್

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಸತತ ಬಲವಾದ ಗಾಳಿ ಬೀಸಲಿದ್ದು, ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಮೀನುಗಾರರು ಮತ್ತು ಕರಾವಳಿ ನಿವಾಸಿಗಳು ಎಚ್ಚರಿಕೆಯಿಂದಿರಲು ತಿಳಿಸಲಾಗಿದೆ.

ಸಾಧಾರಣ ಮಳೆ ಹಾಗೂ ಬಲವಾದ ಗಾಳಿ

ಉತ್ತರ ಒಳನಾಡಿನ ಬೀದರ್, ಕಲ್ಬುರ್ಗಿ, ವಿಜಯಪುರ, ರಾಯಚೂರು, ಧಾರವಾಡ ಮತ್ತು ಗದಗ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಇನ್ನು ಬಾಗಲಕೋಟೆ, ಬೆಳಗಾವಿ, ಹಾವೇರಿ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಸೇರಿ ಹಲವೆಡೆ ಸಾಧಾರಣ ಮಳೆ

ದಕ್ಷಿಣ ಒಳನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಗಂಟೆಗೆ 30 ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು