Karnataka Weather Forecast: ಕರಾವಳಿಯಲ್ಲಿ ಭಾರಿ ಮಳೆ; ಯೆಲ್ಲೋ ಅಲರ್ಟ್​ ಘೋಷಣೆ

Monsoon 2026: ಕರ್ನಾಟಕ ಹವಾಮಾನ ಮುನ್ಸೂಚನೆ: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ. ಇತ್ತ ಬೆಂಗಳೂರು ಸೇರಿದಂತೆ ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

Karnataka Weather Forecast: ಕರಾವಳಿಯಲ್ಲಿ ಭಾರಿ ಮಳೆ; ಯೆಲ್ಲೋ ಅಲರ್ಟ್​ ಘೋಷಣೆ
ಕರಾವಳಿ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

Updated on: Jun 29, 2026 | 7:14 AM

ಮುಖ್ಯಾಂಶಗಳು

  • ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡಕ್ಕೆ ಭಾರಿ ಮಳೆ, ಯೆಲ್ಲೋ ಅಲರ್ಟ್ ಘೋಷಣೆ.
  • ಹಾವೇರಿ, ಬಿಡಾರ್ ಸೇರಿದಂತೆ ಹಲವೆಡೆ ಗುಡುಗು, ಬಿರುಗಾಳಿ ಸಹಿತ ಸಾಧಾರಣ ಮಳೆ.
  • ಬೆಂಗಳೂರು ಒಳಗೊಂಡಂತೆ ಹಲವು ಜಿಲ್ಲೆಗಳಲ್ಲಿ ನಿರಂತರ ಬಲವಾದ ಗಾಳಿ, ಮಳೆ.

ಬೆಂಗಳೂರು, ಜೂನ್ 29: ಮುಂದಿನ ಕೆಲವು ದಿನಗಳ ಕಾಲ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (Weather)  ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಕರಾವಳಿ ಪ್ರದೇಶಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ಜಾಗರೂಕತೆ ವಹಿಸುವಂತೆ ಹೇಳಿದೆ.

ಕರಾವಳಿ ತೀರದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಅವಧಿಯಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ನಿರಂತರ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.

ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆ

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಲವಾದ ಬಿರುಗಾಳಿ ಹಾಗೂ ಗುಡುಗು ಮಿಂಚಿನ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಮರಗಳ ಅಥವಾ ಹಳೆಯ ಕಟ್ಟಡಗಳ ಆಶ್ರಯ ಪಡೆಯದಂತೆ ಸೂಚಿಸಲಾಗಿದೆ.

ಸಾಧಾರಣ ಮಳೆ ಮುನ್ಸೂಚನೆ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಇಲ್ಲಿಯೂ ಸಹ ಮಳೆಯ ಜೊತೆಗೆ 30-40 ಕಿ.ಮೀ ವೇಗದ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ ದಿನಗಳಲ್ಲಿ ಮುಂಗಾರು ಮತ್ತಷ್ಟು ತೀವ್ರಗೊಳ್ಳಲಿದ್ದು, ಜೂನ್ ಅಂತ್ಯ ಹಾಗೂ ಜುಲೈ ಆರಂಭದ ದಿನಗಳಲ್ಲಿ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us