AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಲ ಬೇಗೆ ತಣಿಸಲಿದ್ದಾನೆ ಮಳೆರಾಯ; ರಾಜ್ಯದಲ್ಲಿ ಇಂದಿನಿಂದ 4 ದಿನಗಳ ಕಾಲ ಮಳೆ ಮುನ್ಸೂಚನೆ

ರಾಜ್ಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ರಾಜ್ಯದಲ್ಲಿ ಮುಂದಿನ 4 ದಿನ ಮಳೆ ಆಗುವ ಸಾಧ್ಯತೆ ಇದೆ. ಬಿಸಿಲಿಂದ ಬೇಸತ್ತ ಜನರಿಗೆ ಮಳೆ ತಂಪು ನೀಡಲಿದೆ.

ಬಿಸಿಲ ಬೇಗೆ ತಣಿಸಲಿದ್ದಾನೆ ಮಳೆರಾಯ; ರಾಜ್ಯದಲ್ಲಿ ಇಂದಿನಿಂದ 4 ದಿನಗಳ ಕಾಲ ಮಳೆ ಮುನ್ಸೂಚನೆ
ಮಳೆImage Credit source: Indian Express
ಆಯೇಷಾ ಬಾನು
|

Updated on:Mar 15, 2023 | 9:06 AM

Share

ಬೆಂಗಳೂರು: ಮಧ್ಯಾಹ್ನ ಆದ್ರೆ ಸಾಕು. ಸೂರ್ಯ ನೆತ್ತಿ ಮೇಲಿರುತ್ತಾನೆ. ಆಚೆ ಕಾಲಿಡಕ್ಕೂ ಆಗಲ್ಲ. ಸೆಕೆ ಅಂದ್ರೆ ಸೆಕೆ. ಇನ್ನು ಏಪ್ರಿಲ್ ಆರಂಭಕ್ಕೂ ಮುನ್ನ, ಮಾರ್ಚ್ ತಿಂಗಳ ಆರಂಭದಿಂದಲೇ ಬೇಸಿಗೆಯ ಬೇಗೆ ಹೆಚ್ಚಾಗಿದೆ. ಬಿಸಿಲನ್ನು ನೋಡಿ ಯಾವಾಗ ಮಳೆ ಬರುತ್ತಪ್ಪ ಅಂತ ಜನ ಗೋಳಾಡುತ್ತಿದ್ದಾರೆ. ಸದ್ಯ ರಾಜ್ಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ರಾಜ್ಯದಲ್ಲಿ ಮುಂದಿನ 4 ದಿನ ಮಳೆ ಆಗುವ ಸಾಧ್ಯತೆ ಇದೆ. ಬಿಸಿಲಿಂದ ಬೇಸತ್ತ ಜನರಿಗೆ ಮಳೆ ತಂಪು ನೀಡಲಿದೆ.

ಬಿಸಿಲ ಧಗೆ ಹೆಚ್ಚುತ್ತಿರುವ ನಡುವೆ ಹವಾಮಾನ ಇಲಾಖೆ ಮಳೆ‌ ಮುನ್ಸೂಚನೆ ನೀಡಿದೆ. ಸಮುದ್ರಗಳಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಕಾರಣ ರಾಜ್ಯದ ವಿವಿಧೆಡೆ ಮಳೆ ಆಗುವ ಸಾಧ್ಯತೆ ಇದೆ. ಇಂದಿನಿಂದ ನಾಲ್ಕು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಾ.15ರಿಂದ 18ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವೆಡೆ ಮಳೆ ಆಗಲಿದೆ. ಮಾ.16 ರಿಂದ 18ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬಳ್ಳಾರಿ, ಬೀದರ್, ಧಾರವಾಡ, ಗದಗ, ಕಲಬುರಗಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಯ ಕೆಲವು ಕಡೆ ಮಾ.16 ರಿಂದ ಮಾ.18ರವರೆಗೆ ಮಳೆಯಾಗಲಿದೆ.

ಇದನ್ನೂ ಓದಿ: ಕೊಡಗು ಜಿಲ್ಲೆಯಲ್ಲಿ ಬಿತ್ತು ವರ್ಷದ ಮೊದಲ ಮಳೆ, ಕಾಫಿ ಬೆಳೆಗಾರರಲ್ಲಿ ಹರ್ಷ

ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಯಲ್ಲಿ ಮಾ.17 ಮತ್ತು 18ರಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಭಾಗದಲ್ಲಿ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಬೆಳಗ್ಗೆ ಹಾಗೂ ಸಂಜೆಯ ಸಮಯದಲ್ಲಿ ಮೋಡಕವಿದ ವಾತಾವರಣವಿರಲಿದೆ ಎಚ್​ಎಎಲ್​ನಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಾಗಲಕೋಟೆಯಲ್ಲಿ 13.0 ಡಿಗ್ರಿ ಸೆಲ್ಸಿಯಸ್​ ಅತಿ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 36.9 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ದೆಹಲಿಯಲ್ಲಿ ತಾಪಮಾನ ಹೆಚ್ಚಾಗುತ್ತಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:05 am, Wed, 15 March 23

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು