AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Today: ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆ; ಹವಮಾನ ಇಲಾಖೆ ಮುನ್ಸೂಚನೆ

Karnataka Weather: ಉಡುಪಿ, ಉತ್ತರ ಕನ್ನಡ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಮುನ್ಸೂಚನೆಯಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿಯೂ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಿರಲಿದೆ ಎಂದು ಸೂಚನೆ ನೀಡಲಾಗಿದೆ.

Karnataka Weather Today: ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆ; ಹವಮಾನ ಇಲಾಖೆ ಮುನ್ಸೂಚನೆ
Weather Forecast November 23
ಭಾವನಾ ಹೆಗಡೆ
|

Updated on:Nov 23, 2025 | 7:34 AM

Share

ಬೆಂಗಳೂರು, ನವೆಂಬರ್ 23: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ (Weather Forecast) ಸಾಧ್ಯತೆಯಿದೆ  ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆಯ ವಾತಾವರಣ ಮುಂದುವರೆಯಲಿದ್ದು, ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರನದೊಂದಿಗೆ ಲಘು ಪ್ರಮಾಣದಲ್ಲಿ ಮಳೆಯಾಗಬಹುದು ಎಂಬ ಮುನ್ಸೂಚನೆಯಿದೆ.

ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ?

ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ,ಶಿವಮೊಗ್ಗ ಮತ್ತು ತುಮಕೂರು ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಯಾವೆಲ್ಲಾ ಪ್ರದೇಶಗಳಲ್ಲಿ ಒಣ ಹವೆ

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಸಂಪೂರ್ಣವಾಗಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣಹವೆಯ ವಾತಾವರಣ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ.

ರಾಜಧಾನಿಯಲ್ಲೂ ಲಘು ಮಳೆ

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನ 27.4°C ಮತ್ತು ಕನಿಷ್ಠ ತಾಪಮಾನ 18°C ಇರಲಿದೆ. ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:33 am, Sun, 23 November 25

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ‍್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ‍್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!
ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ
ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ
ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂದ ಭಕ್ತರು
ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂದ ಭಕ್ತರು
ಮೈಸೂರು:ಕನ್ನಡಾಂಬೆ ಭುವನೇಶ್ವರಿ ದೇಗುಲದ ಬಗ್ಗೆ ನಿಮಗೆಷ್ಟು ಗೊತ್ತು?
ಮೈಸೂರು:ಕನ್ನಡಾಂಬೆ ಭುವನೇಶ್ವರಿ ದೇಗುಲದ ಬಗ್ಗೆ ನಿಮಗೆಷ್ಟು ಗೊತ್ತು?
ಲವ್ ಮಾಡೋದು ಬಿಟ್ಟು ಆಟವಾಡು: ಸುದೀಪ್ ಎದುರಲ್ಲೇ ಸೌಂದರ್ಯಾಗೆ ಕಿರಣ್ ಟೀಕೆ
ಲವ್ ಮಾಡೋದು ಬಿಟ್ಟು ಆಟವಾಡು: ಸುದೀಪ್ ಎದುರಲ್ಲೇ ಸೌಂದರ್ಯಾಗೆ ಕಿರಣ್ ಟೀಕೆ
ಬೆಳಗಾವಿಯಲ್ಲಿ ಕಳೆಗಟ್ಟಿದ ಕನ್ನಡ ಹಬ್ಬ
ಬೆಳಗಾವಿಯಲ್ಲಿ ಕಳೆಗಟ್ಟಿದ ಕನ್ನಡ ಹಬ್ಬ
ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!
ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!
ಗಾಂಧಿ ಹತ್ಯೆಯ ನಾಟಕದ ವೇಳೆ ನಿರ್ದೇಶಕರಿಗೆ ಮಸಿ ಬಳಿದ ಕೈ ಕಾರ್ಯಕರ್ತರು
ಗಾಂಧಿ ಹತ್ಯೆಯ ನಾಟಕದ ವೇಳೆ ನಿರ್ದೇಶಕರಿಗೆ ಮಸಿ ಬಳಿದ ಕೈ ಕಾರ್ಯಕರ್ತರು
ಉತ್ತರ ಭಾರತದ ಮೊದಲ ಬುಲೆಟ್ ಟ್ರೈನ್ ಕಾರಿಡಾರ್‌ಗೆ ಪ್ರಧಾನಿ ಮೋದಿ ಒಪ್ಪಿಗೆ
ಉತ್ತರ ಭಾರತದ ಮೊದಲ ಬುಲೆಟ್ ಟ್ರೈನ್ ಕಾರಿಡಾರ್‌ಗೆ ಪ್ರಧಾನಿ ಮೋದಿ ಒಪ್ಪಿಗೆ