AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ರಾಜ್ಯಯದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

Karnataka Weather: ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮತ್ತು ಕರಾವಳಿ ಪ್ರದೇಶದಲ್ಲಿ ಇಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ವಾತಾವರಣ ಮುಂದುವರೆಯಲಿದ್ದು, ಬೆಂಗಳೂರಿನಲ್ಲಿಯೂ ಮಂಜು ಮುಸುಕಿದ ವಾತಾವರಣದ ಮುನ್ಸೂಚನೆ ಇದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯಯದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ
ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ
ಭಾವನಾ ಹೆಗಡೆ
|

Updated on: Dec 05, 2025 | 7:26 AM

Share

ಬೆಂಗಳೂರು, ಡಿಸೆಂಬರ್ 05: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ (Weather Forecast) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆಯಲಿದ್ದು, ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಸಾಧಾರಣ ಮಳೆ?

ಕರಾವಳಿಯ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದ ಕೆಲ ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಒಣ ಹವೆ?

ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಇದನ್ನೂ ಓದಿ ನಾಳೆಯ ಹವಾಮಾನ: 6 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಹೇಗಿರಲಿದೆ ಬೆಂಗಳೂರು ವಾತಾವರಣ?

ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ

ಬೆಂಗಳೂರಲ್ಲಿ ಮಂಜು ಕವಿದ ವಾತಾವರಣ ಇರಲಿದ್ದು, ಗಾಳಿಯ ವೇಗ ಪ್ರತಿ ಗಂಟೆಗೆ 16 ಕಿ.ಮೀ ಇರಲಿದೆ. ಗರಿಷ್ಠ ತಾಪಮಾನ 27°C ಮತ್ತು ಕನಿಷ್ಠ ತಾಪಮಾನ 17°C ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಇಂಡಿ ಮೈತ್ರಿಕೂಟದಿಂದ ಸುಪ್ರೀಂ ಚಲೋ ಮೆರವಣಿಗೆ
ಇಂಡಿ ಮೈತ್ರಿಕೂಟದಿಂದ ಸುಪ್ರೀಂ ಚಲೋ ಮೆರವಣಿಗೆ
ಅಜ್ಜಿಯ ಅಂತ್ಯಕ್ರಿಯೆಗೂ ಬಿಡಲಿಲ್ಲ ಎಂದ ಸಿಜೆಪಿ ನಾಯಕರಿಗೆ ವಿಡಿಯೋ ತಿರುಗೇಟು
ಅಜ್ಜಿಯ ಅಂತ್ಯಕ್ರಿಯೆಗೂ ಬಿಡಲಿಲ್ಲ ಎಂದ ಸಿಜೆಪಿ ನಾಯಕರಿಗೆ ವಿಡಿಯೋ ತಿರುಗೇಟು
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ