AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದಲ್ಲಿ ತಗ್ಗಿದ ಮಳೆ ಅಬ್ಬರ; ಆದರೂ ಇಂದು ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ

ಸದ್ಯ ಮಳೆ ಕಡಿಮೆಯಾಗಿದ್ದರೂ, ಮಳೆಯಿಂದಾಗಿರುವ ಹಾನಿಯಿಂದ ಸುಧಾರಿಸಿಕೊಳ್ಳಲು ಸಾಕಷ್ಟು ಸಮಯ ಬೇಕಿದ್ದು, ಮತ್ತೆ ಮಳೆ ಸುರಿಯದಿರಲಿ ಎಂದು ಜನ ಪ್ರಾರ್ಥಿಸಿಕೊಳ್ಳುತ್ತಿದ್ದಾರೆ.

Karnataka Weather: ಕರ್ನಾಟಕದಲ್ಲಿ ತಗ್ಗಿದ ಮಳೆ ಅಬ್ಬರ; ಆದರೂ ಇಂದು ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ
ಮಳೆ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 01, 2021 | 10:02 AM

Share

ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಆರ್ಭಟ ತಕ್ಕಮಟ್ಟಿಗೆ ಕಡಿಮೆಯಾಗಿದೆ. ಧಾರಾಕಾರವಾಗಿ ಸುರಿದು ಜನ ಜೀವನವನ್ನು ಅಸ್ತವ್ಯಸ್ತಗೊಳಿಸಿದ ಮಳೆ ಇದೀಗ ವಿರಾಮ ಪಡೆದಂತೆ ಕಾಣುತ್ತಿದೆ. ಕಳೆದ ಹತ್ತು ಹದಿನೈದು ದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆಯಿಂದ ಬೇಸತ್ತಿದ್ದ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಮಳೆ ಉಂಟುಮಾಡಿದ ತೊಂದರೆಗಳನ್ನು ಸರಿಪಡಿಸುವುದರಲ್ಲಿ ನಿರತರಾಗಿದ್ದಾರೆ. ಸದ್ಯ ಮಳೆ ಕಡಿಮೆಯಾಗಿದ್ದರೂ, ಮಳೆಯಿಂದಾಗಿರುವ ಹಾನಿಯಿಂದ ಸುಧಾರಿಸಿಕೊಳ್ಳಲು ಸಾಕಷ್ಟು ಸಮಯ ಬೇಕಿದ್ದು, ಮತ್ತೆ ಮಳೆ ಸುರಿಯದಿರಲಿ ಎಂದು ಜನ ಪ್ರಾರ್ಥಿಸಿಕೊಳ್ಳುತ್ತಿದ್ದಾರೆ.

ಇಂದು ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಮತ್ತು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ (Light Rain) ಸಾಧ್ಯತೆಯಿದೆ. ಜತೆಗೆ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ (Weather Forecast) ನೀಡಿದೆ.

ದಾವಣಗೆರೆ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲೂ ಸಹ ಸಾಧಾರಣ ಮಳೆಯಾಗಲಿದೆ. ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.

ರಾಜ್ಯದ ಮಲೆನಾಡು ಭಾಗದಲ್ಲಿ ಇಂದು ಕೊಂಚ ಮಳೆಯಾಗಲಿದ್ದು, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಉಡುಪಿ ಜಿಲ್ಲೆಯಾದ್ಯಂತ ಅಧಿಕ ಮಳೆಯಾದರೆ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ದಾವಣಗೆರೆ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಮುಂದಿನ 4-5 ದಿನಗಳಲ್ಲಿ ರಾಜ್ಯದಲ್ಲಿ ಮುಂಗಾರು ಮಳೆಯ ತೀವ್ರತೆ ಕಡಿಮೆಯಾಗಲಿದ್ದು, ಮಳೆ ಕೊಂಚ ವಿರಾಮ ನೀಡಲಿದೆ ಎಂದು ಭಾರತೀಯ ಹವಾಮಾನ ಇಲಾಖೆ, ಬೆಂಗಳೂರು ನಿರ್ದೇಶಕ ಸಿ.ಎಸ್.ಪಾಟೀಲ್​ ತಿಳಿಸಿದ್ದಾರೆ. ಶೀಘ್ರದಲ್ಲೇ ಮುಂಗಾರು ದುರ್ಬಲವಾಗುವ ಸಾಧ್ಯತೆ ಇದ್ದು, ನಂತರ ಮಳೆಯ ಅಬ್ಬರ ಇಳಿಮುಖವಾಗಲಿದೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ಜೈಲು ಗೋಡೆ ಕುಸಿದು 22 ಕೈದಿಗಳಿಗೆ ಗಾಯ; ಮಳೆಯಿಂದಾದ ಅವಘಡವೆಂದ ಪೊಲೀಸ್ ಅಧಿಕಾರಿ

(Karnataka Weather Light Rainfall across state for next 2 to 3 days)

Published On - 10:01 am, Sun, 1 August 21

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ