ಕರ್ನಾಟಕ ಹವಾಮಾನ ವರದಿ: ಕೊಂಚ ತಗ್ಗಿದ ಮಳೆಯ ಅಬ್ಬರ, ಮುಂದಿನ 2-3 ದಿನಗಳ ವಾತಾವರಣ ಹೇಗಿರಲಿದೆ?

ಮಲೆನಾಡು ಹಾಗೂ ಕರಾವಳಿಯಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ.

ಕರ್ನಾಟಕ ಹವಾಮಾನ ವರದಿ: ಕೊಂಚ ತಗ್ಗಿದ ಮಳೆಯ ಅಬ್ಬರ, ಮುಂದಿನ 2-3 ದಿನಗಳ ವಾತಾವರಣ ಹೇಗಿರಲಿದೆ?
ಕರ್ನಾಟಕ ರಾಜ್ಯ ಹವಮಾನ ವರದಿ
Follow us
TV9 Web
| Updated By: Skanda

Updated on: Jul 31, 2021 | 8:56 AM

ಬೆಂಗಳೂರು: ಕರ್ನಾಟಕದಲ್ಲಿ ಅಬ್ಬರಿಸಿ ಜನ ಜೀವನವನ್ನು ಅಸ್ತವ್ಯಸ್ತಗೊಳಿಸಿದ ಮಳೆ ಇದೀಗ ಕೊಂಚ ಸಾವರಿಸಿಕೊಳ್ಳುತ್ತಿರುವಂತೆ ಕಾಣುತ್ತಿದೆ. ಕಳೆದ ಹತ್ತು ಹದಿನೈದು ದಿನಗಳಿಂದ ನಿರಂತರವಾಗಿ ಸುರಿದ ಧಾರಾಕಾರ ಮಳೆಗೆ ಬೇಸತ್ತಿದ್ದ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ನಿಟ್ಟುಸಿರು ಬಿಡುತ್ತಿದ್ದಾರೆ. ಆದರೂ, ದಿನದ ಕೆಲ ಹೊತ್ತು ಜೋರಾಗಿಯೇ ಸುರಿಯುತ್ತಿರುವ ಮಳೆ ಇನ್ನೂ 2 ರಿಂದ 3 ದಿನಗಳ ಕಾಲ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ವರದಿಗಳು ತಿಳಿಸಿವೆ. ಮಲೆನಾಡು ಹಾಗೂ ಕರಾವಳಿಯಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ (Heavy Rain) ಎಂದು ಹವಾಮಾನ ವರದಿಗಳು (Weather Report) ಮುನ್ಸೂಚನೆ ನೀಡಿವೆ. ಸದ್ಯದ ಮಾಹಿತಿ ಪ್ರಕಾರ ಶೀಘ್ರದಲ್ಲೇ ಮುಂಗಾರು ದುರ್ಬಲವಾಗುವ ಸಾಧ್ಯತೆ ಕಾಣಿಸುತ್ತಿದ್ದು, ನಂತರ ಮಳೆಯ ಅಬ್ಬರ ಇಳಿಮುಖವಾಗಲಿದೆ ಎನ್ನಲಾಗಿದೆ.

ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಪ್ರಮಾಣದ ಮಳೆ, ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಪ್ರಮಾಣದ ಮಳೆ ಮತ್ತು ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇಂದು ರಾಜಧಾನಿ ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ದಾವಣಗೆರೆ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇತ್ತ ಉತ್ತರ ಒಳನಾಡಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣದೊಂದಿಗೆ ಹಗುರ ಮಳೆಯಾಗುವ ನಿರೀಕ್ಷೆ ಇದೆ. ರಾಜ್ಯದ ಮಲೆನಾಡು ಪ್ರದೇಶಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದ್ದು, ಕರಾವಳಿ ಭಾಗದ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉಡುಪಿ ಜಿಲ್ಲೆಯಾದ್ಯಂತ ಅಧಿಕ ಮಳೆ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ತಿಳಿಸಿವೆ.

ಮುಂದಿನ 4-5 ದಿನಗಳಲ್ಲಿ ರಾಜ್ಯದಲ್ಲಿ ಮುಂಗಾರು ಮಳೆಯ ತೀವ್ರತೆ ಕಡಿಮೆಯಾಗಲಿದ್ದು, ಮಳೆ ಕೊಂಚ ವಿರಾಮ ನೀಡಲಿದೆ ಎಂದು ಭಾರತೀಯ ಹವಾಮಾನ ಇಲಾಖೆ, ಬೆಂಗಳೂರು ನಿರ್ದೇಶಕ ಸಿ.ಎಸ್.ಪಾಟೀಲ್​ ತಿಳಿಸಿದ್ದಾರೆ. ಶೀಘ್ರದಲ್ಲೇ ಮುಂಗಾರು ದುರ್ಬಲವಾಗುವ ಸಾಧ್ಯತೆ ಇದ್ದು, ನಂತರ ಮಳೆಯ ಅಬ್ಬರ ಇಳಿಮುಖವಾಗಲಿದೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: Karnataka Dams Water Level: ಮಳೆ ಆರ್ಭಟ ಕಡಿಮೆ; ರಾಜ್ಯದ ಬಹುತೇಕ ಜಲಾಶಯಗಳ ನೀರಿನ ಮಟ್ಟ ಯಥಾಸ್ಥಿತಿಯಲ್ಲಿ 

Karnataka Rains: ಮಹಾರಾಷ್ಟ್ರದಲ್ಲಿ ಮತ್ತೆ ಮುಂದುವರೆದ ಮಳೆಯ ಅಬ್ಬರ; ಬೆಳಗಾವಿ ಜಿಲ್ಲೆಯಲ್ಲಿ ನೆರೆ ಸಂತ್ರಸ್ತರ ಸ್ಥಿತಿ ಅತಂತ್ರ

(Karnataka Weather Light Rainfall across state for next 2 to 3 days some parts may get Heavy Rain)

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ