Karnataka Weather: ನಿಟ್ಟುಸಿರು ಬಿಟ್ಟ ಕರ್ನಾಟಕ ಜನ; ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ
ಸದ್ಯ ರಾಜ್ಯದಲ್ಲಿ ಎರಡು ಮೂರು ದಿನಗಳಿಂದ ಮಳೆ ಆರ್ಭಟ ತಗ್ಗಿದೆ. ಹೀಗಾಗಿ ಜನರಲ್ಲಿದ್ದ ಪ್ರವಾಹ ಭೀತಿ ಕಡಿಮೆಯಾಗಿದೆ. ಇಂದು (ಜುಲೈ 29) ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು: ಕರ್ನಾಟಕದಲ್ಲಿ ಸುಮಾರು ಹತ್ತು ದಿನಕ್ಕೂ ಹೆಚ್ಚು ಕಾಲ ಮಳೆಯ ಆರ್ಭಟ ಜೋರಾಗಿತ್ತು. ಬೆಳಗಾವಿ, ಮಲೆನಾಡು ಮತ್ತು ಉತ್ತರ ಕನ್ನಡದಲ್ಲಿ ಸುರಿದ ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿತ್ತು. ಸೇತುವೆಗಳು, ರೈತರು ಬೆಳೆದ ಬೆಳೆಗಳು ಜಲಾವೃತವಾಗಿತ್ತು. ಅಲ್ಲಲ್ಲೆ ಭೂಕುಸಿತ ಉಂಟಾಗಿ ರಸ್ತೆಗಳು ಬಂದ್ ಆಗಿದ್ದವು. ಅಲ್ಲದೇ ಏಕಾಏಕಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಹಳ್ಳಗಳಲ್ಲಿ ಜನರು ಕೊಚ್ಚಿ ಹೋಗಿದ್ದರು. ಅಲ್ಲದೇ ನೀರಿನ ರಭಸಕ್ಕೆ ಮೂಕ ಪ್ರಾಣಿಗಳು ನೋಡ ನೋಡತ್ತಿದ್ದಂತೆ ಕೊಚ್ಚಿ ಹೋಗ್ಗಿದ್ದವು.
ಸದ್ಯ ರಾಜ್ಯದಲ್ಲಿ ಎರಡು ಮೂರು ದಿನಗಳಿಂದ ಮಳೆ ಆರ್ಭಟ ತಗ್ಗಿದೆ. ಹೀಗಾಗಿ ಜನರಲ್ಲಿದ್ದ ಪ್ರವಾಹ ಭೀತಿ ಕಡಿಮೆಯಾಗಿದೆ. ಇಂದು (ಜುಲೈ 29) ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಬಹುದು ಎಂದು ಹವಮಾನ ವರದಿಗಳು ತಿಳಿಸಿವೆ.
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೆಂದ್ರ ತಿಳಿಸಿದೆ. ಇನ್ನು ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕೊಂಚ ಮಳೆಯಾಗಬಹುದು. ಮಲೆನಾಡು ಭಾಗಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇನ್ನು ಕರಾವಳಿ ಭಾಗಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಡನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಬಹುದು. ಹಾವೇರಿ, ಗದಗ, ವಿಜಯನಗರ, ಧಾರವಾಡ, ಬೀದರ್, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿರುವ ಕಾರಣ ರಾಮನಗರ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದೆ.
ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆ, ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧರಣ ಮಳೆ, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧರಣ ಮಳೆ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. pic.twitter.com/hEwljaYBwk
— KSNDMC (@KarnatakaSNDMC) July 28, 2021
ಇದನ್ನೂ ಓದಿ
Karnataka Weather Report: ಕರ್ನಾಟಕದ ಬಹುತೇಕ ಕಡೆ ಮುಂಗಾರು ದುರ್ಬಲ; ಕರಾವಳಿಯಲ್ಲಿ ಮುಂದುವರಿಯಲಿರುವ ಮಳೆ
Karnataka Covid Update: ಕರ್ನಾಟಕದಲ್ಲಿ ಹೊಸದಾಗಿ 1,531 ಕೊರೊನಾ ಕೇಸ್ ಪತ್ತೆ; 19 ಮಂದಿ ಸಾವು
(Karnataka Weather report chance of some rain in the coastal and Malanad districts)