Karnataka weather: ಬೆಂಗಳೂರು ಸೇರಿ ರಾಜ್ಯದ ಅನೇಕ ಕಡೆ ನ.9ರ ವರೆಗೂ ಮಳೆ ಸಾಧ್ಯತೆ
ಬೆಂಗಳೂರು ಸುತ್ತಮುತ್ತ ಮೂರು ದಿನ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ನವೆಂಬರ್ 4ರಿಂದ ಐದು ದಿನಗಳ ಕಾಲ ಮಳೆಯಾಗೋ ಸಾಧ್ಯತೆ ಇದೆ. ಕೆಲ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 48 ಗಂಟೆಗಳು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.
ಬೆಂಗಳೂರು, ನ.04: ಬೆಂಗಳೂರು ಸೇರಿದಂತೆ ರಾಜ್ಯದ ವಿವಿದೆಡೆ ಭಾರೀ ಮಳೆಯಾಗುವ ಸಾಧ್ಯೆತೆಯಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ (Karnataka Rains). ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಪೂರ್ವ ದಿಕ್ಕಿನಿಂದ ಬೀಸುವ ಗಾಳಿಯಲ್ಲಿ ಹೆಚ್ಚು ತೇವಾಂಶದ ಪ್ರಮಾಣವಿರಲಿದ್ದು ಮಂಡ್ಯ, ಮೈಸೂರು, ಚಾಮರಾಜನಗರ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ನ.9ರ ವರೆಗೂ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಗಳೂರು, ಶಿವಮೊಗ್ಗ, ಬೆಳಗಾವಿ, ಉಡುಪಿ, ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಇಂದಿನಿಂದ (ನ. 04) ಕರಾವಳಿ, ಪಶ್ಚಿಮ ಘಟ್ಟದ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಇಡೀ ರಾಜ್ಯದಲ್ಲಿ 3 ವಾರಗಳಿಗೆ ವಾಡಿಕೆಯಷ್ಟು ಮಳೆಯಾಗುವ ನಿರೀಕ್ಷೆ ಇದೆ.
ಬೆಂಗಳೂರು ಸುತ್ತಮುತ್ತ ಮೂರು ದಿನ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ನವೆಂಬರ್ 4ರಿಂದ ಐದು ದಿನಗಳ ಕಾಲ ಮಳೆಯಾಗೋ ಸಾಧ್ಯತೆ ಇದೆ. ಕೆಲ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: Karnataka weather: ರಾಜ್ಯದಲ್ಲಿ ನವೆಂಬರ್ 4ರಿಂದ 8ರವರೆಗೂ ಭಾರೀ ಮಳೆ ಮುನ್ಸೂಚನೆ
ನವೆಂಬರ್ 5ರಂದು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಸಂಜೆ/ರಾತ್ರಿಯ ವೇಳೆಗೆ ಕೆಲವು ಕಡೆಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮುಂದಿನ 48 ಗಂಟೆಗಳು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.
ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ