Karnataka Weather: ಕರ್ನಾಟಕದ ಹಲವು ಕಡೆ ಭಾರೀ ಮಳೆ; ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

| Updated By: sandhya thejappa

Updated on: Aug 05, 2021 | 9:04 AM

ರಸ್ತೆಗಳು, ಸೇತುವೆಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದವು. ರಾಜ್ಯದಲ್ಲಿ ಅದರಲ್ಲೂ ಬೆಳಗಾವಿ, ಉತ್ತರ ಕನ್ನಡ, ಮಲೆನಾಡು ಭಾಗದ ಜನರ ಸ್ಥಿತಿ ಈ ಬಾರಿ ಮಳೆಯಿಂದ ಅತ್ಯಂತ ಹೀನಾಯವಾಗಿದೆ.

Karnataka Weather: ಕರ್ನಾಟಕದ ಹಲವು ಕಡೆ ಭಾರೀ ಮಳೆ; ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಮಳೆಯ ಸಾಂಕೇತಿಕ ಚಿತ್ರ
Follow us on

ಬೆಂಗಳೂರು: ರಾಜ್ಯದಲ್ಲಿ ಸುಮಾರು 10 ದಿನಕ್ಕೂ ಹೆಚ್ಚು ಕಾಲ ಸುರಿದ ಭಾರೀ ಮಳೆಯಿಂದ (Heavy Rains) ಅವಾಂತರವೇ ಸೃಷ್ಟಿಯಾಗಿತ್ತು. ಏಕಾ ಏಕಿ ನದಿಗಳು ಉಕ್ಕಿದ್ದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿತ್ತು. ನೋಡ ನೋಡುತ್ತಿದ್ದಂತೆ ಮೂಕ ಪ್ರಾಣಿಗಳು ಕೊಚ್ಚಿ ಹೋಗ್ಗಿದ್ದವು. ಜನರು ಜೀವ ಒಂದಿದ್ದರೆ ಹೇಗೋ ಬದುಕಬಹುದು ಅಂತ ಮನೆಗಳನ್ನು ಬಿಟ್ಟು ಕಾಳಜಿ ಕೇಂದ್ರಕ್ಕೆ ಹೋದರು. ವರ್ಷಪೂರ್ತಿ ಬೆವರು ಸುರಿಸಿ ಬೆಳದಿದ್ದ ಬೆಳೆ ಪ್ರವಾಹಕ್ಕೆ ಕೊಚ್ಚಿ ಹೋಗಿತ್ತು. ರಸ್ತೆಗಳು, ಸೇತುವೆಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದವು. ರಾಜ್ಯದಲ್ಲಿ ಅದರಲ್ಲೂ ಬೆಳಗಾವಿ, ಉತ್ತರ ಕನ್ನಡ, ಮಲೆನಾಡು ಭಾಗದ ಜನರ ಸ್ಥಿತಿ ಈ ಬಾರಿ ಮಳೆಯಿಂದ ಅತ್ಯಂತ ಹೀನಾಯವಾಗಿದೆ.

ಇಷ್ಟೆಲ್ಲ ಅವಾಂತರ ಸೃಷ್ಟಿಯಾಗಿದ್ದು ಕೇವಲ 10 ರಿಂದ 15 ದಿನಗಳ ಕಾಲ ಸುರಿದ ಮಳೆಯಲ್ಲಿ. ಅಂದರೆ ಸುಮಾರು 15 ದಿನಗಳ ಹಿಂದೆ. ಕಳೆದ 15 ದಿನಗಳಿಂದ ಮಳೆರಾಯನ ಆರ್ಭಟ ಕಡಿಮೆಯಾಗಿತ್ತು. ಮಳೆ ಕೊಂಚ ವಿರಾಮ ನೀಡಿದೆ ಅಂತ ಜನರು ನಿಟ್ಟಿಸಿರುವ ಬಿಡುತ್ತಿದ್ದಂತೆ, ನಿನ್ನೆಯಿಂದ ವರುಣ ಮತ್ತೆ ತನ್ನ ಆರ್ಭಟ ಮುಂದುವರಿಸಿದ್ದಾನೆ. ನಿನ್ನೆಯಿಂದ ಮಲೆನಾಡು ಮತ್ತ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.

ಇಂದಿನಿಂದ (ಆಗಸ್ಟ್ 5) ಆಗಸ್ಟ್ 8ರ ವರೆಗೆ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಹಳದಿ ಅಲರ್ಟ್ (Yellow Alert) ಘೊಷಿಸಲಾಗಿದೆ.

ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಇಂದು ಚದುರಿದಂತೆ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡು ಜಿಲ್ಲೆಗಳಾದ ಬೀದರ್, ಧಾರವಾಡ, ಗದಗ, ಬಾಗಲಕೋಟೆ, ಹಾವೇರಿ, ಬೆಳಗಾವಿ ಮತ್ತು ವಿಜಯನಗರದಲ್ಲಿ ಸಾಧಾರಣ ಮಳೆಯಾಗುತ್ತದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ತುಮಕೂರು, ರಾಮನಗರ, ದಾವಣಗೆರೆ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹಗುರ ಮಳೆಯಾಗಬಹುದೆಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ. ರಾಜ್ಯದ ರಾಜಧಾನಿ ಬೆಂಗಳೂರಿನಲ್ಲೂ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿದೆ. ಇಂದು ಕೂಡ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ.

ಇದನ್ನೂ ಓದಿ

Health Tips: ಮಳೆಗಾಲದಲ್ಲಿ ಕಾಯಿಲೆಗೆ ಗುರಿಯಾಗುವ ಸಾಧ್ಯತೆಗಳು ಹೆಚ್ಚು, ಹೀಗಾಗಿ ಈ 5 ಆಹಾರಗಳ ಬಗ್ಗೆ ಗಮನಹರಿಸಿ

Karnataka Dams Water Level: ಮುಂಗಾರು ಅಲ್ಲಲ್ಲಿ ಜೋರು; ರಾಜ್ಯದ 12 ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ

(Karnataka Weather Report It is raining heavily in Karnataka from yesterday)