Karnataka Weather: ಬೆಂಗಳೂರು, ಕರಾವಳಿ, ಮಲೆನಾಡು ಭಾಗದಲ್ಲಿ ಇಂದು ಮಳೆ ಸಾಧ್ಯತೆ; ಕೆಲವೆಡೆ ಯೆಲ್ಲೋ ಅಲರ್ಟ್​

| Updated By: Skanda

Updated on: Jul 27, 2021 | 8:36 AM

Karnataka Rains: ಮುಂದಿನ 4-5 ದಿನಗಳಲ್ಲಿ ರಾಜ್ಯದಲ್ಲಿ ಮುಂಗಾರು ಮಳೆಯ ತೀವ್ರತೆ ಕಡಿಮೆಯಾಗಲಿದ್ದು, ವಾತಾವರಣ ಕೊಂಚ ಬದಲಾಗಿ ಮಳೆ ಬಿಡುವು ನೀಡುವ ಸಾಧ್ಯತೆ ಇದೆ.

Karnataka Weather: ಬೆಂಗಳೂರು, ಕರಾವಳಿ, ಮಲೆನಾಡು ಭಾಗದಲ್ಲಿ ಇಂದು ಮಳೆ ಸಾಧ್ಯತೆ; ಕೆಲವೆಡೆ ಯೆಲ್ಲೋ ಅಲರ್ಟ್​
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ಕರ್ನಾಟಕದಲ್ಲಿ ಸುಮಾರು ಎರಡು ವಾರಕ್ಕೂ ಹೆಚ್ಚು ಕಾಲ ಧಾರಾಕಾರವಾಗಿ ಸುರಿದ ಮಳೆ (Heavy Rain) ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿ ಇದೀಗ ಕೊಂಚ ಶಾಂತವಾದಂತೆ ಕಾಣುತ್ತಿದೆ. ಮಲೆನಾಡು, ಕರಾವಳಿ ಹಾಗೂ ಉತ್ತರ ಕರ್ನಾಟಕ ಭಾಗದ ಜನರ ನಿದ್ದೆಗೆಡಿಸುವಂತೆ ಸುರಿದ ಮಳೆಯು ಪ್ರವಾಹ, ಭೂ ಕುಸಿತ, ಬೆಳೆ ನಾಶಕ್ಕೆ ಕಾರಣವಾಗಿ ಜನಜೀವನವನ್ನೇ ಅಸ್ತವ್ಯಸ್ತ ಮಾಡಿದೆ. ನದಿ, ಹಳ್ಳ, ಕೊಳ್ಳಗಳು ತುಂಬಿ ಹರಿದ ಕಾರಣ ಹಲವೆಡೆ ವಸತಿ ಪ್ರದೇಶಕ್ಕೆ ನೀರುನುಗ್ಗಿ ಮನೆಗಳು ಜಲಾವೃತಗೊಂಡು (Flood) ಜನರು ಸಾಕಷ್ಟು ಸಮಸ್ಯೆ ಅನುಭವಿಸಿದ್ದಾರೆ. ಆದರೆ, ಇದೀಗ ಮಳೆಯ ಆರ್ಭಟ ತಗ್ಗಿದಂತೆ ಕಂಡುಬಂದರೂ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ ಹವಾಮಾನ ವರದಿಗಳು (Weather Report) ಎಚ್ಚರಿಸಿವೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಭಾಗದಲ್ಲಿ ಇಂದು ಅಧಿಕ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಕೂಡಾ ಮಳೆ ಸುರಿಯುವ ಸಂಭವವಿದೆ. ದಾವಣಗೆರೆ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ವರದಿಗಳು ತಿಳಿಸಿವೆ.

ಮುಂದಿನ ಎರಡು ದಿನ ರಾಜಧಾನಿ ಬೆಂಗಳೂರಿನಲ್ಲಿ ಸಹ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ಕೊಟ್ಟಿದೆ. ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆಯಾಗುವ ಜತೆಜತೆಗೆ ಮಲೆನಾಡು ಭಾಗದ ಜಿಲ್ಲೆಗಳಲ್ಲೂ ಮಳೆ ಸುರಿಯಲಿದೆ ಎನ್ನಲಾಗಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ನಿರೀಕ್ಷೆ ಇದೆ.

ರಾಜ್ಯದ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ. ಉಡುಪಿ ಜಿಲ್ಲೆಯಾದ್ಯಂತ ಅಧಿಕ ಮಳೆಯಾದರೆ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಸದ್ಯ ಈ ಎಲ್ಲಾ ಕರಾವಳಿ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಮುಂದಿನ 4-5 ದಿನಗಳಲ್ಲಿ ರಾಜ್ಯದಲ್ಲಿ ಮುಂಗಾರು ಮಳೆಯ ತೀವ್ರತೆ ಕಡಿಮೆಯಾಗಲಿದ್ದು, ವಾತಾವರಣ ಕೊಂಚ ಬದಲಾಗಿ ಮಳೆ ಬಿಡುವು ನೀಡುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ನಿರ್ದೇಶಕ ಸಿ.ಎಸ್​.ಪಾಟೀಲ್​ ತಿಳಿಸಿದ್ದಾರೆ.

(Karnataka Weather Report light rainfall in Bengaluru while Coastal Karnataka may get slightly high rain)

ಇದನ್ನೂ ಓದಿ:
Karnataka Dams Water Level: ಸದ್ಯಕ್ಕೆ ಮಳೆ ಕಡಿಮೆಯಾಗುತ್ತಿದೆ, ವಾರಾಂತ್ಯ ಮತ್ತೊಮ್ಮೆ ಭರ್ಜರಿ ಮಳೆ; ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ 

Dates Health Benefits: ಮಳೆಗಾಲದ ಸಮಯದಲ್ಲಿ ಆರೋಗ್ಯ ಸುಧಾರಣೆಗೆ ಖರ್ಜೂರ ಒಳ್ಳೆಯದು- ತಜ್ಞರ ಸಲಹೆ